ETV Bharat / entertainment

ವಿನೋದ್ ಪ್ರಭಾಕರ್ ನಟನೆಯ 25ನೇ ಚಿತ್ರದ ಟೈಟಲ್ ಅನಾವರಣಗೊಳಿಸಿದ ಸಚಿವ ಜಿ. ಪರಮೇಶ್ವರ್ - balaraamana dinagalu

ವಿನೋದ್ ಪ್ರಭಾಕರ್ ಅಭಿನಯದ 25ನೇ ಚಿತ್ರದ ಶೀರ್ಷಿಕೆ ಅನಾವರಣಗೊಂಡಿದೆ.

balaraamana dinagalu
ಬಲರಾಮನ ದಿನಗಳು
author img

By ETV Bharat Karnataka Team

Published : Feb 6, 2024, 6:47 PM IST

ನಟನೆ ಜೊತೆಗೆ ಮಾಸ್ ಇಮೇಜ್​​​ನಿಂದ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಸ್ಟಾರ್ ಡಮ್ ಹೊಂದಿರುವ ನಟ ವಿನೋದ್ ಪ್ರಭಾಕರ್. ಮಾದೇವ, ಲಂಕಾಸುರ, ನೆಲ್ಸನ್ ಹೀಗೆ ಬ್ಯಾಕ್ ಟು ಬ್ಯಾಕ್ ಚಿತ್ರಗಳು ಬಿಡುಗಡೆಗೆ ಸಜ್ಜಾಗಿರೋ ಈ ಹೊತ್ತಿನಲ್ಲಿ, ವಿನೋದ್ ಪ್ರಭಾಕರ್ ಅಭಿನಯದ 25ನೇ ಚಿತ್ರದ ಶೀರ್ಷಿಕೆ ಅನಾವರಣಗೊಂಡಿದೆ.

ಇತ್ತೀಚಿಗೆ ಅದ್ಧೂರಿಯಾಗಿ ಟೈಟಲ್​​ ರಿವೀಲ್​ ಈವೆಂಟ್​​ ನೆರವೇರಿತು. ಇದೇ ಸಂದರ್ಭದಲ್ಲಿ 'ಪದ್ಮಾವತಿ ಫಿಲಂಸ್' ಎಂಬ ನೂತನ ನಿರ್ಮಾಣ ಸಂಸ್ಥೆ ಕೂಡ ಆರಂಭವಾಯಿತು. ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್ ನೂತನ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಿದರು. ವಿನೋದ್ ಪ್ರಭಾಕರ್ ಅಭಿನಯದ 25ನೇ ಸಿನಿಮಾಗೆ 'ಬಲರಾಮನ ದಿನಗಳು' ಹೆಸರಿಡಲಾಗಿದೆ. ಆ ದಿನಗಳು ಖ್ಯಾತಿಯ ಕೆ.ಎಂ ಚೈತನ್ಯ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ನಿರ್ಮಾಪಕ ಶ್ರೇಯಸ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ, ಈ ಚಿತ್ರದ ಶೀರ್ಷಿಕೆ ಅನಾವರಣಗೊಂಡಿದೆ. ಇದೇ ಸಂದರ್ಭದಲ್ಲಿ ವಿನೋದ್ ಪ್ರಭಾಕರ್ ಅವರಿಗೆ "ಟೈಗರ್" ಎಂದು ಬಿರುದು ನೀಡಿ ಸನ್ಮಾನಿಸಲಾಗಿದೆ.

