ETV Bharat / entertainment

'ಅರಬ್ಬೀ' ಸಿನಿಮಾದಲ್ಲಿ ಅಣ್ಣಾಮಲೈ: ಕೈಗಳಿಲ್ಲದಿದ್ದರೂ ಈಜಿ ಗೆದ್ದ ಸಾಧಕನ ಕಥೆಯಿದು

ಸಾಧನೆಯ ಕಥೆಯುಳ್ಳ 'ಅರಬ್ಬೀ' ಸಿಸಿಮಾದ ಟ್ರೇಲರ್​ ಅನಾವರಣಗೊಂಡಿದೆ.

True story based Arabbie Official Trailer released
'ಅರಬ್ಬೀ' ಸಿಸಿಮಾದ ಟ್ರೇಲರ್​ ಅನಾವರಣ
author img

By ETV Bharat Karnataka Team

Published : Mar 15, 2024, 5:09 PM IST

ಸಾಧಿಸುವ ಛಲವಿದ್ದರೆ ಯಾವುದೂ ಅಸಾಧ್ಯವಲ್ಲ. ಅಂಗವೈಫಲ್ಯವೂ ಅಡ್ಡಿಯಾಗಲಾರದು. ವಿಶ್ವಾಸ್ ಎಂಬ ವಿಶೇಷಚೇತನ ಯುವಕನೊಬ್ಬ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿರುವ ಕಥೆಯನ್ನು ನಿರ್ದೇಶಕ ರಾಜ್‌ಕುಮಾರ್ ಅವರು 'ಅರಬ್ಬೀ' ಶೀರ್ಷಿಕೆಯ ಚಿತ್ರದ ಮೂಲಕ ಹೇಳಲೊರಟಿದ್ದಾರೆ. ಟೀಸರ್​ನಿಂದಲೇ ಸ್ಯಾಂಡಲ್​ವುಡ್​ನಲ್ಲಿ ಗಮನ ಸೆಳೆದಿದ್ದ ಅರಬ್ಬೀ ಚಿತ್ರದ ಟ್ರೇಲರ್​​ ಅನಾವರಣಗೊಂಡಿದೆ.

  • " class="align-text-top noRightClick twitterSection" data="">

ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ ಸುರೇಶ್, ಉಪಾಧ್ಯಕ್ಷ ವೆಂಕಟೇಶ್, ಯಶವಂತಪುರ ಸರ್ಕಲ್ ಇನ್ಸ್​​ಪೆಕ್ಟರ್​ ಅಜಯ್ ಸಾರಥಿ, ನಾಗೇಂದ್ರ ಅರಸ್, ವಿಜಯ್ ಚೆಂಡೂರ್ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ 'ಅರಬ್ಬೀ' ಸಿಸಿಮಾದ ಟ್ರೇಲರ್​ ಅನಾವರಣಗೊಂಡಿದ್ದು, ಪ್ರೇಕ್ಷಕರು ಸಿನಿಮಾ ವೀಕ್ಷಿಸುವ ಕುತೂಹಲ ವ್ಯಕ್ತಪಡಿಸುತ್ತಿದ್ದಾರೆ. ಸಾಧಕ ವಿಶ್ವಾಸ್ ಅವರೇ ಈ ಚಿತ್ರದ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

