ETV Bharat / entertainment

'ಅಪಾಯವಿದೆ ಎಚ್ಚರಿಕೆ' ಟೀಸರ್ : ಫೆ.7ಕ್ಕೆ ಹಾರರ್ ಸಿನಿಮಾ ಬಿಡುಗಡೆ - APAAYAVIDE ECCHARIKE

ಕನ್ನಡ ಚಿತ್ರರಂಗದ ವಿಭಿನ್ನ ಕಥೆಯ ಹಾರರ್ ಥ್ರಿಲ್ಲರ್ 'ಅಪಾಯವಿದೆ ಎಚ್ಚರಿಕೆ'ಯ ಟೀಸರ್​ ಅನಾವರಣಗೊಂಡಿದೆ.

Apaayavide Eccharike
ಅಪಾಯವಿದೆ ಎಚ್ಚರಿಕೆ ಟೀಸರ್​ (Photo: A still from teaser)
author img

By ETV Bharat Entertainment Team

Published : Jan 7, 2025, 3:28 PM IST

'ಅಪಾಯವಿದೆ ಎಚ್ಚರಿಕೆ' ಕನ್ನಡ ಚಿತ್ರರಂಗದ ವಿಭಿನ್ನ ಕಥೆಯ ಹಾರರ್ ಥ್ರಿಲ್ಲರ್. ಕೆಲ ಸಮಯದ ಹಿಂದಷ್ಟೇ ಮೋಶನ್ ಪೋಸ್ಟರ್ ಬಿಡುಗಡೆ ಮಾಡಿದ್ದ ಚಿತ್ರತಂಡ ತನ್ನ ವಿಶೇಷತೆಯಿಂದ ನಿರೀಕ್ಷೆ ಹುಟ್ಟಿಸಿತ್ತು. ನಂತರ "ಬ್ಯಾಚುಲರ್ ಬದುಕು" ಅನ್ನೋ ಸಾಂಗ್ ಬಿಡುಗಡೆಗೊಳಿಸಿ, ಎಲ್ಲಾ ಬ್ಯಾಚುಲರ್ಸ್ ಬದುಕಿನ ಬವಣೆಗಳ ನೈಜತೆಯನ್ನು ತೋರಿಸಿದ್ದ ಚಿತ್ರತಂಡ ಇದೀಗ ಟೀಸರ್ ಬಿಡುಗಡೆಗೊಳಿಸಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ.

ಕತ್ತಲೆಯ ಕಾಡಲ್ಲೇ ಚಿತ್ರೀಕರಣ: ಸಸ್ಪೆನ್ಸ್ ಹಾರರ್ ಥ್ರಿಲ್ಲರ್ ಸಿನಿಮಾವನ್ನು ಅಭಿಜಿತ್ ತೀರ್ಥಹಳ್ಳಿ ಬರೆದು, ಆ್ಯಕ್ಷನ್​ ಕಟ್​ ಹೇಳಿದ್ದಾರೆ. ಚಿತ್ರದ ಬಹುತೇಕ ಭಾಗವನ್ನು ಕತ್ತಲೆಯ ಕಾಡಲ್ಲೇ ಚಿತ್ರೀಕರಿಸುವ ಮೂಲಕ ವೀಕ್ಷಕರ ಗಮನ ಸೆಳೆಯುವಂತೆ ಮಾಡಿದ್ದಾರೆ. ಹೊಸ ತರಹದ ಚಿತ್ರಕಥೆಯುಳ್ಳ ಈ ಚಿತ್ರದ ಮೇಕಿಂಗ್, ಮ್ಯೂಸಿಕ್, ಲೊಕೇಶನ್ ಎಲ್ಲವೂ ಭರವಸೆ ಮೂಡಿಸಿ ಸದ್ದು ಮಾಡುತ್ತಿವೆ. ವಿ. ಜಿ ಮಂಜುನಾಥ್ ಮತ್ತು ಪೂರ್ಣಿಮ ಎಂ ಗೌಡ ನಿರ್ಮಾಣದ ಈ ಚಿತ್ರಕ್ಕೆ ಸಂಗೀತ, ಛಾಯಾಗ್ರಹಣ ಎರಡೂ ವಿಭಾಗದಲ್ಲಿ ಕೆಲಸ ಮಾಡಿದ್ದಾರೆ ಸುನಾದ್ ಗೌತಮ್.

