ಕರಾವಳಿ ಪ್ರತಿಭೆ ರೂಪೇಶ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ 'ಜೈ' ಶೀರ್ಷಿಕೆಯ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ನಟ ಸುನೀಲ್ ಶಟ್ಟಿ ಕೂಡಾ ನಟಿಸುತ್ತಿದ್ದಾರೆ. ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಸಲುವಾಗಿ ಇಂದು ಮಂಗಳೂರಿಗೆ ಆಗಮಿಸಿದ್ದು, ಬಾಲಿವುಡ್ ಸ್ಟಾರ್ ನಟನಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಮಂಗಳೂರು ಏರ್ಪೋರ್ಟ್ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸದ್ದು ಮಾಡುತ್ತಿದೆ.
ಎರಡು ದಿನಗಳಿಂದಷ್ಟೇ ಖ್ಯಾತ ನಟ ನಿರ್ದೇಶಕ ರೂಪೇಶ್ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿದ್ದರು. ಎಲ್ಲರೂ ಕಾಯುತ್ತಿದ್ದ ಆ ಕ್ಷಣ ಬಂದೇ ಬಿಟ್ಟಿದೆ. ಫೈನಲಿ ಆ ಇಂಡಿಯನ್ ಸೂಪರ್ ಸ್ಟಾರ್ ಜೈ ತುಳು ಚಿತ್ರದಲ್ಲಿ ನಟಿಸಲು ಬರುತ್ತಿದ್ದಾರೆ. ಲೆಟ್ಸ್ ವೆಲ್ಕಮ್ ದಿ ಲೆಜೆಂಡ್ ಎಂದು ಬರೆದುಕೊಂಡಿದ್ದರು. ಅದರಂತೆ ಇಂದು ಸೂಪರ್ ಸ್ಟಾರ್ ಮಂಗಳೂರಿಗೆ ತಲುಪಿದ್ದಾರೆ.
ಇಂದು ಸ್ವತಃ 'ಜೈ' ಸಿನಿಮಾ ಸಾರಥಿ ರೂಪೇಶ್ ಶೆಟ್ಟಿ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ನಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರು ಬಂದು ತಲುಪಿರುವ ವಿಡಿಯೋ ಹಂಚಿಕೊಂಡಿದ್ದಾರೆ. ಜೊತೆಗೆ, ಅಣ್ಣಾ ಮಂಗಳೂರಿಗೆ ಬಂದಿದ್ದಾರೆ. ಸುನೀಲ್ ಶೆಟ್ಟಿ ಅವರು ಜೈ ಚಿತ್ರೀಕರಣಕ್ಕೆ ಮಂಗಳೂರಿಗೆ ಆಗಮಿಸಿದ್ದಾರೆ ಎಂದು ತಿಳಿಸಿದ್ದಾರೆ.
ಸರಣಿ ಫೋಟೋಗಳನ್ನು ಹಂಚಿಕೊಂಡ ರೂಪೇಶ್ ಶೆಟ್ಟಿ, ಬಾಸ್ ಬಂದಿದ್ದಾರೆ. ಜೈ ಚಿತ್ರೀಕರಣ ಪ್ರಾರಂಭವಾಗುತ್ತಿದೆ, ಆಶೀರ್ವದಿಸಲ್ಪಟ್ಟಿದ್ದೇನೆ ಎಂದು ಬರೆದುಕೊಂಡಿದ್ದಾರೆ. ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಹೊಂದಲಾಗಿದೆ. ಸದ್ಯ ಬಾಲಿವುಡ್ ನಟನ ಎಂಟ್ರಿಯಾಗಿರೋದು ಪ್ರೇಕ್ಷಕರ ಕುತೂಹಲವನ್ನು ದುಪ್ಪಟ್ಟುಗೊಳಿಸಿದೆ.
ಇದನ್ನೂ ಓದಿ: ಪ್ರಧಾನಿ ಮೋದಿ ಜೊತೆ ಸಂಕ್ರಾಂತಿ ಆಚರಿಸಿದ ಸೂಪರ್ ಸ್ಟಾರ್ ಚಿರಂಜೀವಿ: ವಿಡಿಯೋ ನೋಡಿ
ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗುರುತಿಸಿಕೊಂಡಿರುವ ರೂಪೇಶ್ ಶೆಟ್ಟಿ ಅವರ ಮತ್ತೊಂದು ಬಹುನಿರೀಕ್ಷಿತ ಚಿತ್ರ 'ಅಧಿಪತ್ರ'. ಫೆ. 7ರಂದು ರಾಜ್ಯಾದ್ಯಂತ ಸಿನಿಮಾ ಬಿಡುಗಡೆ ಆಗಲಿದೆ. ಕರಾವಳಿ ಭಾಗದ ಕಥೆಯನ್ನು ಹೊಂದಿರುವ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿದ್ದು, ಸದ್ಯ ನಟನ ಮತ್ತೊಂದು ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ.
ಇದನ್ನೂ ಓದಿ: 'ಸ್ತ್ರೀ 2' ನಟಿಯೀಗ 'ನಾಗಿನ್': ಶ್ರದ್ಧಾ ಕಪೂರ್ ಸಿನಿಮಾ ಶೂಟಿಂಗ್ ಶೀಘ್ರದಲ್ಲೇ ಶುರು
ಅಧಿಪತ್ರ ಚಿತ್ರದಲ್ಲಿ ರೂಪೇಶ್ ಶೆಟ್ಟಿ ಜೊತೆ ಜಾಹ್ನವಿ ತೆರೆ ಹಂಚಿಕೊಂಡಿದ್ದಾರೆ. ಎಂ.ಕೆ. ಮಠ, ಪ್ರಕಾಶ್ ತುಳುನಾಡು, ರಘು ಪಾಂಡೇಶ್ವರ್, ದೀಪಕ್ ರೈ, ಕಾರ್ತಿಕ್ ಭಟ್, ಅನಿಲ್ ಉಪ್ಪಾಲ್, ಪ್ರಶಾಂತ್ ಸೇರಿದಂತೆ ಹಲವರು ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕೆ.ಆರ್.ಸಿನಿ ಕಂಬೈನ್ಸ್ ಬ್ಯಾನರ್ನಡಿ ದಿವ್ಯಾ ನಾರಾಯಣ್, ಕುಲದೀಪ್ ರಾಘವ್ ಲಕ್ಷ್ಮೇ ಗೌಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಬೆಳಕು ಫಿಲಂಸ್ ಅಡಿ ಕಾರ್ತಿಕ್ ಶೆಟ್ಟಿ ಮತ್ತು ಸತೀಶ್ ಶೆಟ್ಟಿ ಶ್ವೇತಾ ರವಿಚಂದ್ರ ಶೆಟ್ಟಿ ಸಹ-ನಿರ್ಮಾಪಕರಾಗಿ ಚಿತ್ರತಂಡದ ಭಾಗವಾಗಿದ್ದಾರೆ.