ETV Bharat / entertainment

ಅಪ್ಪನ ಕಥೆಗೆ ಮಗನೇ ಹೀರೋ - ನಿರ್ದೇಶಕ, ಆ ಚಿತ್ರ ಯಾವುದು! - Trailer and song launch event - TRAILER AND SONG LAUNCH EVENT

ಬೆಂಗಳೂರಿನಲ್ಲಿ ನಸಾಬ್ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನಡೆಯಿತು.

NASAB MOVIE  NASAB MOVIE CAST  BENGALURU  NASAB MOVIE TRAILER AND SONG
ಅಪ್ಪನ ಕಥೆಗೆ ಮಗನೇ ಹೀರೋ-ನಿರ್ದೇಶಕ, ಆ ಚಿತ್ರ ಯಾವುದು! (Etv Bharat)
author img

By ETV Bharat Karnataka Team

Published : Jun 17, 2024, 2:10 PM IST

ಕನ್ನಡದಲ್ಲಿ ಒಳ್ಳೆಯ ಕಂಟೆಂಟ್ ಚಿತ್ರಗಳು ಹೆಚ್ಚು ಬರುತ್ತಿದೆ. ಅಂತಹುದೇ ಉತ್ತಮ‌ ಕಂಟೆಂಟ್ ಹೊಂದಿರುವ ಸಿನಿಮಾ ನಸಾಬ್. ಚಿತ್ರದ ಟೈಟಲ್​ನಿಂದ ಗಮನ ಸೆಳೆಯುತ್ತಿರೋ ಈ ಚಿತ್ರ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಜ್ಜಾಗಿದೆ‌. ಹೀಗಾಗಿ ನಸಾಬ್ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ಅದ್ದೂರಿಯಾಗಿ ನಡೆಯಿತು. ಟ್ರೇಲರ್ ಹಾಗೂ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

Nasab movie  Nasab movie cast  Bengaluru  Nasab movie trailer and song
ನಟ ಕೀರ್ತಿ ಕುಮಾರ್ ನಾಯ್ಕ್ ಮತ್ತು ನಟಿ ಶೆಫಾಲಿ ಸಿಂಗ್ (ETV Bharat)

ಬಂಜಾರ ಶಕ್ತಿಪೀಠದ ಶ್ರೀ ಕುಮಾರ ಮಹಾರಾಜರು, ಉಪ ಸಭಾಪತಿ ರುದ್ರಪ್ಪ ಎಂ ಲಮಾಣಿ, ಐಎಎಸ್ ಅಧಿಕಾರಿ ಜಗದೀಶ್ ಜಿ, ಮಾಜಿ ಶಾಸಕ ಪಿ.ರಾಜೀವ್, ಡಾ.ಶೋಭ ಜಿ, ಶೋಭಾ ಟಿ.ಆರ್, ಹರೀಶ್ ಮುಂತಾದವರು ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

ನಸಾಬ್ ಚಿತ್ರಕ್ಕೆ ಕಥೆ ಬರೆದಿರುವ ಕಿಶೋರ್ ಕುಮಾರ್ ನಾಯ್ಕ್ ಮಾತನಾಡಿ, ಇದು ನನ್ನ ಜೀವನದ ‌ಕಥೆ. ನಮ್ಮ ತಂದೆ ತಾಯಿಗೆ ಹದಿನಾಲ್ಕು ಜನ ಮಕ್ಕಳು. ಬಡತನ ಬೇರೆ. ಅಂತಹ ಬಡ ಕುಟುಂಬದಲ್ಲಿ ಹುಟ್ಟಿದ ಬಂಜಾರ ಸಮುದಾಯದ ಹುಡುಗನೊಬ್ಬ ಚೆನ್ನಾಗಿ ಓದಿ ವಿದ್ಯಾವಂತನಾಗಿ ಉನ್ನತ ಹುದ್ದೆಯನ್ನು ಅಲಂಕರಿಸುತ್ತಾನೆ‌.‌ ಇದೇ ಚಿತ್ರದ ಕಥಾಹಂದರ. ನಾನು, ನನ್ನ ಜೀವನದ ಕಥೆಯನ್ನು ನಸಾಬ್ ಎಂದು ಪುಸ್ತಕ ರೂಪದಲ್ಲಿ ಹೊರ ತಂದೆ. ಇದನ್ನು ಓದಿದ್ದ ಮಿತ್ರ ಹರೀಶ್, ಈ ಕೃತಿಯನ್ನು ಸಿನಿಮಾ‌ ಮಾಡೋಣ ಎಂದರು. ಈ ಸಿನಿಮಾ‌ ಆಗಲು ಹರೀಶ್ ಅವರೆ ಮುಖ್ಯ ಕಾರಣ. ನನ್ನ ಮಗ ಕೀರ್ತಿ ಕುಮಾರ್ ನಾಯ್ಕ್ ಈ ಚಿತ್ರವನ್ನು ನಿರ್ದೇಶಿಸುವುದರೊಂದಿಗೆ ನಾಯಕನಾಗಿಯೂ ಅಭಿನಯಿಸಿದ್ದಾರೆ. ನಸಾಬ್ ಎಂದರೆ ಲಂಬಾಣಿ ಭಾಷೆಯಲ್ಲಿ ನ್ಯಾಯ ಎಂದು ಅರ್ಥ ಎಂದರು.

