ETV Bharat / entertainment

'ವಿದ್ಯಾರ್ಥಿ ವಿದ್ಯಾರ್ಥಿನಿಯರೇ': ಯೂತ್​​ ಸಬ್ಜೆಕ್ಟ್ ಸಿನಿಮಾದ ಟ್ರೇಲರ್ ರಿಲೀಸ್ - Vidhyarthi Vidyarthiniyare Trailer - VIDHYARTHI VIDYARTHINIYARE TRAILER

ಬಹುನಿರೀಕ್ಷಿತ 'ವಿದ್ಯಾರ್ಥಿ ವಿದ್ಯಾರ್ಥಿನಿಯರೇ' ಚಿತ್ರದ ಟ್ರೇಲರ್ ಅನಾವರಣಗೊಂಡಿದೆ.

Vidhyarthi Vidyarthiniyare team
ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರತಂಡ (ETV Bharat)
author img

By ETV Bharat Karnataka Team

Published : May 14, 2024, 2:31 PM IST

ರ‍್ಯಾಂಪರ್ ಚಂದನ್ ಶೆಟ್ಟಿ ನಟಿಸಿರುವ ಬಹುನಿರೀಕ್ಷಿತ ಚಿತ್ರ 'ವಿದ್ಯಾರ್ಥಿ ವಿದ್ಯಾರ್ಥಿನಿಯರೇ'. ಶೀರ್ಷಿಕೆಯಲ್ಲಿಯೇ ಟೀನೇಜ್ ಸ್ಟೋರಿಯ ಕಂಪು ಹೊಂದಿರುವ ಈ ಸಿನಿಮಾ ಈಗಾಗಲೇ ನಾನಾ ಕ್ರೀಯಾಶೀಲ ಚಟುವಟಿಕೆಗಳ ಮೂಲಕ ಪ್ರೇಕ್ಷಕರನ್ನು ತಲುಪಿಕೊಂಡಿತ್ತು. ಆ ಕಾರಣದಿಂದಲೇ ಎಲ್ಲರೂ ಟ್ರೇಲರ್​​ನತ್ತ ದೃಷ್ಟಿ ನೆಟ್ಟಿದ್ದರು. ಇದೀಗ ಚಿತ್ರತಂಡ ಟ್ರೇಲರ್​​ ಅನಾವರಣಗೊಳಿಸಿದೆ.

ಟ್ರೇಲರ್​​ ಹದಿಹರೆಯದ ಮನಸುಗಳ ನಾನಾ ಮಗ್ಗುಲುಗಳನ್ನು ಹೊಂದಿದೆ. ಟ್ರೇಲರ್​​ ಅನ್ನು ಸೈಡ್ ಎ ಎಂದು ಹೆಸರಿಸಲಾಗಿದೆ. ಇದನ್ನು ನೋಡುತ್ತಲೇ ಒಟ್ಟಾರೆ ಸಿನಿಮಾದಲ್ಲೇನೋ ಇದೆಯೆಂಬ ಗಟ್ಟಿ ಭರವಸೆ ತಂತಾನೇ ಮೂಡಿಕೊಳ್ಳುತ್ತದೆ. ಜೊತೆಗೆ ಸೈಡ್ ಬಿ ಟ್ರೇಲರ್​ ನೋಡುವ ಕಾತರವೂ ಮೂಡಿಕೊಳ್ಳುತ್ತದೆ. ಅಷ್ಟರಮಟ್ಟಿಗೆ ಈ ಟ್ರೇಲರ್​ ಪರಿಣಾಮಕಾರಿಯಾಗಿ ಮೂಡಿ ಬಂದಿದೆ.

