ETV Bharat / entertainment

'ವಿದ್ಯಾರ್ಥಿ ವಿದ್ಯಾರ್ಥಿನಿಯರೇ' ಚಿತ್ರದ ಸ್ಟೂಡೆಂಟ್ ಪಾರ್ಟಿ ಸಾಂಗ್ ಬಿಡುಗಡೆ - Students Party Song - STUDENTS PARTY SONG

'ವಿದ್ಯಾರ್ಥಿ ವಿದ್ಯಾರ್ಥಿನಿಯರೇ' ಚಿತ್ರದ 'ಸ್ಟೂಡೆಂಟ್ ಪಾರ್ಟಿ' ವಿಡಿಯೋ ಸಾಂಗ್ ಅನಾವರಣಗೊಂಡಿದೆ.

Vidyarthi Vidyarthiniyare Movie team
'ಸ್ಟೂಡೆಂಟ್ ಪಾರ್ಟಿ' ಸಾಂಗ್ ರಿಲೀಸ್ (ETV Bharat)
author img

By ETV Bharat Karnataka Team

Published : Jun 16, 2024, 8:01 AM IST

'ವಿದ್ಯಾರ್ಥಿ ವಿದ್ಯಾರ್ಥಿನಿಯರೇ' ಸ್ಯಾಂಡಲ್​ವುಡ್​ನಲ್ಲಿ ಸಾಕಷ್ಟು ವಿಚಾರಗಳಿಂದ ಗಮನ ಸೆಳೆಯುತ್ತಿರುವ ಹೊಸ ಸಿನಿಮಾ. ಅರುಣ್ ಅಮುಕ್ತ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದೆ. ಚಂದನ್ ಶೆಟ್ಟಿ, ಅಮರ್, ಭಾವನಾ, ಮನಸ್ವಿ, ವಿವಾನ್, ಭವ್ಯ ಮುಖ್ಯಭೂಮಿಕೆಯಲ್ಲಿರುವ ಚಿತ್ರದ 'ಸ್ಟೂಡೆಂಟ್ ಪಾರ್ಟಿ' ವಿಡಿಯೋ ಸಾಂಗ್ ಇತ್ತೀಚೆಗೆ ಬಿಡುಗಡೆಗೊಂಡಿದೆ. ಸಾಂಗ್ ರಿಲೀಸ್ ಈವೆಂಟ್​ನಲ್ಲಿ ಚಿತ್ರತಂಡ ಒಂದಿಷ್ಟು ವಿಚಾರಗಳನ್ನು ಹಂಚಿಕೊಂಡಿತು.

ಸಂಗೀತ ನಿರ್ದೇಶಕ-ನಟ ಚಂದನ್ ಶೆಟ್ಟಿ ಮಾತನಾಡಿದರು. ಹಾಡು ರ್ಯಾಪ್ ಶೈಲಿಯಲ್ಲಿ ಮೂಡಿಬಂದಿದೆ. ಚೇತನ್ ಕುಮಾರ್ ಸಾಹಿತ್ಯಕ್ಕೆ ವಿಜೇತ್ ಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ. ಇದು ವಿಜೇತ್ ಕೃಷ್ಣ ಮತ್ತು ಚಂದನ್ ಶೆಟ್ಟಿ ಕಾಂಬಿನೇಶನ್​ನ ಎರಡನೇ ಸಾಂಗ್​​​. ವಿಜೇತ್ ಕೃಷ್ಣ, ಚಂದನ್ ಶೆಟ್ಟಿ ಮತ್ತು ಚೇತನ್ ಕುಮಾರ್ ದಶಕದ ಹಿಂದೆ ರೂಂಮೇಟ್ಸ್ ಆಗಿದ್ದರಂತೆ. ಈ ಹಿಂದೆ ವಿಜೇತ್ ಮತ್ತು ಚಂದನ್ ಕಾಂಬೋದಲ್ಲಿ ಒಂದೇ ಒಂದು ಪೆಗ್ಗಿಗೆ ಎಂಬ ಹಾಡು ಮೂಡಿ ಬಂದಿತ್ತು. ಅದು ಸೂಪರ್ ಹಿಟ್ ಕೂಡ ಆಗಿತ್ತು. ಈ ಹಾಡೂ ಸಹ ಅದೇ ರೀತಿ ಹಿಟ್ ಆಗಲಿ ಎಂಬ ಆಶಯ ವ್ಯಕ್ತಪಡಿಸಿದರು.

