ETV Bharat / entertainment

'ಗಾಡ್ ಪ್ರಾಮಿಸ್' ನಿರ್ದೇಶಿಸಲಿದ್ದಾರೆ 'ಕಾಂತಾರ'ದ ಫಾರೆಸ್ಟ್ ಗಾರ್ಡ್ - Suchan Shetty

'ಗಾಡ್ ಪ್ರಾಮಿಸ್' ಶೀರ್ಷಿಕೆಯ ಸಿನಿಮಾವನ್ನು ಸೂಚನ್ ಶೆಟ್ಟಿ ನಿರ್ದೇಶಿಸಲಿದ್ದಾರೆ.

Suchan Shetty
ಗಾಡ್ ಪ್ರಾಮಿಸ್
author img

By ETV Bharat Karnataka Team

Published : Feb 8, 2024, 12:12 PM IST

ರವಿ ಬಸ್ರೂರ್ ಕನ್ನಡ ಚಿತ್ರರಂಗದ ಬಹುಬೇಡಿಕೆಯ ಸಂಗೀತ ನಿರ್ದೇಶಕರಲ್ಲೋರ್ವರು. ಕೆಜಿಎಫ್ ಸರಣಿ ಸಿನಿಮಾ ಮೂಲಕ ಬಹುದೊಡ್ಡ ಯಶಸ್ಸು ಕಂಡಿರುವ ಇವರು ಬಾಲಿವುಡ್, ಟಾಲಿವುಡ್​​​​ಗೂ ಕಾಲಿಟ್ಟು ಸ್ಟಾರ್ ಹೀರೋಗಳ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ಇವರ ಗರಡಿಯಿಂದ ಬಂದ ಸಾಕಷ್ಟು ಪ್ರತಿಭೆಗಳು ಕನ್ನಡ ಚಿತ್ರರಂಗದಲ್ಲಿ ಒಳ್ಳೆ ಹೆಸರು ಮಾಡುತ್ತಿದ್ದಾರೆ. ಇದೀಗ ಯುವ ಸಿನಿಮೋತ್ಸಾಹಿಗಳು ಸ್ಯಾಂಡಲ್​​ವುಡ್​​ನಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಸೂಚನ್ ಶೆಟ್ಟಿ ಅವರೀಗ ನಿರ್ದೇಶಕರಾಗಿ ಹೊಸ ಪಯಣ ಪ್ರಾರಂಭಿಸಿದ್ದಾರೆ.

ಹೌದು, ಸೂಚನ್ ಶೆಟ್ಟಿ ಅವರೀಗ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ತಮ್ಮ ಚೊಚ್ಚಲ ಪ್ರಯತ್ನದ ಸಿನಿಮಾಗೆ 'ಗಾಡ್ ಪ್ರಾಮಿಸ್' ಎಂಬ ಕ್ಯಾಚಿ ಟೈಟಲ್ ಇಟ್ಟಿದ್ದಾರೆ. ರವಿ ಬಸ್ರೂರ್ ಸಾರಥ್ಯದ ಕಟಕ, ಗಿರ್ಮಿಟ್, ಕಡಲ್ ಸಿನಿಮಾಗಳಿಗೆ ಬಹರಗಾರನಾಗಿ, ಸಹ ನಿರ್ದೇಶಕನಾಗಿ, ನಟನಾಗಿ ಕೆಲಸ ಮಾಡಿರುವ ಸೂಚನ್, ತಮ್ಮ ಈ ಅನುಭವದೊಂದಿಗೆ ನಿರ್ದೇಶನದ ಸಾಹಸಕ್ಕೆ ಕೈ ಹಾಕಿದ್ದಾರೆ. 2022ರ ಕೊನೆಯಲ್ಲಿ ಧೂಳೆಬ್ಬಿಸಿದ್ದ ಪ್ಯಾನ್ ಇಂಡಿಯಾ 'ಕಾಂತಾರ' ಸಿನಿಮಾದಲ್ಲಿ ಫಾರೆಸ್ಟ್ ಗಾರ್ಡ್ ರವಿ ಪಾತ್ರದಲ್ಲಿ, ರವಿ ಬಸ್ರೂರ್ ಅವರ ಕಡಲ್ ಸಿನಿಮಾದಲ್ಲಿ ಖಳನಾಯಕನಾಗಿ ನಟಿಸಿರುವ ಸೂಚನ್ ಶೆಟ್ಟಿ 'ಗಾಡ್ ಪ್ರಾಮಿಸ್' ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಬಡ್ತಿ ಪಡೆಯುತ್ತಿದ್ದಾರೆ.

