ಬೆಂಗಳೂರು: ಕನ್ನಡ ಸಿನಿಮಾ ನಿರ್ಮಾಪಕ ಕೆ.ಮಂಜು ಅವರು ಶನಿವಾರ ಸಂಜೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಕ್ಯಾನಿಂಗ್ ಹಾಗು ಹೃದಯಕ್ಕೆ ಸಂಬಂಧಿಸಿದ ಪರೀಕ್ಷೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಕೆ.ಮಂಜು ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ 'ಕೋಟಿ ನಿರ್ಮಾಪಕ'ರೆಂದು ಕರೆಯಲಾಗುವ ಕೆ.ಮಂಜು, ಡಾ.ವಿಷ್ಣುವರ್ಧನ್, ಶಿವ ರಾಜ್‌ಕುಮಾರ್, ಕಿಚ್ಚ ಸುದೀಪ್, ಉಪೇಂದ್ರ ಹಾಗೂ ಯಶ್ ಅವರಂತಹ ಸ್ಟಾರ್ ನಟರ ಸಿನಿಮಾಗಳನ್ನು ನಿರ್ಮಿಸಿದ್ದಾರೆ.
ಇದನ್ನೂ ಓದಿ: ಅತಿಕ್ರಮ ಪ್ರವೇಶಿಸಿ ಖಾಲಿ ಜಾಗ ಕಬಳಿಸಿದ ಆರೋಪ: ನಟ ಮಯೂರ್ ಪಟೇಲ್ ವಿರುದ್ಧ ಎಫ್ಐಆರ್
ಕೆ.ಮಂಜು ಪುತ್ರ ಶ್ರೇಯಸ್ ಮಂಜು ಮಾಹಿತಿ ನೀಡಿ, ''ತಂದೆಯವರ ಆರೋಗ್ಯ ಚೆನ್ನಾಗಿದೆ. ಯಾವುದೇ ಭಯಪಡುವ ಆತಂಕವಿಲ್ಲ'' ಎಂದು ತಿಳಿಸಿದ್ದಾರೆ.
ಇದುವರೆಗೆ 45ಕ್ಕೂ ಅಧಿಕ ಚಿತ್ರಗಳನ್ನು ನಿರ್ಮಿಸಿರುವ ಕೆ.ಮಂಜು ಸದ್ಯ ಪುತ್ರನ 'ವಿಷ್ಣುಪ್ರಿಯಾ' ಎಂಬ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.
ಇದನ್ನೂ ಓದಿ: ಮನೆಯಲ್ಲಿ ಪ್ರಾಮಾಣಿಕತೆ ಎಂಬ ಪದವೇ ಸೂಟ್ ಆಗೋಲ್ಲ: ಸ್ಪರ್ಧಿಗಳಿಗೆ ಬಿಸಿ ಮುಟ್ಟಿಸಿದ ಕಿಚ್ಚ