ETV Bharat / entertainment

ಕಲ್ಕಿ 2898 AD ಚಿತ್ರದ 5ನೇ ಸೂಪರ್ ಸ್ಟಾರ್ 'ಬುಜ್ಜಿ' ರಿವೀಲ್​ಗೆ ಡೇಟ್ ಫಿಕ್ಸ್ - Kalki 2898 AD - KALKI 2898 AD

ಮೇ 22ಕ್ಕೆ ಕಲ್ಕಿ 2898 AD ಚಿತ್ರದ ಐದನೇ ಸೂಪರ್ ಸ್ಟಾರ್​ನ್ನು ರಿವೀಲ್​ ಮಾಡಲಾಗುವುದು ಎಂದು ಚಿತ್ರತಂಡ ಘೋಷಿಸಿದೆ.

ಕಲ್ಕಿ 2898 AD  ಐದನೇ ಸೂಪರ್ ಸ್ಟಾರ್​ ರಿವೀಲ್ ಪೋಸ್ಟರ್​
ಕಲ್ಕಿ 2898 AD ಐದನೇ ಸೂಪರ್ ಸ್ಟಾರ್​ ರಿವೀಲ್ ಪೋಸ್ಟರ್​ (ETV Bharat)
author img

By ETV Bharat Karnataka Team

Published : May 20, 2024, 11:34 AM IST

'ಪ್ಯಾನ್​ ಇಂಡಿಯಾ ಸೂಪರ್​​ ಸ್ಟಾರ್​​ಪ್ರಭಾಸ್​ ಅಭಿನಯದ ಕಲ್ಕಿ 2898 AD ಬಿಡುಗಡೆಗೆ ಇನ್ನು ಕೇವಲ ಎರಡು ತಿಂಗಳಷ್ಟೇ ಬಾಕಿ ಇದೆ. ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಬೆಟ್ಟದಷ್ಟು ನಿರೀಕ್ಷೆ ಮತ್ತು ಕುತೂಹಲವಿದೆ. ಈಗ ಚಿತ್ರದ ಐದನೇ ಸೂಪರ್​ ಸ್ಟಾರ್ ಅನ್ನು ಇದೇ ಮೇ 22ರಂದು ಅನಾವರಣಗೊಳಿಸುವುದಾಗಿ ಚಿತ್ರತಂಡ ಘೋಷಿಸಿದೆ.

ಈ ಐದನೇ ಸೂಪರ್​​ ಸ್ಟಾರ್​ ಯಾರು ಎಂಬ ರಹಸ್ಯವನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಹೆಸರು ಬುಜ್ಜಿ ಮತ್ತು ಈತ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಗೆಳೆಯನಂತೆ. ಈ ಗೆಳೆಯನ ಕುರಿತು ಯೂಟ್ಯೂಬ್‍ನ ವೈಜಯಂತಿ ನೆಟ್‍ವರ್ಕ್ ಚಾನಲ್‍ನಲ್ಲಿ ಹೊಸ ವಿಡಿಯೋ ಬಿಡುಗಡೆ ಮಾಡಲಾಗಿದೆ.

From Skratch: Building A Superstar ಹೆಸರಿನ ಈ ವಿಡಿಯೋದಲ್ಲಿ ಬುಜ್ಜಿಯ ಕುರಿತು ಪರಿಚಯ ಮಾಡಿಕೊಡಲಾಗಿದೆ. 2020ರ ಜೂನ್‍ನಲ್ಲಿ ಅಂಥದ್ದೊಂದು ಪಾತ್ರದ ಸೃಷ್ಟಿ ಹೇಗಾಯಿತು ಎಂದು ಪ್ರಾರಂಭವಾಗುವುದರಿಂದ, ಅಂತಿಮವಾಗಿ ಅದು ಹೇಗೆ ರೂಪುಗೊಂಡಿತು ಎಂಬುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಭೈರವನ ಅಚ್ಚುಮೆಚ್ಚಿನ ಗೆಳೆಯನ ಕುರಿತು ಸಾಕಷ್ಟು ಬಿಲ್ಡಪ್‍ ನೀಡಲಾಗಿದ್ದು, ಈ ಐದನೇ ಸೂಪರ್​ ಸ್ಟಾರ್​ ಯಾರಿರಬಹುದು ಎಂಬ ಕುತೂಹಲ ಪ್ರೇಕ್ಷಕರಲ್ಲಿ ಮನೆಮಾಡಿದೆ. ಬುಜ್ಜಿ ಯಾರು ಎಂಬ ಪ್ರಶ್ನೆಗೆ, ಎರಡು ನಿಮಿಷ 22 ಸೆಕೆಂಡ್‍ನ ಈ ವೀಡಿಯೋದಲ್ಲಿ ಚಿತ್ರಕ್ಕೆ ದುಡಿದ ಹಲವು ತಂತ್ರಜ್ಞರು ಉತ್ತರ ನೀಡುವ ಪ್ರಯತ್ನ ಮಾಡಿದ್ದಾರೆ. ಇಷ್ಟಕ್ಕೂ ಬುಜ್ಜಿ ಯಾರು? ಉತ್ತರಕ್ಕಾಗಿ ಮೇ 22ರ ವರೆಗೂ ಕಾಯಬೇಕು.

  • " class="align-text-top noRightClick twitterSection" data="">

ಕೆಲವು ದಿನಗಳ ಹಿಂದಷ್ಟೇ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‍ ಅವರ ಪಾತ್ರವನ್ನು ಅನಾವರಣಗೊಳಿಸಲಾಗಿತ್ತು. ಅಶ್ವತ್ಥಾಮನಾಗಿ ಅಮಿತಾಭ್‍ ನಟಿಸಿದ್ದು, ಅವರ ಪಾತ್ರ ಹೇಗಿರಬಹುದು ಎಂದು ಪ್ರೇಕ್ಷಕರು ತುದಿಗಾಲಲ್ಲಿ ಕಾಯುವಂತಾಗಿದೆ. ಅವರ ಪಾತ್ರ ಪರಿಚಯಿಸುವ ಟೀಸರ್​​ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್‍ ಭಾಷೆಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕಲ್ಕಿ 2898 AD ಚಿತ್ರದಲ್ಲಿ ಅಮಿತಾಬ್​ ಬಚ್ಚನ್​, ಕಮಲ್​ ಹಾಸನ್​, ಪ್ರಭಾಸ್​,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‍ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ಕಲ್ಕಿ 2898 AD ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: ಅಕ್ಷಯ್ ಕುಮಾರ್, ರಾಜ್‌ಕುಮಾರ್ ರಾವ್, ಜಾಹ್ನವಿ ಕಪೂರ್, ಫರ್ಹಾನ್ ಅಖ್ತರ್ ಸೇರಿ ಸೆಲೆಬ್ರಿಟಿಗಳಿಂದ ಮತದಾನ - CELEBRITIES VOTING

ETV Bharat Logo

Copyright © 2024 Ushodaya Enterprises Pvt. Ltd., All Rights Reserved.