Suchan Shetty
ಗಾಡ್ ಪ್ರಾಮಿಸ್

ನಮ್ಮ ರಾಜ್ಯದ ಸಂಸ್ಕೃತಿಯನ್ನು ಬಿಂಬಿಸುವಂತಹ ಸಿನಿಮಾ ಮಾಡುವ ಕನಸಿನೊಂದಿಗೆ 2016ರಲ್ಲಿ ಶುರುವಾದ ಮೈತ್ರಿ ಪ್ರೊಡಕ್ಷನ್ ಸೂಚನ್ ಶೆಟ್ಟಿ ಅವರ ಚೊಚ್ಚಲ ಕನಸಿಗೆ ಜೊತೆಯಾಗಿದೆ. ಗಾಡ್ ಪ್ರಾಮಿಸ್ ಸಿನಿಮಾವನ್ನು ಮೈತ್ರಿ ಪ್ರೊಡಕ್ಷನ್ ನಡಿ ಮೈತ್ರಿ ಮಂಜುನಾಥ್ ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಕರಾವಳಿಯ ಭೂಗತ ಕಥೆ ಹಫ್ತಾ ಸಿನಿಮಾವನ್ನು ನಿರ್ಮಿಸಿದ್ದ ಈ ಪ್ರೊಡಕ್ಷನ್​ನ ಎರಡನೇ ಕಾಣಿಕೆ 'ಗಾಡ್ ಪ್ರಾಮಿಸ್'. ಹಳ್ಳಿ ಸೊಗಡನ್ನು ಬಿಂಬಿಸುವ ಟೈಟಲ್ ಪೋಸ್ಟರ್ ಪ್ರೇಕ್ಷಕರ ಕುತೂಹಲ ಹೆಚ್ಚಿಸಿದೆ.

ಇದನ್ನೂ ಓದಿ: ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ನಿರ್ದೇಶಕ ಆರ್​.​​ ಚಂದ್ರು

ಗಾಡ್ ಪ್ರಾಮಿಸ್ ನೈಜ ಘಟನೆಯಿಂದ ಸ್ಫೂರ್ತಿ ಪಡೆದ ಕೌಟುಂಬಿಕ ಹಾಗೂ ಕಾಮಿಡಿ ಕಥಾಹಂದರದ ಸಿನಿಮಾ. ಕಬ್ಜ, ಸಲಾರ್ ಚಿತ್ರಗಳಿಗೆ ಕ್ಯಾಮರಾ ಹಿಡಿದಿದ್ದ ಎಜೆ ಶೆಟ್ಟಿ ಹಾಗೂ ಭುವನ್ ಗೌಡ ಜೊತೆ ಕೆಲಸ ಮಾಡಿರುವ ಗುರುಪ್ರಸಾದ್ ನರ್ನಾಡ್ ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ರವಿ ಬಸ್ರೂರ್ ಜೊತೆ ಸಲಾರ್, ಕೆಜಿಎಫ್ ಸರಣಿ ಚಿತ್ರಗಳಿಗೆ ಕೆಲಸ ಮಾಡಿರುವ ಹಾಗೂ 400ಕ್ಕೂ ಹೆಚ್ಚು ಮ್ಯೂಸಿಕ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿರುವ ಭರತ್ ಮಧುಸೂದನನ್ ಅವರ ಸಂಗೀತ ನಿರ್ದೇಶನವಿದೆ.

Suchan Shetty
ಗಾಡ್ ಪ್ರಾಮಿಸ್

ಇದನ್ನೂ ಓದಿ: ಪಾರ್ಟ್ 2ಗೆ ಪೂರ್ಣಗೊಳ್ಳಲ್ಲ 'ಪುಷ್ಪ': 'ದಿ ರೂಲ್' ಬಳಿಕ ಬರಲಿದೆ 'ದಿ ರೋರ್' - ಪುಷ್ಪ 3 ಲೋಡಿಂಗ್​​?

ಲವ್ ಮಾಕ್ಟೇಲ್-2, ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ, ವಿಕ್ರಾಂತ್ ರೋಣ ಸೇರಿದಂತೆ 50ಕ್ಕೂ ಹೆಚ್ಚು ಸಿನಿಮಾಗಳಿಗೆ ಆನ್ ಲೈನ್ ಎಡಿಟರ್ ಆಗಿ ಕೆಲಸ ಮಾಡಿರುವ, ಖ್ಯಾತ ಸಂಕಲನಕಾರರಾದ ಕೆಎಂ ಪ್ರಕಾಶ್, ರುತ್ವಿಕ್, ಪ್ರತಿಕ್ ಶೆಟ್ಟಿ ಬಳಗದಲ್ಲಿ ದುಡಿದಿರುವ ನವೀನ್ ಶೆಟ್ಟಿ ಈ ಚಿತ್ರದ ಸಂಕಲನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಯಶಸ್ವಿ ತಂತ್ರಜ್ಞರ ಸಿನಿಮಾವಾಗಿರುವ 'ಗಾಡ್ ಪ್ರಾಮಿಸ್' ತಂಡದಲ್ಲಿ ಯಾರೆಲ್ಲಾ ಬಣ್ಣ ಹಚ್ಚುತ್ತಿದ್ದಾರೆ ಎಂಬುದನ್ನು ಚಿತ್ರತಂಡ ಶೀಘ್ರದಲ್ಲೇ ರಿವೀಲ್ ಮಾಡಲಿದೆ. ಮಾರ್ಚ್​​​ನಿಂದ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.