ETV Bharat / entertainment

ನೈಜ ಘಟನೆ ಆಧಾರಿತ 'ತಾಜ್' ಚಿತ್ರದ ಟೀಸರ್ ಮತ್ತು ಹಾಡು ಬಿಡುಗಡೆ - Taj Movie - TAJ MOVIE

ನೈಜ ಘಟನೆ ಆಧಾರಿತ 'ತಾಜ್' ಚಿತ್ರದ ಟೀಸರ್ ಮತ್ತು ಹಾಡು ಬಿಡುಗಡೆಯಾಗಿದ್ದು, ಸಿನಿಪ್ರಿಯರ ಗಮನ ಸೆಳೆಯುತ್ತಿವೆ.

Teaser and song release of 'Taj' based on true events
ತಾಜ್ ಚಿತ್ರತಂಡ (Taj movie team)
author img

By ETV Bharat Karnataka Team

Published : Jun 10, 2024, 12:23 PM IST

ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ 'ತಾಜ್' ಎಂಬ ಚಿತ್ರ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಜ್ಜಾಗಿದೆ‌. ನೈಜ ಘಟನೆಯ ಕಥೆ ಆಧರಿಸಿರೋ ಈ ಚಿತ್ರದ ಟೀಸರ್ ಮತ್ತು ಹಾಡೊಂದನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು. ಹಿರಿಯ ನಿರ್ಮಾಪಕ ಮತ್ತು ಛಾಯಾಗ್ರಹಕರಾದ ಅಣಜಿ ನಾಗರಾಜ್, ನಿರ್ಮಾಪಕ ಸತೀಶ್, ಹತಾರ ಚಿತ್ರದ ನಿರ್ಮಾಪಕ ಸೌಗತ್, ನಟರಾದ ಚಂದು ಶಿವಾನಂದ್ ಸೇರಿದಂತೆ ಚಿತ್ರತಂಡದ ಸಮ್ಮುಖದಲ್ಲಿ ಟೀಸರ್ ಮತ್ತು ಹಾಡನ್ನು ಬಿಡುಗಡೆಗೊಳಿಸಿದರು.

Teaser and song release of 'Taj' based on true events
ತಾಜ್ ಚಿತ್ರತಂಡ (Taj movie team)

ರಾಜರತ್ನ ಈ ಸಿನಿಮಾಗೆ ನಿರ್ದೇಶನ ಮಾಡಿದ್ದು, ಯುವ ಪ್ರತಿಭೆ ಷಣ್ಮುಖ 'ತಾಜ್' ಚಿತ್ರದ ಮೂಲಕ ನಾಯಕ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದು, ಅಪ್ಸರಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಬಲರಾಜವಾಡಿ, ಶೋಭರಾಜ್, ವರ್ಧನ್, ಪದ್ಮಾವಾಸಂತಿ, ಪಟ್ರೆ ನಾಗರಾಜ್, ಕಡ್ಡಿ ವಿಶ್ವ, ಸೂರಜ್ ಮೊದಲಾದ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಸುಮಾರು 12 ವರ್ಷಗಳಿಂದ ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕನಾಗಿ, ಸಹ ನಿರ್ದೇಶಕನಾಗಿ, ಬರಹಗಾರನಾಗಿ, ಸಾಹಿತಿಯಾಗಿ ಗುರುತಿಸಿಕೊಂಡಿರುವ ಬಿ. ರಾಜರತ್ನ ಮೊದಲ ಬಾರಿಗೆ ಈ ಸಿನಿಮಾದ ಮೂಲಕ ನಿರ್ದೇಶಕನಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ.

Teaser and song release of 'Taj' based on true events
ತಾಜ್ ಚಿತ್ರತಂಡ (Taj movie team)

ಮೊದಲಿಗೆ ತಾಜ್ ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ಬಿ. ರಾಜರತ್ನ, ಸುಮಾರು 10ಕ್ಕೂ ಹೆಚ್ಚು ಕಥೆಗಳನ್ನು ಕೇಳಿದ ನಂತರ ನಿರ್ಮಾಪಕರು ಈ ಸಿನಿಮಾ ಮಾಡಲು ಒಪ್ಪಿಕೊಂಡರು. ಇದೊಂದು ನೈಜ ಘಟನೆಗಳನ್ನು ಆಧರಿಸಿದ ಸಿನಿಮಾ. ನಮ್ಮ ಸುತ್ತಮುತ್ತ ನಡೆದ ಶೇಕಡಾ 80 ರಷ್ಟು ನೈಜ ಘಟನೆಗಳು ಮತ್ತು ಶೇಕಡಾ 20 ರಷ್ಟು ಸಿನಿಮೀಯ ಅಂಶಗಳನ್ನು ಇಟ್ಟುಕೊಂಡು ಈ ಚಿತ್ರವನ್ನು ಮಾಡಲಾಗಿದೆ. ಹಿಂದೂ-ಮುಸ್ಲಿಂ ಜೋಡಿಯ ಪ್ರೇಮಕಥೆ ಸಿನಿಮಾದಲ್ಲಿದ್ದು, ಜೊತೆಗೆ ಮಾನವೀಯ ನೆಲೆಗಟ್ಟು, ಸಾಮಾಜಿಕ ಸಂದೇಶ ಎಲ್ಲವನ್ನೂ ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಯವ ನಟ ಷಣ್ಮುಖ ಈ ಚಿತ್ರದ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಅಡಿಯಿಡುತ್ತಿದ್ದಾರೆ ಎಂದರು.

