ETV Bharat / entertainment

ಸೃಜನ್ ಲೋಕೇಶ್ ನಟಿಸಿ, ನಿರ್ದೇಶಿಸುತ್ತಿರುವ 'ಜಿಎಸ್​ಟಿ' ಚಿತ್ರೀಕರಣ ಪೂರ್ಣ - GST Shooting Completed - GST SHOOTING COMPLETED

ಸೃಜನ್ ಲೋಕೇಶ್ ನಟಿಸಿ, ನಿರ್ದೇಶಿಸುತ್ತಿರುವ 'ಜಿಎಸ್​ಟಿ' ಚಿತ್ರೀಕರಣ ಪೂರ್ಣಗೊಂಡಿದೆ.

Srujan Lokesh starrer 'GST' shooting completed
ಸೃಜನ್ ಲೋಕೇಶ್ ನಟನೆಯ 'ಜಿಎಸ್​ಟಿ' ಚಿತ್ರೀಕರಣ ಪೂರ್ಣ (ETV Bharat)
author img

By ETV Bharat Entertainment Team

Published : Aug 12, 2024, 8:08 PM IST

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುತ್ತಿರುವ 'ಜಿಎಸ್​ಟಿ' ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಸಂದೇಶ್ ಎನ್ ನಿರ್ಮಾಣದ ಈ ಚಿತ್ರದಲ್ಲಿ ಸೃಜನ್ ಲೋಕೇಶ್ ನಾಯಕನಾಗಿ ನಟಿಸುತ್ತಿದ್ದಾರೆ. ನಟನೆ ಮಾತ್ರವಲ್ಲದೇ ಇದೇ ಮೊದಲ ಬಾರಿಗೆ ಡೈರೆಕ್ಟರ್​​​ ಕ್ಯಾಪ್​​​ ತೊಟ್ಟಿದ್ದು, ಶೂಟಿಂಗ್​​ ಮುಕ್ತಾಯವಾಗಿದೆ.

ಕಬಿನಿ ಬಳಿಯ ಸಂದೇಶ್ ಅವರ ಹೊಸ ರೆಸಾರ್ಟ್​​ನಲ್ಲಿ ನಾಯಕ ಸೃಜನ್ ಹಾಗೂ ನಾಯಕಿ ರಜನಿ ಭಾರದ್ವಾಜ್ ನಟಿಸಿದ ಹಾಡೊಂದರ ಚಿತ್ರೀಕರಣ ಹಾಗೂ ಮೈಸೂರಿನಲ್ಲಿ ಸೃಜನ್ ಲೋಕೇಶ್, ಸಂಹಿತ ವಿನ್ಯ, ತಬಲನಾಣಿ, ಗಿರೀಶ್ ಶಿವಣ್ಣ, ವಿನೋದ್ ಗೊಬ್ಬರಗಾಲ ಮುಂತಾದವರು ಅಭಿನಯಿಸಿದ ಮತ್ತೊಂದು ಹಾಡಿನ ಚಿತ್ರೀಕರಣ ನಡೆದಿದೆ.

Srujan Lokesh starrer 'GST' shooting completed
ಸೃಜನ್ ಲೋಕೇಶ್ ನಟನೆಯ 'ಜಿಎಸ್​ಟಿ' ಚಿತ್ರೀಕರಣ ಪೂರ್ಣ (ETV Bharat)

ಸೃಜನ್ ಲೋಕೇಶ್​​ಗೆ ನಾಯಕಿಯಾಗಿ ರಜನಿ ಭಾರದ್ವಾಜ್ ನಟಿಸಿದ್ದಾರೆ. ಪ್ರಮೋದ್ ಶೆಟ್ಟಿ, ಗಿರಿಜಾ ಲೋಕೇಶ್, ಶೋಭ್ ರಾಜ್, ಶರತ್ ಲೋಹಿತಾಶ್ವ, ನಿವೇದಿತಾ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ, ಮಾಸ್ಟರ್ ಸುಕೃತ್ ಸೇರಿದಂತೆ ಮುಂತಾದವರು ಈ ಸಿನಿಮಾದ ತಾರಾಬಳಗದಲ್ಲಿದ್ದಾರೆ.

