ETV Bharat / entertainment

ತೀರದಾಚೆಗೆ ಹಾರಿ ಹೋಗುವಾಸೆ: ಪ್ರೇಕ್ಷಕರ ಮನಸೆಳೆದ 'ಸಾರಾಂಶ' ಸಾಂಗ್​​

Saramsha movie: 'ಸಾರಾಂಶ' ಸಿನಿಮಾದ 'ತೀರದಾಚೆಗೆ ಹಾರಿ ಹೋಗುವಾಸೆ' ಹಾಡು ಅನಾವರಣಗೊಂಡಿದೆ.

Saramsha
ಸಾರಾಂಶ
author img

By ETV Bharat Karnataka Team

Published : Feb 9, 2024, 2:26 PM IST

ಸ್ಯಾಂಡಲ್​​ವುಡ್​ನಲ್ಲಿ ಟೀಸರ್ ಹಾಗೂ ಹಾಡುಗಳಿಂದಲೇ ಸಿನಿಪ್ರಿಯರಲ್ಲಿ ಕುತೂಹಲ ಮೂಡಿಸಿರೋ ಸಿನಿಮಾ 'ಸಾರಾಂಶ'. ಬಹಳ ದಿನಗಳ ನಂತರ ಶೃತಿ ಹರಿಹರನ್ ಮುಖ್ಯಭೂಮಿಕೆಯಲ್ಲಿ ನಟಿಸಿರೋ ಸಾರಾಂಶ ಚಿತ್ರ ಗಾಂಧಿನಗರದಲ್ಲಿ ಒಂದಲ್ಲ ಒಂದು ವಿಚಾರಗಳಿಂದ ಸದ್ದು ಮಾಡುತ್ತಿದೆ.

  • " class="align-text-top noRightClick twitterSection" data="">

ತೀರಾ ಅಪರೂಪವೆಂಬಂಥ ಭಾವವೊಂದನ್ನು ಕೇಳುಗರೆಲ್ಲರಲ್ಲಿ ಮೂಡಿಸುವ ನಿಟ್ಟಿನಲ್ಲಿ 'ಸಾರಾಂಶ' ಚಿತ್ರದ ಹಾಡುಗಳು ಈಗಾಗಲೇ ಗೆದ್ದಿವೆ. ಹಾಡಿನ ಮೂಲಕವೇ ಒಂದಿಡೀ ಸಿನಿಮಾದ ಆಂತರ್ಯದ ಬಗ್ಗೆ ಕುತೂಹಲವೂ ಮೂಡಿಕೊಂಡಿದೆ. ನಾನಾ ಭಾವನೆಗಳನ್ನು ಮನಸಿಗೆ ತುಂಬುವ ಶೈಲಿಯಲ್ಲಿ ಸಂಗೀತ ನಿರ್ದೇಶಕ ಉದಿತ್ ಹರಿತಾಸ್ ಅಕ್ಷರಶಃ ಮೋಡಿ ಮಾಡಿದ್ದಾರೆ. ಇದೀಗ ನಿರ್ದೇಶಕ ಸೂರ್ಯ ವಸಿಷ್ಠ ಹಾಗೂ ಉದಿತ್ ಸಹಯೋಗದ ಮತ್ತೊಂದು ಮೆಲೋಡಿಯಸ್ ಹಾಡು ಅನಾವರಣಗೊಂಡಿದೆ.

'ತೀರದಾಚೆಗೆ ಹಾರಿ ಹೋಗುವಾಸೆ' ಎಂದು ಶುರುವಾಗುವ ಈ ಹಾಡು ಸಾಹಿತ್ಯ - ಸಂಗೀತದ ಹದವಾದ ಸಂಯೋಗದೊಂದಿಗೆ ಹೊಸ ಅನುಭೂತಿಯೊಂದನ್ನು ಪಸರಿಸುವಂತೆ ಮೂಡಿ ಬಂದಿದೆ. ನಿರ್ದೇಶಕ ಸೂರ್ಯ ವಸಿಷ್ಠ ಬರೆದಿರುವ ಸಾಹಿತ್ಯಕ್ಕೆ ಪಂಚಮ್ ಜೀವ ಧ್ವನಿಯಾಗಿದ್ದಾರೆ. ಇದೀಗ ಸಾರಾಂಶ ಚಿತ್ರದ ಕಥೆ ಏನೆಂಬುದರ ಸುತ್ತ ಪ್ರೇಕ್ಷಕ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ. ಅಲ್ಲೊಂದು ಚೆಂದದ ಪ್ರೇಮ ಕಥೆಯೂ ಇದೆ ಎಂಬುದರ ಸ್ಪಷ್ಟ ಸೂಚನೆ ಈ ಹಾಡಿನ ಮೂಲಕ ಸಿಕ್ಕಿದೆ.

