ಸ್ಯಾಂಡಲ್ವುಡ್ನಲ್ಲಿ ಕ್ಯಾಚಿ ಟೈಟಲ್ಗಳುಳ್ಳ ಹೊಸಬರ ಸಿನಿಮಾಗಳು ಮೂಡಿ ಬರುತ್ತಿವೆ. ಸ್ಟಾರ್ ಸಿನಿಮಾಗಳ ಜೊತೆ ಜೊತೆಗೆ ಪ್ರತಿಭಾನ್ವಿತರನ್ನೊಳಗೊಂಡ ಹೊಸಬರ ತಂಡದ ಆಗಮನ ಮುಂದುವರಿದಿದೆ. ಕೆಲವೇ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವವರು ಕೂಡಾ ಹೊಸ ಪ್ರಯತ್ನಗಳ ಮೂಲಕ ಮತ್ತೆ ಗಮನ ಸೆಳೆಯುತ್ತಿದ್ದಾರೆ.
ಈ ಸಾಲಿನಲ್ಲಿ ನಿರ್ದೇಶಕಿ ಸಂಜೋತ ಭಂಡಾರಿ ಕಥೆ ಬರೆದು ನಿರ್ದೇಶಿಸಿರುವ 'ಲಂಗೋಟಿ ಮ್ಯಾನ್' ಬಿಡುಗಡೆಗೆ ಸಜ್ಜಾಗುತ್ತಿದೆ. ಚಿತ್ರದ ಟೀಸರ್ ಇತ್ತೀಚೆಗೆ ಅನಾವರಣಗೊಂಡಿತು. ನಟ ಶರಣ್ ವಿಭಿನ್ನ ಕಥಾಹಂದರದ ಚಿತ್ರದ ಟೀಸರ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಕೋರಿದರು.
ಕಾರ್ಯಕ್ರಮದಲ್ಲಿ ಮೊದಲಿಗೆ ಮಾತನಾಡಿದ ನಿರ್ದೇಶಕಿ ಸಂಜೋತ ಭಂಡಾರಿ, ''ನಾನು ಹತ್ತು ವರ್ಷಗಳ ಹಿಂದೆ ಮಿರ್ಚಿ ಮಂಡಕ್ಕಿ ಖಡಕ್ ಚಾಯ್ ಚಿತ್ರ ನಿರ್ದೇಶಿಸಿದ್ದೆ. ಇದು ಎರಡನೇ ಚಿತ್ರ. ನಾನು ಬೇರೊಂದು ಚಿತ್ರದ ಕಥೆ ಮಾಡುತ್ತಿದ್ದ ಸಂದರ್ಭ ಈ ಕಾನ್ಸೆಪ್ಟ್ ಬಂತು. ಆ ಚಿತ್ರದ ಕಥೆ ಮಾಡುತ್ತಿದ್ದಾಗಲೂ ನನಗೆ ಇದೇ ಕಥೆ ತಲೆಗೆ ಬರುತ್ತಿತ್ತು. ಕೊನೆಗೆ ಲಂಗೋಟಿ ಮ್ಯಾನ್ ಸಿನಿಮಾ ಸ್ವರೂಪ ಪಡೆದುಕೊಂಡಿತು. ಈ ಚಿತ್ರದಲ್ಲಿ ನಿಜವಾದ ಹೀರೋ ಅಂದರೆ ಲಂಗೋಟಿನೇ. ಕಥೆ ಹಾಗೂ ಸಂಭಾಷಣೆಯಲ್ಲೂ ಅನೇಕ ಮಿತ್ರರು ಸಹಾಯ ಮಾಡಿದ್ದಾರೆ. ಚಿತ್ರ ಗೆಲುವ ವಿಶ್ವಾಸ ನನಗಂತೂ ಇದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಶರಣ್ ಅವರಿಗೆ ವಿಶೇಷ ಕೃತಜ್ಞತೆಗಳು'' ಎಂದು ತಿಳಿಸಿದರು.
ನಟ ಶರಣ್ ಮಾತನಾಡಿ, ''ಈ ಸಮಾರಂಭಕ್ಕೆ ಬಂದು ನಿರ್ದೇಶಕರ ಮಾತು ಕೇಳಿದ ಮೇಲೆ ಅವರಿಗೆ ಚಿತ್ರದ ಮೇಲಿರುವ ಭರವಸೆ ಹಾಗೂ ತಾವೊಬ್ಬರೇ ಕ್ರೆಡಿಟ್ ತೆಗೆದುಕೊಳ್ಳದೇ ಚಿತ್ರತಂಡದ ಪ್ರತಿಯೊಬ್ಬರನ್ನು ಪರಿಚಯಿಸಿದ ರೀತಿ ಕಂಡು ಸಂತೋಷವಾಯಿತು. ಈಗಂತೂ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನೇ ಜನ ಹೆಚ್ಚು ಇಷ್ಟಪಡುತ್ತಿದ್ದಾರೆ. ಆ ಸಾಲಿಗೆ ಲಂಗೋಟಿ ಮ್ಯಾನ್ ಸಹ ಸೇರಲಿ" ಎಂದು ಶುಭ ಹಾರೈಸಿದರು.
ಇದನ್ನೂ ಓದಿ: ಸಾಂಪ್ರದಾಯಿಕ ಶೈಲಿಯಲ್ಲಿ ಬೇಬಿಬಂಪ್ ಫೋಟೋಶೂಟ್ ಮಾಡಿಸಿದ ಹರ್ಷಿಕಾ ಪೂಣಚ್ಚ: ನಟಿಯ ವಿಡಿಯೋ ನಿಮಗಾಗಿ - Harshika Poonacha
ಯುವ ಪ್ರತಿಭೆ ಆಕಾಶ್ ರಾಂಬೊ, ಧೀರೇಂದ್ರ, ಮಹಾಲಕ್ಷ್ಮಿ, ಹುಲಿ ಕಾರ್ತಿಕ್, ಸಂಹಿತ ವಿನ್ಯ, ಗಿಲ್ಲಿ ನಟ, ಸ್ನೇಹ ಋಷಿ, ಪವನ್, ಆಟೋ ನಾಗರಾಜ್ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ. ತನು ಟಾಕೀಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಲಂಗೋಟಿ ಮ್ಯಾನ್ ಚಿತ್ರದ ಟೀಸರ್ ಹಾಗೂ ಪೋಸ್ಟರ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಟೀಸರ್ ನೋಡಿದಾಗ ಮನೋರಂಜನಾ ಪ್ರಧಾನ ಚಿತ್ರ ಎನಿಸಿದರೂ, ಚಿತ್ರದ ಮೂಲಕ ಬೇರೊಂದು ವಿಷಯವನ್ನು ಹೇಳ ಹೊರಟಿರುವುದು ತಿಳಿಯುತ್ತದೆ.
ಇದನ್ನೂ ಓದಿ: ಮಾಲಿವುಡ್ ಮೆಗಾಸ್ಟಾರ್ ಮೋಹನ್ ಲಾಲ್ ಆರೋಗ್ಯದಲ್ಲಿ ಚೇತರಿಕೆ - Mohanlal Health Update