  • " class="align-text-top noRightClick twitterSection" data="">

ವಿದ್ಯಾರ್ಥಿ ವಿದ್ಯಾರ್ಥಿನಿಯರೇ. ಟೈಟಲ್ಲೇ ಹೇಳುವಂತೆ ಯೂತ್​​​ ಸಬ್ಜೆಕ್ಟ್ ಸಿನಿಮಾ. ಕಾಲೇಜ್ ಹುಡುಗ ಹುಡುಗಿಯರ, ಹದಿಹರೆಯದ ಹುಚ್ಚು ಮನಸ್ಸಿನ ಏರಿಳಿತಗಳನ್ನು ಇಲ್ಲಿ ತೆರೆದಿಡಲಾಗಿದೆ. ಹಾಗಂತ ಇದು ಮಾಮೂಲಿಯಾಗೊಂತೂ ಇಲ್ಲವೇ ಇಲ್ಲ ಅನ್ನೋದು ಟ್ರೇಲರ್ ಎಳೆಯಲ್ಲಿ ಸ್ಪಷ್ಟವಾಗುತ್ತದೆ. ಹೊಡೆದಾಟ, ಬಡಿದಾಟ, ರ್ಯಾಗಿಂಗ್, ಬಿಸಿ ರಕ್ತದ ಹುಡುಗರ ಪುಂಡಾಟಿಕೆ ಸೇರಿದಂತೆ ಎಲ್ಲಾ ತರನಾದ ಅಂಶಗಳು ಇಲ್ಲಿವೆ. ಜೊತೆ ಜೊತೆಗೆ ಶೈಕ್ಷಣಿಕ ಪರಿಸರದ ಕ್ರೌರ್ಯದ ಮುಖವೊಂದನ್ನು ಬಯಲಾಗಿಸುವ ಪ್ರಯತ್ನವೂ ನಡೆದಿದ್ದು, ಗಮನ ಸೆಳೆಯುವಂತಿದೆ. ಮೋಜು ಮಸ್ತಿಯಲ್ಲಿ ಮೈಮರೆತ ಮನಸ್ಥಿತಿಗಳ ಕಥೆಯ ಸೂಚನೆಯಿದೆ. ಹಿಡಿತ ತಪ್ಪಿದ ಮಕ್ಕಳನ್ನು ಹಾದಿಗೆ ತರುವ ಯತ್ನವೂ ಇದೆ. ಪ್ರಸ್ತುತ ಕಾಲದ ಟೀನೇಜ್ ಹುಡುಗರ ಕಹಾನಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದೆ ಈ ಟ್ರೇಲರ್.

Vidhyarthi Vidyarthiniyare team
ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರತಂಡ (ETV Bharat)

ಇದನ್ನೂ ಓದಿ: ಕೆಕೆಆರ್‌ನ ರಿಂಕು ರಾಕ್ಸ್! ಅಲ್ಲು ಅರ್ಜುನ್‌ 'ಪುಷ್ಪ' ಸಿನಿಮಾ ಹಾಡಿಗೆ ಮಸ್ತ್‌ ಡ್ಯಾನ್ಸ್- ವಿಡಿಯೋ ನೋಡಿ - Rinku Singh Pushpa Dance

ಚಂದನ್ ಶೆಟ್ಟಿ ಈ ಚಿತ್ರದ ಮೂಲಕ ಡಿಫರೆಂಟಾಗಿ ಕಾಣಿಸಲಿದ್ದಾರೆಂಬ ನಿಖರ ಮಾಹಿತಿಯನ್ನು ನಿರ್ದೇಶಕ ಅರುಣ್ ಅಮುಕ್ತ ನೀಡುತ್ತಾ ಬಂದಿದ್ದಾರೆ. ಅವರ ಪಾತ್ರವನ್ನು ಅಷ್ಟೇ ಗೌಪ್ಯವಾಗಿ ಕಾಪಾಡಿಕೊಂಡು ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ ಚಿತ್ರತಂಡ. ಒಟ್ಟಾರೆಯಾಗಿ ಟ್ರೇಲರ್ ನೋಡಿದರೆ ನಿರ್ದೇಶಕರು ಹೊಸದೇನನ್ನೋ ಹೇಳುವ ಪ್ರಯತ್ನ ಮಾಡಿದ್ದಾರೆ ಅನ್ನೋದು ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಕಾಲೇಜು ಕೇಂದ್ರಿತ ಕಥೆ ಅಂದಾಕ್ಷಣ ಒಂದು ಕಲ್ಪನೆ ಮೂಡಿಕೊಳ್ಳುತ್ತದೆ. ಅದನ್ನು ಮೀರಿದ ಆತ್ಮದೊಂದಿಗೆ ಅರುಣ್ ಅಮುಕ್ತ ಈ ಸಿನಿಮಾವನ್ನು ದೃಷ್ಯೀಕರಿಸಿರುವ ಸೂಚನೆ ಟ್ರೇಲರ್​ನಲ್ಲಿ ಸಿಕ್ಕಿದೆ. ಈವರೆಗೂ ಹಂತ ಹಂತವಾಗಿ ಕಾಯ್ದುಕೊಂಡಿದ್ದ ಕುತೂಹಲವನ್ನು ಸೈಡ್ ಎ ಟ್ರೇಲರ್ ಸಾರ್ಥಕಗೊಳಿಸಿದೆ.

ಇದನ್ನೂ ಓದಿ: ಶಿಲ್ಪಾ ಶೆಟ್ಟಿ ತಂಗಿಗೆ ಎಂಡೊಮೆಟ್ರಿಯೊಸಿಸ್; ಚಿಕಿತ್ಸೆ ಪಡೆದ ನಟಿ ಶಮಿತಾ - Shamita Shetty Hospitalized

ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ ಕಶ್ಯಪ್ ಕಾರ್ಯಕಾರಿ ನಿರ್ಮಾಪಕ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಅರುಣ್ ಸುರೇಶ್ ಹಾಡಿಗೆ ಛಾಯಾಗ್ರಹಣ ನಿರ್ವಹಿಸಿದ್ದಾರೆ. ಚಂದನ್ ಶೆಟ್ಟಿ, ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.