ETV Bharat / entertainment

ವಿನಯ್ ರಾಜ್ ಕುಮಾರ್ 'ಪೆಪೆ'ಗೆ A ಸೆನ್ಸಾರ್‌ ಸರ್ಟಿಫಿಕೇಟ್; ಸಿನಿಪ್ರಿಯರ ಕುತೂಹಲ - VINAY RAJKUMAR PEPE FILM - VINAY RAJKUMAR PEPE FILM

ವಿನಯ್ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ ಪೆಪೆಗೆ ಸೆನ್ಸಾರ್ ಮಂಡಳಿ​ ಎ ಸರ್ಟಿಫಿಕೇಟ್ ಸಿಕ್ಕಿದೆ.

ವಿನಯ್ ರಾಜ್ ಕುಮಾರ್
ವಿನಯ್ ರಾಜ್ ಕುಮಾರ್ (ETV Bharat)
author img

By ETV Bharat Karnataka Team

Published : Jul 29, 2024, 10:32 AM IST

'ಒಂದು ಸರಳ ಪ್ರೇಮಕಥೆ'ಯ ಯಶಸ್ಸಿನ ಬಳಿಕ ವಿನಯ್ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರವೇ 'ಪೆಪೆ'. ಟೈಟಲ್ ಹಾಗೂ ಟೀಸರ್​​ನಿಂದ ಕುತೂಹಲ ಹೆಚ್ಚಿಸಿರುವ ಈ ಸಿನಿಮಾ ಈಗ ಸೆನ್ಸಾರ್ ಮುಗಿಸಿ ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದೆ. 'ಪೆಪೆ'ಗೆ ಸೆನ್ಸಾರ್ ಮಂಡಳಿಯಿಂದ ಎ ಸರ್ಟಿಫಿಕೇಟ್ ಸಿಕ್ಕಿದ್ದು, ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.

ಕ್ಲಾಸ್ ಸಿನಿಮಾಗಳ ಮೂಲಕ ಕನ್ನಡ ಸಿನಿಪ್ರೇಮಿಗಳನ್ನು ರಂಜಿಸಿದ್ದ ವಿನಯ್ ರಾಜ್ ಕುಮಾರ್ ಪೆಪೆಗಾಗಿ ಮಾಸ್ ಅವತಾರ ತಾಳಿದ್ದಾರೆ. ಯುವ ನಿರ್ದೇಶಕ ಶ್ರೀಲೇಶ್ ಎಸ್.ನಾಯರ್ ನಿರ್ದೇಶನದಲ್ಲಿ ವಿನಯ್ ರಗಡ್‌ ಲುಕ್​ನಲ್ಲಿ ಅಬ್ಬರಿಸಿದ್ದಾರೆ. ಹಳ್ಳಿ ಬ್ಯಾಕ್‌ಡ್ರಾಪ್‌ನಲ್ಲಿ ನಡೆಯುವ ಚಿತ್ರ ಇದಾಗಿದ್ದು, ಇದುವರೆಗೂ ಈ ರೀತಿಯ ಪಾತ್ರದಲ್ಲಿ ವಿನಯ್ ರಾಜ್‌ ಕುಮಾರ್ ಕಾಣಿಸಿಕೊಂಡಿಲ್ಲ.

ಚಿತ್ರದಲ್ಲಿ ನಾಯಕಿಯಾಗಿ ಕಾಜಲ್‌ ಕುಂದರ್‌ ನಟಿಸಿದ್ದಾರೆ. ಮಯೂರ್‌ ಪಟೇಲ್‌, ಯಶ್‌ ಶೆಟ್ಟಿ, ಬಲ ರಾಜ್‌ವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್‌, ನವೀನ್‌ ಡಿ. ಪಡೀಲ್‌ ಅವರನ್ನು ಒಳಗೊಂಡ ತಾರಾಬಳಗವಿದೆ. ಅಭಿಷೇಕ್‌ ಜಿ. ಕಾಸರಗೋಡು ಕ್ಯಾಮೆರಾ ವರ್ಕ್, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನವಿದೆ.

ಡಾ.ರವಿವರ್ಮ, ಚೇತನ್‌ ಡಿಸೋಜಾ, ಡಿಫ್ರೆಂಟ್‌ ಡ್ಯಾನಿ, ನರಸಿಂಹ ಅವರ ತಂಡ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದೆ. ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರಗಳಲ್ಲಿ 'ಪೆಪೆ' ಸಿನಿಮಾವನ್ನು ಸೆರೆಹಿಡಿಯಲಾಗಿದೆ. ಉದಯ್‌ ಸಿನಿ ವೆಂಚರ್‌, ದೀಪ ಫಿಲ್ಮ್ಸ್ ಬ್ಯಾನರ್‌ನಡಿ ಉದಯ್ ಶಂಕರ್.ಎಸ್ ಹಾಗೂ ಕೋಲಾರದ ಬಿ.ಎಮ್.ಶ್ರೀರಾಮ್ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಸದ್ಯದಲ್ಲೇ ತೆರೆಗೆ ಬರಲಿದೆ.

ಇದನ್ನೂ ಓದಿ: ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಜೊತೆ ಸೂಪರ್​ಸ್ಟಾರ್ ರಾಮ್​ಚರಣ್​​: ಚಿರಂಜೀವಿ​​ ಫ್ಯಾಮಿಲಿಯ ಫೋಟೋ-ವಿಡಿಯೋ - Ram Charan and PV Sindhu

ETV Bharat Logo

Copyright © 2024 Ushodaya Enterprises Pvt. Ltd., All Rights Reserved.