ಕಿರಿ ವಯಸ್ಸಿನಲ್ಲಿ ತಂದೆ ತಾಯಿ ಜೊತೆಗೆ ತನ್ನೆರಡೂ ಕೈಗಳನ್ನು ಕಳೆದುಕೊಳ್ಳುವ ವಿಶ್ವಾಸ್, ಸಮಾಜದಲ್ಲಿ ಸಾಕಷ್ಟು ಅವಮಾನಕ್ಕೊಳಗಾಗುತ್ತಾನೆ. ನಂತರ ತನ್ನನ್ನು ಅವಮಾನಿಸಿದವರ ಎದುರೇ ಸಾಧಿಸಿ ತೋರಿಸಬೇಕು ಎಂದು ನಿರ್ಧರಿಸಿ, ಹಠ, ಆತ್ಮವಿಶ್ವಾಸದಿಂದಲೇ ಗೆಲುವು ಸಾಧಿಸುತ್ತಾನೆ. ಸ್ವಿಮ್ಮಿಂಗ್ ಕೋಚ್ ಆಗಿ ನಾಯಕ ನಟನಿಗೆ (ವಿಶ್ವಾಸ್​) ಸ್ಫೂರ್ತಿ ತುಂಬುವ ವಿಶೇಷ ಪಾತ್ರದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನಟಿಸಿದ್ದಾರೆ. ‌ನಾಯಕನ ಗೆಳತಿಯೂ ಆತನಿಗೆ ಬೆನ್ನೆಲುಬಾಗಿ ನಿಲ್ಲುತ್ತಾಳೆ. ವಿಶ್ವಾಸ್ ಕೊನೆಗೂ ಅಂದುಕೊಂಡಿದ್ದನ್ನು ಸಾಧಿಸಿ ತೋರಿಸುತ್ತಾನೋ ಇಲ್ಲವೋ ಎಂಬುದೇ ಅರಬ್ಬೀ ಚಿತ್ರದ ಕಾನ್ಸೆಪ್ಟ್.

True story based Arabbie Official Trailer released
'ಅರಬ್ಬೀ' ಸಿಸಿಮಾದ ಟ್ರೇಲರ್​ ಅನಾವರಣ

ನಿರ್ದೇಶಕ ರಾಜ್​ಕುಮಾರ್ ಮಾತನಾಡಿ, ಕಳೆದ 18 ವರ್ಷಗಳಿಂದ ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. ಕಾರ್ಯಕ್ರಮವೊಂದರಲ್ಲಿ ವಿಶ್ವಾಸ್‌ ಅವರನ್ನು ನೋಡಿ, ಅವರ ಬಗ್ಗೆ ಒಂದು ಸಿನಿಮಾ ಮಾಡಬಾರದೇಕೆ? ಎಂದನಿಸಿತು. ವಿಶ್ವಾಸ್ ಅವರನ್ನು ಒಪ್ಪಿಸಿ, ನಂತರ ಕೋಚ್ ಪಾತ್ರಕ್ಕೆ ಅಣ್ಣಾಮಲೈ ಅವರನ್ನು ಕರೆತಂದೆವ. ಅವರು ಯಾವುದೇ ಸಂಭಾವನೆ ಪಡೆಯದೇ ಅಭಿನಯಿಸಿದರು. ಚಿತ್ರವೀಗ ಬಿಡುಗಡೆಗೆ ಸಿದ್ಧವಾಗಿದೆ ಎಂದು ಮಾಹಿತಿ ಹಂಚಿಕೊಂಡರು.

ನಂತರ ನಾಯಕನಟ ವಿಶ್ವಾಸ್ ಮಾತನಾಡಿ, ಮೊದಲ ಬಾರಿಗೆ ಸಿನಿಮಾದಲ್ಲಿ ನಟಿಸಿದ್ದೇನೆ. ಅಣ್ಣಾಮಲೈ ಅವರೂ ಕೂಡ ನನ್ನ ಬಗ್ಗೆ ಕೇಳಿ ಒಪ್ಪಿದರು. ಚಿತ್ರದಲ್ಲಿ ನಾನೊಬ್ಬ ಈಜುಗಾರನಾಗಿ ಕಾಣಿಸಿಕೊಂಡಿದ್ದೇನೆ. ದೇವರ ಮೇಲಿನ ಕೋಪವನ್ನು ಹೇಗೆ ವ್ಯಕ್ತಪಡಿಸುವೆ, ದಿನನಿತ್ಯದ ಕೆಲಸಗಳನ್ನು ಹೇಗೆ ಮಾಡಿಕೊಳ್ಳುವೆ, ಸಮಾಜ ನನ್ನನ್ನು ಯಾವರೀತಿ ನೋಡುತ್ತದೆ ಎಂಬುದನ್ನು ಈ ಚಿತ್ರದಲ್ಲಿ ತೋರಿಸಿದ್ದಾರೆ. ಈವರೆಗೆ ನಾನು ಹಲವಾರು ಪ್ರಶಸ್ತಿ ಪುರಸ್ಕಾರಗಳನ್ನು ಗಳಿಸಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಸಿದ್ಧಾರ್ಥ್ ಮಲ್ಹೋತ್ರಾ ನಟನೆಯ 'ಯೋಧ' ತೆರೆಗೆ: ಕಿಯಾರಾ ಅಡ್ವಾಣಿ ಸೇರಿ ಪ್ರೇಕ್ಷಕರ ಪ್ರತಿಕ್ರಿಯೆ ಹೀಗಿದೆ