Teaser and song release of 'Taj' based on true events
ತಾಜ್ ಚಿತ್ರತಂಡ (Taj movie team)

ತಮ್ಮ ಚೊಚ್ಚಲ ಚಿತ್ರದ ಬಗ್ಗೆ ಮಾತನಾಡಿದ ನಟ ಷಣ್ಮುಖ, 10 ಕಥೆಗಳನ್ನು ಕೇಳಿದ ಬಳಿಕ ಈ ಚಿತ್ರ ಒಪ್ಪೊಕೊಳ್ಳಬೇಕಾಯಿತು. ಎಲ್ಲ ಕೆಲಸಗಳು ಬಹುತೇಕ ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ತೆರೆಗೆ ಬರುವ ಯೋಜನೆಯಿದೆ. ಸುಮಾರು 8 ತಿಂಗಳ ಹಿಂದೆ ಶುರುವಾದ ಸಿನಿಮಾ ಈಗ ತೆರೆಗೆ ಬರುತ್ತಿದೆ. ಹಿಂದೂ-ಮುಸ್ಲಿಂ ನಡುವಿನ ಕಥೆ, ಮಾನವೀಯತೆಯ ನೆಲೆಗಟ್ಟು, ಸಾಮಾಜಿಕ ಸಂದೇಶ ಎರಡೂ ಸಿನಿಮಾದಲ್ಲಿದೆ. ನಮ್ಮ ನಡುವೆಯೇ ನಡೆದ ಕೆಲ ನೈಜ ಘಟನೆಗಳನ್ನು ಆಧರಿಸಿ ಈ ಚಿತ್ರವನ್ನು ತಯಾರಿಸಲಾಗಿದೆ ಎಂದು ತಿಳಿಸಿದರು.

Teaser and song release of 'Taj' based on true events
ತಾಜ್ ಚಿತ್ರತಂಡ (Taj movie team)

ಖಳನಟನಾಗಿ ಕಾಣಿಸಿಕೊಂಡಿರುವ ನಟ ವರ್ಧನ್ ಮಾತನಾಡಿ, ಈ ಚಿತ್ರದಲ್ಲಿ ನಾನು ಮುಸ್ಲಿಂ ಯುವಕನಾಗಿ ಕಾಣಿಸಿಕೊಂಡಿದ್ದೇನೆ. ಮೊದಲ ಬಾರಿಗೆ ಇಂಥದ್ದೊಂದು ಪಾತ್ರದಲ್ಲಿ ಕಾಣಿಸಿಕೊಂಡಿರುವುದಕ್ಕೆ ಖುಷಿ ಇದೆ. ತುಂಬ ಅಚ್ಚುಕಟ್ಟಾಗಿ ಸಿನಿಮಾದ ಕೆಲಸಗಳು ನಡೆದಿದ್ದು, ಅಷ್ಟೇ ಅಚ್ಚುಕಟ್ಟಾಗಿ ಮೂಡಿಬಂದಿದೆ ಎಂದು ತಮ್ಮ ಪಾತ್ರ ಪರಿಚಯ ಹೇಳಿದರು.

Teaser and song release of 'Taj' based on true events
ತಾಜ್ ಚಿತ್ರತಂಡ (Taj movie team)

ಬೆಂಗಳೂರು ಸುತ್ತಮುತ್ತ ಬಹುತೇಕ ಚಿತ್ರೀಕರಣ ನಡೆಸಲಾಗಿದ್ದು ಸಿನಿಮಾಕ್ಕೆ ಜೆಸ್ಸಿಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ. ಶ್ರೀಪಾವನಿ ಲಕ್ಷ್ಮೀ ಕಂಬೈನ್ಸ್ ಲಾಂಛನದಲ್ಲಿ ಶ್ರೀಮತಿ ಲಕ್ಷ್ಮೀ ಷಣ್ಮುಖ ನಿರ್ಮಾಣ ಮಾಡಿದ್ದಾರೆ. ಸದ್ಯ ಬಿಡುಗಡೆಯಾಗಿರುವ ತಾಜ್ ಸಿನಿಮಾದ ಟೀಸರ್ ಮತ್ತು ಹಾಡು ಸಿನಿಪ್ರಿಯರ ಗಮನ ಸೆಳೆಯುತ್ತಿವೆ.

ಇದನ್ನೂ ಓದಿ: ಕಲ್ಕಿ ಸಿನಿಮಾದ ಟ್ರೈಲರ್​ಗೂ ಮುನ್ನ ಪೋಸ್ಟರ್​ ಬಿಡುಗಡೆ; ಸ್ಟನ್ನಿಂಗ್​ ಲುಕ್​ನಲ್ಲಿ ದೀಪಿಕಾ ಪಡುಕೋಣೆ - Kalki Stunning Poster

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.