ಚಿತ್ರತಂಡ (ETV Bharat)

ಯುವ ನಟ ಹಾಗೂ ನಿರ್ದೇಶಕ ಕೀರ್ತಿ ಕುಮಾರ್ ನಾಯ್ಕ್ ಮಾತನಾಡಿ, ನನ್ನ‌ ಮೇಲೆ‌ ನಂಬಿಕೆಯಿಟ್ಟು ಜವಾಬ್ದಾರಿ ನೀಡಿದ ನನ್ನ ತಂದೆ ಕಿಶೋರ್ ಕುಮಾರ್ ನಾಯ್ಕ್ ಅವರಿಗೆ ಹಾಗೂ ಸಮಾರಂಭಕ್ಕೆ ಆಗಮಿಸಿರುವ ಗಣ್ಯರಿಗೆ ಧನ್ಯವಾದ. ಇದು ನನ್ಮ ಮೊದಲ ಚಿತ್ರ. ನಟನೆಗೆ ಸಹಕಾರ ನೀಡಿದ ಹಿರಿಯ ಕಲಾವಿದರು ಹಾಗೂ ತಂತ್ರಜ್ಞರನ್ನು ಈ ಸಮಯದಲ್ಲಿ ನೆನೆಯುತ್ತೇನೆ ಎಂದರು.

ಯುವ ನಟ ಕೀರ್ತಿ ಕುಮಾರ್ ನಾಯ್ಕ್ ಜೋಡಿಯಾಗಿ ಶೆಫಾಲಿ ಸಿಂಗ್ ಸೋನಿ ಕಾಣಿಸಿಕೊಂಡಿದ್ದಾರೆ. ಇವರೊಂದಿಗೆ ಬಿ.ಜಯಶ್ರೀ,‌ ಪದ್ಮಾ ವಾಸಂತಿ, ವಿಜಯ ಕಾಶಿ,‌ ತಬಲ ನಾಣಿ, ನಾಗೇಂದ್ರ ಅರಸ್, ಶೋಭ್ ರಾಜ್, ಪ್ರಕಾಶ್, ಹನುಮಂತೇ ಗೌಡ ಸೇರಿದಂತೆ ಮುಂತಾದವರು ಚಿತ್ರದಲ್ಲಿದ್ದಾರೆ.

ಕೀರ್ತಿ ಕ್ರಿಯೇಷನ್ಸ್ ಲಾಂಛನದಲ್ಲಿ ಸುಜಾತ ಕಿಶೋರ್ ನಾಯ್ಕ್ ಈ ಚಿತ್ರವನ್ನು ನಿರ್ಮಾಣ‌ ಮಾಡಿದ್ದಾರೆ. ರಾಗಂ ಸಂಗೀತ ಸಂಯೋಜಿಸಿದ್ದಾರೆ. ಸದ್ಯ ಟ್ರೇಲರ್​ ಬಿಡುಗಡೆಯಾಗಿದ್ದು, ನಸಾಬ್ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.

ಓದಿ: ಪೃಥ್ವಿ ಅಂಬಾರ್ ಹೊಸ ಸಿನಿಮಾ ಲಾಂಚ್​ ಮಾಡಿದ ಶ್ರೀಮುರಳಿ: ಟೈಟಲ್​ ಏನು ಗೊತ್ತಾ? - Prithvi Ambar New Movie

ETV Bharat Logo

Copyright © 2024 Ushodaya Enterprises Pvt. Ltd., All Rights Reserved.