ETV Bharat / entertainment

ಕ್ರೈಂ ಥ್ರಿಲ್ಲರ್ ಸಿನಿಮಾದೊಂದಿಗೆ ಬರ್ತಿದ್ದಾರೆ ಚಿನ್ನಾರಿ ಮುತ್ತ - Jog 101

ಈ ಹಿಂದೆ 'ಕೇಸ್​ ಆಫ್​ ಕೊಂಡಾಣ' ಸಿನಿಮಾದಲ್ಲಿ ಇನ್ವೆಸ್ಟಿಗೇಶನ್ ಪಾತ್ರ​ ಮಾಡಿದ್ದ ನಟ ವಿಜಯ್​ ರಾಘವೇಂದ್ರ ಇದೀಗ ಮತ್ತೊಂದು ಕ್ರೈಂ ಥ್ರಿಲ್ಲರ್​ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Jog 101 movie team
ಜೋಗ್ 101 ಸಿನಿಮಾ ತಂಡ
author img

By ETV Bharat Karnataka Team

Published : Mar 4, 2024, 10:28 AM IST

Updated : Mar 4, 2024, 11:42 AM IST

ರಿಯಾಲಿಟಿ ಶೋ ಜೊತೆಗೆ ವಿಭಿನ್ನ ಚಿತ್ರಗಳ‌ ಮೂಲಕ ಕನ್ನಡ ಸಿನಿಪ್ರಿಯರನ್ನು ರಂಜಿಸುತ್ತಿರುವ ನಟ ವಿಜಯ ರಾಘವೇಂದ್ರ. 'ಕೇಸ್ ಆಫ್ ಕೊಂಡಾಣ' ಬಳಿಕ ಇದೀಗ ಮತ್ತೊಂದು ಕ್ರೈಂ ಥ್ರಿಲ್ಲರ್​ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಸದ್ಯ ಚಿತ್ರದ ಶೀರ್ಷಿಕೆಯಿಂದ ಚಂದನವನದಲ್ಲಿ ಗಮನ ಸೆಳೆಯುತ್ತಿರುವ ಕ್ರೈಂ ಥ್ರಿಲ್ಲರ್​ ಸಿನಿಮಾ 'ಜೋಗ್ 101' ಟ್ರೇಲರ್ ರಿಲೀಸ್​ ಆಗಿದೆ. ವಿಜಯ್ ಕನ್ನಡಿಗ ಆ್ಯಕ್ಷನ್​ ಕಟ್​ ಹೇಳಿರುವ 'ಜೋಗ್ 101' ಟ್ರೇಲರ್ ಇದೀಗ ಚಿತ್ರಾಭಿಮಾನಿಗಳಿಂದ ಜನಮನ್ನಣೆ ಪಡೆಯುತ್ತಿದೆ. ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರದ ಬಗ್ಗೆ ಚಿತ್ರತಂಡ ಕೆಲವೊಂದು ವಿಚಾರಗಳನ್ನು ಹಂಚಿಕೊಂಡಿದೆ.

  • " class="align-text-top noRightClick twitterSection" data="">

ನಾಯಕ ವಿಜಯ್ ರಾಘವೇಂದ್ರ ಮಾತನಾಡಿ, "ಜೋಗ್ 101 ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಆ್ಯಕ್ಷನ್ ಥ್ರಿಲ್ಲರ್ ಚಿತ್ರ. ಲವ್, ಕಾಮಿಡಿ ಹೀಗೆ ಎಲ್ಲಾ ಅಂಶಗಳೂ ಇವೆ. ಅವಿನಾಶ್ ಆರ್.ಬಾಸೂತ್ಕರ್ ಸಂಗೀತ ನೀಡಿರುವ ಎರಡು ಹಾಡುಗಳು ಈಗಾಗಲೇ ಬಿಡುಗಡೆಯಾಗಿದ್ದು, ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ‌‌. ನನ್ನ ಚಿತ್ರಗಳಲ್ಲಿ ಒಂದೆರಡು ಹಿಟ್ ಹಾಡುಗಳು ಇರುತ್ತಿದ್ದವು. ಆದರೆ ಇತ್ತೀಚಿನ ನನ್ನ ಸಿನಿಮಾಗಳಲ್ಲಿ ಅಂತಹ ಹಿಟ್ ಹಾಡುಗಳು ಯಾವುದೂ ಇರಲಿಲ್ಲ. 'ಜೋಗ್ 101' ಚಿತ್ರದ ಹಾಡುಗಳು ಆ ಕೊರತೆಯನ್ನು ದೂರ ಮಾಡಿದೆ. ಈ ಚಿತ್ರದ ಹಾಡುಗಳು ಈಗಾಗಲೇ ಗೆದ್ದಿವೆ. ಇನ್ನು ನಿರ್ಮಾಪಕರ ಹೆಸರು ರಾಘವೇಂದ್ರ, ನಿರ್ದೇಶಕರ ಹೆಸರು ವಿಜಯ್ ಅವರಿಬ್ಬರ ಹೆಸರು ಸೇರಿಸಿದಾಗ ನನ್ನ ಹೆಸರು ವಿಜಯ್ ರಾಘವೇಂದ್ರ. ವಿಕ್ರಮ್ ನನ್ನ ಪಾತ್ರದ ಹೆಸರು. ಸುನೀತ್ ಹಲಗೇರಿ ಅವರ ಛಾಯಾಗ್ರಹಣದಲ್ಲಿ ಜೋಗ್ ನೋಡುವುದೇ ಚಂದ" ಎಂದರು.