ಮುಖ್ಯಭೂಮಿಕೆಯಲ್ಲಿ ವಿಕಾಶ್ ಉತ್ತಯ್ಯ : ಅಣ್ಣಯ್ಯ ಧಾರಾವಾಹಿ ಖ್ಯಾತಿಯ ನಟ ವಿಕಾಶ್ ಉತ್ತಯ್ಯ, ಅಮೃತಧಾರೆ ಖ್ಯಾತಿಯ ರಾಧಾ ಭಗವತಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಇವರ ಜೊತೆಗೆ ರಾಘವ್ ಕೊಡಚಾದ್ರಿ, ಮಿಥುನ್ ತೀರ್ಥಹಳ್ಳಿ ಕೂಡಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಬಾಕ್ಸ್​​ ಆಫೀಸ್​ನಲ್ಲಿ ಮುಗ್ಗರಿಸಿದ್ರೂ ಆಸ್ಕರ್​​ಗೆ ಎಂಟ್ರಿ; ಇದು ಸೂರ್ಯ ನಟನೆಯ 'ಕಂಗುವ' ಸಾಧನೆ

'ಅಪಾಯವಿದೆ ಎಚ್ಚರಿಕೆ' ಚಿತ್ರ ತಾಂತ್ರಿಕವಾಗಿ ಉತ್ತಮವಾಗಿ ಮೂಡಿ ಬರುತ್ತಿದೆ ಅನ್ನೋ ಸುಳಿವನ್ನು ಟೀಸರ್​ ಬಿಟ್ಟುಕೊಟ್ಟಿದೆ. ದೃಶ್ಯಗಳು, ಮ್ಯೂಸಿಕ್ ಕುತೂಹಲ ಮೂಡಿಸುವಂತಿವೆ. ಒಟ್ಟಾರೆ ಆಸನದ ತುದಿಯಲ್ಲಿ ಕುಳಿತು ನೋಡುವ ಸಿನಿಮಾ ಇದಾಗಿದ್ದು, ಪ್ರೇಕ್ಷಕರಿಗೆ ಮನರಂಜನೆ ಒದಗಿಸುವ ಭರವಸೆ ನೀಡಿದ್ದಾರೆ ನಿರ್ದೇಶಕ ಅಭಿಜಿತ್ ತೀರ್ಥಹಳ್ಳಿ. ಫೆಬ್ರವರಿ 7ಕ್ಕೆ "ಅಪಾಯವಿದೆ ಎಚ್ಚರಿಕೆ" ಚಿತ್ರ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತಿದೆ.

ಇದನ್ನೂ ಓದಿ: ಸಂಧ್ಯಾ ಥಿಯೇಟರ್​ ಕಾಲ್ತುಳಿತ: ಆಸ್ಪತ್ರೆಗೆ ತೆರಳಿ ಗಾಯಾಳು ಬಾಲಕನ ಆರೋಗ್ಯ ವಿಚಾರಿಸಿದ ಅಲ್ಲು ಅರ್ಜುನ್​​

ಕನ್ನಡದಲ್ಲಿ ಚಿತ್ರರಂಗದಲ್ಲಿ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳು ಹೆಚ್ಚೆಚ್ಚು ಬರುತ್ತಿದ್ದು, ಪ್ರಕ್ಷಕರು ಕೂಡಾ ಅದನ್ನೇ ಬಯಸಿದ್ದಾರೆ. ಹೊಸ ಪ್ರತಿಭೆಗಳ ಆಗಮನವೂ ಆಗುತ್ತಿದೆ. ಈ ಸಾಲಿನಲ್ಲಿ 'ಅಣ್ಣಯ್ಯ' ಧಾರಾವಾಹಿ ಖ್ಯಾತಿಯ ನಟ ವಿಕಾಶ್ ಉತ್ತಯ್ಯ ಇದ್ದಾರೆ. ಹಿರಿತೆರೆಯಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದು, ಸಿನಿಮಾ ಎಷ್ಟರ ಮಟ್ಟಿಗೆ ಗೆಲುವು ಕಾಣಲಿದೆ ಅನ್ನೋದನ್ನು ಕಾದು ನೋಡಬೇಕಿದೆ. ಸಿನಿಮಾಗೆ ಪ್ರೇಕ್ಷಕರು ಯಾವ ರೀತಿ ಸ್ಪಂದಿಸಲಿದ್ದಾರೆ ಅನ್ನೋದು ಮುಂದಿನ ತಿಂಗಳು ಫೆಬ್ರವರಿ 7ಕ್ಕೆ ತಿಳಿಯಲಿದೆ. ಸದ್ಯ ಟೀಸರ್​​ ಸಖತ್​ ಸದ್ದು ಮಾಡುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.