ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಮ ಗುರುದತ್ ಗಾಣಿಗ ನಿರ್ಮಾಣ ಹಾಗು ನಿರ್ದೇಶಿಸುತ್ತಿರುವ 'ಕರಾವಳಿ' ಸಿನಿಮಾ ಅಡ್ಡಕ್ಕೆ ಈಗ ಖಡಕ್ ವಿಲನ್ ಎಂಟ್ರಿಯಾಗಿದೆ. ಪ್ರತೀ ಪಾತ್ರವರ್ಗವನ್ನೂ ವಿಭಿನ್ನ ರೀತಿಯಲ್ಲಿ ಪರಿಚಯಿಸುವ ನಿರ್ದೇಶಕ ಗುರುದತ್ ಗಾಣಿಗ ಅವರು ಕರಾವಳಿ ಚಿತ್ರದ ಮತ್ತೊಂದು ಮುಖ್ಯಪಾತ್ರಧಾರಿಯನ್ನು ವಿಶೇಷ ರೀತಿಯಲ್ಲೇ ಪರಿಚಯಿಸಿದ್ದಾರೆ. ಈ ಸಿನಿಮಾದಲ್ಲಿ ಡೈನಾಮಿಕ್ ಪ್ರಿನ್ಸ್ ಎದುರು ಅಬ್ಬರಿಸಲು 'ಮಿಸ್ಟರ್ ದುಬೈ' ಶಿಥಿಲ್ ಪೂಜಾರಿ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಮಂಗಳೂರಿನ ಶಿಥಿಲ್ ಪೂಜಾರಿ ದುಬೈನಲ್ಲಿ ನೆಲೆಸಿದ್ದು ಕರಾವಳಿ ಚಿತ್ರಕ್ಕೆ ಆಡಿಷನ್ ಮೂಲಕ ಆಯ್ಕೆ ಆಗಿದ್ದಾರೆ. ಬೆಸ್ಟ್ ಎಂಟರ್ಟೈನರ್ ದುಬೈ, ಬೆಸ್ಟ್ ಪೀಪಲ್ಸ್ ಚಾಯ್ಸ್ ದುಬೈ, ಬೆಸ್ಟ್ ಫಿಜಿಕ್ಸ್ ದುಬೈ ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಮೊದಲ ಕನ್ನಡಿಗ ಎಂಬ ಖ್ಯಾತಿಯೂ ಶಿಥಿಲ್ ಅವರಿಗಿದೆ.
ಇದೀಗ ಕರಾವಳಿ ಸಿನಿಮಾದಲ್ಲಿ ವಾಲಿ ಎಂಬ ನೆಗೆಟಿವ್ ಶೇಡ್ನಲ್ಲಿ ಶಿಥಿಲ್ ಅಭಿನಯಿಸುತ್ತಿದ್ದು ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿದ್ದಾರೆ. ಎರಡನೇ ಹಂತದ ಚಿತ್ರೀಕರಣಕ್ಕೆ ಇವರು ತಂಡ ಸೇರಿಕೊಳ್ಳಲಿದ್ದಾರೆ. ಶಿಥಿಲ್ ಪೂಜಾರಿ ಅವರ ಲುಕ್ ಮೊದಲ ನೋಟದಲ್ಲೇ ಭರವಸೆ ಮೂಡಿಸುತ್ತಿದೆ.
ಇದನ್ನೂ ಓದಿ: 'ಮೈ ಮ್ಯಾರೇಜ್ ಇಸ್ ಫಿಕ್ಸ್ಡ್' ಅಂತಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್ - Krishnam Pranaya Sakhi Song