Vidyarthi Vidyarthiniyare Movie team
'ವಿದ್ಯಾರ್ಥಿ ವಿದ್ಯಾರ್ಥಿನಿಯರೇ' ಚಿತ್ರತಂಡ (ETV Bharat)

ಸಾಹಿತ್ಯ ಒದಗಿಸಿರುವ ಚೇತನ್ ಕುಮಾರ್ ಮಾತನಾಡಿ, ವಿಜೇತ್ ಕೃಷ್ಣ ಅವರ ಸಂಗೀತ ಅಂದ್ರೆ ಬಹಳ ಇಷ್ಟ. ಆ ಪ್ರೀತಿಯಿಂದಲೇ ಈ ಹಾಡು ಬರೆದಿದ್ದೇನೆ ಎಂದರು. ಈ ವೇದಿಕೆಯಲ್ಲಿ ಹಾಡಿನಲ್ಲಿ ನಟಿಸಿರುವ ಮನೋಜ್ ವಿವಾನ್, ಮನಸ್ವಿ, ಭಾವನಾ ಅಪ್ಪು, ಅಮರ್ ಕೂಡಾ ಉಪಸ್ಥಿತರಿದ್ದರು. ಚಿತ್ರದಲ್ಲಿ ಚಂದನ್ ಶೆಟ್ಟಿ, ಅಮರ್, ಭಾವನಾ, ಮನಸ್ವಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಸೇರಿದಂತೆ ಮುಂತಾದವರು ನಟಿಸಿದ್ದಾರೆ.

Vidyarthi Vidyarthiniyare Movie team
ಸಾಂಗ್ ರಿಲೀಸ್ ಈವೆಂಟ್​ (ETV Bharat)

ಇದನ್ನೂ ಓದಿ: ಸ್ಯಾಂಡಲ್​​ವುಡ್ 'ಮರ್ಯಾದೆ ಪ್ರಶ್ನೆ' ಅಂತಿದ್ದಾರೆ ಆಲ್ ಓಕೆ! ಇದು ಸಕ್ಕತ್ ಸ್ಟುಡಿಯೋದ ಮತ್ತೊಂದು ಪ್ರಯತ್ನ - Kannada Movie

ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ.ಶಿವಲಿಂಗೇಗೌಡ ಚಿತ್ರವನ್ನು ನಿರ್ಮಿಸಿದ್ದಾರೆ. ಶ್ರೀಕಾಂತ್ ಜಿ.ಕಶ್ಯಪ್ ಕಾರ್ಯಕಾರಿ ನಿರ್ಮಾಪಕ. ಕುಮಾರ್ ಗೌಡ ಛಾಯಾಗ್ರಹಣ ನಿರ್ವಹಿಸಿದ್ದಾರೆ. ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ ಒದಗಿಸಿದ್ದಾರೆ. ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಅರುಣ್ ಸುರೇಶ್ ಈ ಹಾಡಿಗೆ ಕ್ಯಾಮರಾ ಹಿಡಿದಿದ್ದಾರೆ. ಇನ್ನುಳಿದಂತೆ, ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನವಿದೆ. ಚಿತ್ರ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

ಇದನ್ನೂ ಓದಿ: 'ದುಃಖದಿಂದ ಪ್ರೀತಿವರೆಗೆ': ಯೂಟ್ಯೂಬ್‌ನಲ್ಲಿ 400M ವೀಕ್ಷಣೆ ಕಂಡ ಡಿಯರ್ ಕಾಮ್ರೇಡ್ - Dear Comrade

ETV Bharat Logo

Copyright © 2024 Ushodaya Enterprises Pvt. Ltd., All Rights Reserved.