ನಿರ್ಮಾಪಕ ಚೇತನ್ ಸಿ.ಎಸ್. ಮಾತನಾಡಿ, ಈ ಹಿಂದೆ ಮಾಚಿದೇವ ಎಂಬ ಚಿತ್ರ ಮಾಡಿದ್ದೆ. ನಿರ್ದೇಶಕ ರಾಜ್‌ಕುಮಾರ್ ಬಂದು ಈ ಕಾನ್ಸೆಪ್ಟ್ ಹೇಳಿದಾಗ ಇಷ್ಟವಾಯಿತು. ಛಲವಿದ್ದರೆ ಏನನ್ನಾದರೂ ಮಾಡಿ ತೋರಿಸಬಹುದು ಎಂದು ಈ ಚಿತ್ರದಲ್ಲಿ ತೋರಿಸಿದ್ದೇವೆ. ಉಡುಪಿ, ಅರಬ್ಬೀ ಸಮುದ್ರದಲ್ಲಿ 32 ದಿನಗಳವರೆಗೆ ಚಿತ್ರೀಕರಿಸಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: 'ಕೆಂಡ' ಚಿತ್ರಕ್ಕೆ ರಿತ್ವಿಕ್‍ ಕಾಯ್ಕಿಣಿ ಸಂಗೀತ: ಯೋಗರಾಜ್ ಭಟ್ ಹೇಳಿದ್ದೇನು?

ನಂತರ ಸಂಗೀತ ನಿರ್ದೇಶಕ ಕಂಬದ ರಂಗಯ್ಯ ಮಾತನಾಡಿ, ಹಂಸಲೇಖ ಅವರೇ ನನಗೆ ಸ್ಫೂರ್ತಿ. ವೇದಿಕೆಯಲ್ಲಿ ಹಾಡುತ್ತಿದ್ದ ನನ್ನನ್ನು ಕರೆದು ಈ ಅವಕಾಶ ನೀಡಿದರು. ಚಿತ್ರದಲ್ಲಿ 2 ಹಾಡುಗಳಿದ್ದು, ಚಂದನ್ ಶೆಟ್ಟಿ, ರಾಜೇಶ್ ಕೃಷ್ಣನ್ ಹಾಡಿದ್ದಾರೆ ಎಂದು ತಿಳಿಸಿದರು. ವಿಶ್ವಾಸ್‌ರಂಥ ವಿಶೇಷಚೇತನರಿಗೆ ನಮ್ಮ ಸಮಾಜ ಕೇವಲ ಅನುಕಂಪ ತೋರಿಸದೇ, ಅವರ ಪ್ರತಿಭೆಗೆ ತಕ್ಕಂತೆ ಅವಕಾಶಗಳನ್ನು ಮಾಡಿ ಕೊಟ್ಟರೆ, ದೊಡ್ಡ ಸಾಧನೆ ಮಾಡುವರು ಎನ್ನುವುದೇ ಈ ಚಿತ್ರದ ಸಂದೇಶ. ಇಷ್ಟೆಲ್ಲಾ ವಿಶೇಷತೆ ಹೊಂದಿರುವ ಅರಬ್ಬೀ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.