ಇದುವರೆಗೂ ಧಾರಾವಾಹಿ, ಸಿನಿಮಾಗಳ ಮೂಲಕ ನಟರಾಗಿದ್ದ ಸೂರ್ಯ ವಸಿಷ್ಠ 'ಸಾರಾಂಶ'ದ ಮೂಲಕ ನಿರ್ದೇಶಕರಾಗಿರೋದು ಗೊತ್ತೇ ಇದೆ. ಆ ಪಾತ್ರದ ಬಗೆಗಿನ ಒಂದಷ್ಟು ಮಾಹಿತಿಗಳನ್ನೂ ಚಿತ್ರತಂಡ ಹಂಚಿಕೊಂಡಿದೆ. ಈಗ ಬಿಡುಗಡೆಯಾಗಿರುವ ಹಾಡಿನಲ್ಲಿ ಸೂರ್ಯ ನಿಭಾಯಿಸಿರುವ ಪಾತ್ರದ ಚಹರೆಗಳು ನಿಚ್ಛಳವಾಗಿ ಕಾಣಿಸಿವೆ. ಸೂರ್ಯ ವಸಿಷ್ಠ ಹಾಗೂ ಶೃತಿ ಹರಿಹರನ್ ಕಾಂಬಿನೇಷನ್​ನಲ್ಲಿ ಮೂಡಿ ಬಂದಿರುವ ಸಾರಾಂಶದ ದೃಶ್ಯಗಳು ಪಾತ್ರಗಳ ಸಣ್ಣ ಪರಿಚಯ ಮಾಡಿಕೊಟ್ಟಿದೆ.

ಇದನ್ನೂ ಓದಿ: 'ಕಾಲೆಳೆದವರೀಗ ಕಾಲ್​ ಶೀಟ್​​ ಕೇಳ್ತಿದ್ದಾರೆ': ಉಪಾಧ್ಯಕ್ಷ ನಟ ಚಿಕ್ಕಣ್ಣ

ಶೃತಿ ಹರಿಹರನ್, ಸೂರ್ಯ ವಸಿಷ್ಠ ಅಲ್ಲದೇ ಆಸಿಫ್ ಕ್ಷತ್ರಿಯಾ, ರವಿ ಭಟ್, ರಾಮ್ ಮಂಜುನಾಥ್, ಸತೀಶ್ ಕುಮಾರ್, ಪೃಥ್ವಿ ಬನವಾಸಿ ಮುಂತಾದವರು ಅಭಿನಯಿಸಿದ್ದಾರೆ. ರವಿ ಕಶ್ಯಪ್ ಮತ್ತು ಆರ್.ಕೆ ನಲ್ಲಮ್ ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಮತ್ತು ಕ್ಲಾಪ್ ಬೋರ್ಡ್ ಪ್ರೊಡಕ್ಷನ್ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಉದಿತ್ ಹರಿತಾಸ್ ಸಂಗೀತ ನಿರ್ದೇಶನ, ಅಪರಾಜಿತ್ ಹಿನ್ನೆಲೆ ಸಂಗೀತ ಮತ್ತು ಪ್ರದೀಪ್ ನಾಯಕ್ ಸಂಕಲನ ಇದೆ. ಸಾರಾಂಶದ ಮೂಲಕ ಅನಂತ್ ಭಾರದ್ವಾಜ್ ಎಂಬ ಪ್ರತಿಭಾನ್ವಿತ ಛಾಯಾಗ್ರಾಹಕ ಪರಿಚಯವಾಗುತ್ತಿದ್ದಾರೆ. ಹಾಡುಗಳು ಸೇರಿದಂತೆ ನಾನಾ ಬಗೆಯಲ್ಲಿ ಸುದ್ದಿಯಲ್ಲಿರುವ ಸಾರಾಂಶ ಇದೇ ಫೆಬ್ರವರಿ 15ರಂದು ತೆರೆಕಾಣಲಿದೆ.

ಇದನ್ನೂ ಓದಿ: ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮಣಿಕಂದನ್ ನಿವಾಸದಲ್ಲಿ ದರೋಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.