ಸೃಜನ್ ಲೋಕೇಶ್ ಹಾಗೂ ಚಂದನ್ ಶೆಟ್ಟಿ ಹಾಡುಗಳನ್ನು ಬರೆದಿದ್ದಾರೆ. ಮುರುಗಾನಂದ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಎರಡು ಹಾಡುಗಳ ಚಿತ್ರೀಕರಣದೊಂದಿಗೆ ಜಿಎಸ್​​ಟಿ ಚಿತ್ರದ ಚಿತ್ರೀಕರಣ ಮುಕ್ತಾಯ ಆಗಿದೆ. ಹಾರರ್ ಕಾಮಿಡಿ ಜಾನರ್​​ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸಿಜಿ ಕಾರ್ಯ ನಡೆಯುತ್ತಿದೆ. ಚಿತ್ರವನ್ನು ಆದಷ್ಟು ಬೇಗ ತೆರೆಗೆ ತರುವುದಾಗಿ ನಿರ್ಮಾಪಕ ಸಂದೇಶ್ ತಿಳಿಸಿದ್ದಾರೆ.

ಇದನ್ನೂ ಓದಿ: 'ನಿಮ್ಮ ಮನೆಮನಗಳಿಗೆ ಬರುತ್ತಿರುವ ಅಣ್ಣಯ್ಯನಿಗೆ ಶುಭವಾಗಲಿ': ಪ್ರಮೋದ್​​​ ನಿರ್ಮಾಣದ ಧಾರವಾಹಿಗೆ ರಿಷಬ್​ ಶೆಟ್ಟಿ ಸಾಥ್ - Annayya Serial

ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಆದರೆ ಅವರ ಪಾತ್ರ ಏನೆಂಬುದನ್ನು ನಿರ್ದೇಶಕ ಸೃಜನ್ ಲೋಕೇಶ್ ಅವರಿನ್ನೂ ಬಹಿರಂಗಪಡಿಸಿಲ್ಲ. ಚಿತ್ರದಲ್ಲಿ ತಾಯಿ ಗಿರಿಜಾ ಲೋಕೇಶ್, ಮಗ ಸೃಜನ್​​ ಹಾಗೂ ಸೃಜನ್ ಅವರ ಪುತ್ರ ಸುಕೃತ್ ಮೂವರೂ ಅಭಿನಯಿಸಿದ್ದಾರೆ. ಅಜ್ಜಿ, ಮಗ ಹಾಗೂ ಮೊಮ್ಮಗ ಸೇರಿ ಈ ಮೂವರನ್ನೂ ಒಟ್ಟಿಗೆ ಒಂದೇ ಚಿತ್ರದಲ್ಲಿ ತೆರೆ ಮೇಲೆ ನೋಡಬಹುದಾಗಿದೆ. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ ತಾಯಿ ಹಾಗೂ ಮಗನಿಗೆ ಆ್ಯಕ್ಷನ್ ಕಟ್ ಹೇಳಿರುವುದು ಚಿತ್ರದ ಗಮನಾರ್ಹ ಸಂಗತಿ. ಮನೋರಂಜನೆಯೇ ಪ್ರಧಾನವಾಗಿರುವ ಜಿಎಸ್​ಟಿ ಚಿತ್ರಕ್ಕೆ ಘೋಸ್ಟ್ ಇನ್ ಟ್ರಬಲ್ ಎಂಬ ಅಡಿಬರಹ ಇದೆ. ಹೀಗೆ ಹಲವು ವಿಶೇಷತೆಗಳನ್ನೊಳಗೊಂಡ ಚಿತ್ರವನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲು ಚಿತ್ರತಂಡ ತಯಾರಿ ನಡೆಸುತ್ತಿದೆ.

ಇದನ್ನೂ ಓದಿ: ಹ್ಯಾಟ್ರಿಕ್ ಹೀರೋ ಅಭಿನಯದ 'ಭೈರತಿ ರಣಗಲ್' ಟೈಟಲ್​ ಟ್ರ್ಯಾಕ್​ಗೆ ಫ್ಯಾನ್ಸ್ ಫಿದಾ - Bhairathi Ranagal Title Song

ಚಂದನ್ ಶೆಟ್ಟಿ ಸಂಗೀತ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಗುಂಡ್ಲುಪೇಟೆ ಸುರೇಶ್ ಛಾಯಾಗ್ರಹಣ ನಿರ್ವಹಿಸಿರುವ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ತೇಜಸ್ವಿ ಕೆ.ನಾಗ್ ಸಹನಿರ್ದೇಶಕರು. ಸದ್ಯ ಶೂಟಿಂಗ್ ಮುಗಿಸಿರೋ ಜಿಎಸ್‌ಟಿ ಸದ್ಯದಲ್ಲೇ ತೆರೆಗೆ ಬರಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.