Jog 101 movie hero and Heroine
ಜೋಗ್ 101 ಸಿನಿಮಾದ ನಾಯಕ ಹಾಗೂ ನಾಯಕಿ

ನಿರ್ದೇಶಕ ವಿಜಯ್ ಕನ್ನಡಿಗ ಮಾತನಾಡಿ, "ಈ ಚಿತ್ರದ ಕಥೆ ಬರೆದು ನಿರ್ಮಾಪಕರ ಹತ್ತಿರ ಹೋದಾಗ ಕಥೆ ಮೆಚ್ಚಿಕೊಂಡು ಚಿತ್ರ ನಿರ್ಮಾಣಕ್ಕೆ ಮುಂದಾದರು. ಈ ಚಿತ್ರದ ಕಥೆಗೆ ವಿಜಯ್ ರಾಘವೇಂದ್ರ ಅವರೇ ಸೂಕ್ತ ಎಂದು ಅಂದುಕೊಂಡಿದ್ದೆವು. ವಿಜಯ್ ರಾಘವೇಂದ್ರ ಅವರು ಕಥೆ ಕೇಳಿ ನಟಿಸಲು ಒಪ್ಪಿಕೊಂಡರು. ಇದೊಂದು ಥ್ರಿಲ್ಲರ್ ಕಥೆ ಪ್ರೇಕ್ಷಕರಿಗೆ ಇಷ್ಟ ಆಗುತ್ತೆ" ಎಂದು ತಿಳಿಸಿದರು.

Jog 101 movie director and producer
ಜೋಗ್ 101 ಸಿನಿಮಾದ ನಿರ್ದೇಶಕ ಹಾಗೂ ನಿರ್ಮಾಪಕ

ವಿಜಯ ರಾಘವೇಂದ್ರ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶೇಖರ್ ನಟಿಸಿದ್ದಾರೆ. ಇವರ ಜೊತೆ ಗೋವಿಂದೇ ಗೌಡ, ಕಡ್ಡಿಪುಡಿ ಚಂದ್ರು, ರಾಜೇಶ್ ನಟರಂಗ, ತಿಲಕ್, ನಿರಂಜನ್ ದೇಶಪಾಂಡೆ, ಶಶಿಧರ್, ಪ್ರಸನ್ನ, ಸುಂದರಶ್ರೀ, ಹರ್ಷಿತಾ ಗೌಡ 'ಜೋಗ್ 101' ಚಿತ್ರದ ತಾರಾಬಳಗದಲ್ಲಿದ್ದಾರೆ.

Jog 101 movie team
ಜೋಗ್ 101 ಸಿನಿಮಾ ತಂಡ

ಮಾರ್ಚ್ 7ರಂದು ಬಿಡುಗಡೆ: ಕಲೈ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿದ್ದು, ಮೋಹನ್ ರಂಗಕಹಳೆ ಸಂಕಲನ ಹಾಗೂ ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನವಿದೆ. ನಿರ್ಮಾಪಕ & ಕ್ರಿಯೇಟಿವ್ ಡೈರೆಕ್ಟರ್ ರಾಘು ಅವರ ಸೆವೆನ್ ಸ್ಟಾರ್ ಪಿಕ್ಚರ್ಸ್ ಅಡಿಯಲ್ಲಿ ಅದ್ಧೂರಿಯಾಗಿ ಸಿನಿಮಾ ನಿರ್ಮಾಣವಾಗಿದೆ. ಸದ್ಯ ಟ್ರೇಲರ್​ನಿಂದ ಗಮನ ಸೆಳೆಯುತ್ತಿರುವ ಸಿನಿಮಾ ಮಾರ್ಚ್ 7ರಂದು ತೆರೆಗೆ ಬರಲಿದೆ.

ಇದನ್ನೂ ಓದಿ: ಅಂತಿಮ ಹಂತದಲ್ಲಿ 'ಪರವಶ': ಹೊಸ ಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್

Last Updated : Mar 4, 2024, 11:42 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.