balaraamana dinagalu
ಬಲರಾಮನ ದಿನಗಳು

ಸಚಿವ ಪರಮೇಶ್ವರ್ ಮಾತನಾಡಿ, ಪ್ರತಿಯೊಬ್ಬರಿಗೂ ಜೀವನದಲ್ಲಿ ವೈದ್ಯ, ಪೊಲೀಸ್‍, ರಾಜಕಾರಣಿ, ವಿಜ್ಞಾನಿ ಹೀಗೆ ಏನೇನೋ ಆಗಬೇಕು ಎಂಬ ಆಸೆ ಇರುತ್ತದೆ. ಆದರೆ, ನಮ್ಮ ಶ್ರೇಯಸ್‍ಗೆ ಚಿತ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳುವ ಆಸೆ ಇದ್ದು, ಈ ನಿಟ್ಟಿನಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ. ಈ ಹಿಂದೆ ಸಿನಿಮಾಗಳಲ್ಲಿ ಸಂದೇಶ ಇರುತ್ತಿತ್ತು. ಮೌಲ್ಯಗಳ ಪಾಠ ಇರುತ್ತಿತ್ತು. ಸದ್ಯ ಕಮರ್ಷಿಯಲ್‍ ಚಿತ್ರಗಳ ಸಂಖ್ಯೆ ಹೆಚ್ಚಾಗಿದೆ. ಹಣ ಮಾಡಬೇಕು ನಿಜ. ಆದರೆ, ಅದರ ಜೊತೆಗೆ ಚಿತ್ರ ನೋಡುವ ಪ್ರೇಕ್ಷಕರಿಗೆ ಒಂದು ಸಂದೇಶ ಸಹ ಹೋಗಬೇಕು. ಚಲನಚಿತ್ರ ಒಂದು ಪ್ರಬಲ ಮಾಧ್ಯಮ. ಈ ಮಾಧ್ಯಮದ ಮೂಲಕ ಜನರ ಮನಸ್ಸು ಬದಲಾವಣೆ ಮಾಡುವ ಅವಕಾಶವಿರುತ್ತದೆ. ಹಾಗಾಗಿ, ಯಾವ ಸಿನಿಮಾ ಮಾಡಿದರೂ ಅದರ ಮೂಲಕ ಪ್ರೇಕ್ಷಕರಿಗೆ ಒಂದು ಸಂದೇಶ ಕೊಡಿ. ನನಗೆ ಟೈಗರ್ ಪ್ರಭಾಕರ್ ಪರಿಚಿತರು. ಅವರ ಮಗ ಇಂದು ತಮ್ಮ 25ನೇ ಸಿನಿಮಾ ಮಾಡುತ್ತಿದ್ದಾರೆ. ಇದು ತಮಾಷೆ ವಿಷಯವಲ್ಲ. ಅವರು ಇನ್ನೂ 25 ಸಿನಿಮಾಗಳನ್ನು ಮಾಡಲಿ ಎಂದು ಹಾರೈಸಿದರು.

balaraamana dinagalu
ಬಲರಾಮನ ದಿನಗಳು

ಉದಯೋನ್ಮುಖ ನಿರ್ಮಾಪಕ ಶ್ರೇಯಸ್ ಮಾತನಾಡಿ, ಸಿನಿಮಾ ನಿರ್ಮಿಸಬೇಕು ಎಂಬುದು ನನ್ನ ಕನಸು. ಆ ಕನಸಿಗೆ ನನ್ನ ತಂದೆ, ತಾಯಿ ಮತ್ತು ಸಹೋದರ ಶಕ್ತಿ ತುಂಬುತ್ತಿದ್ದಾರೆ. ವಿನೋದ್‍ ಪ್ರಭಾಕರ್ ಅವರು ನನ್ನ ಚಿತ್ರರಂಗದ ಗುರುಗಳು. ಅವರ ಸಹಕಾರದಿಂದ ನಾನು ಪದ್ಮಾವತಿ ಫಿಲಂಸ್ ಎಂಬ ಸಂಸ್ಥೆ ಹುಟ್ಟುಹಾಕಿ, ಈ ಚಿತ್ರ ನಿರ್ಮಿಸುತ್ತಿದ್ದೇನೆ ಎಂದು ತಿಳಿಸಿದರು.

ಇನ್ನು ವಿನೋದ್ ಪ್ರಭಾಕರ್ ಮಾತನಾಡಿ, ನನಗೆ ಈ ಸಂಸ್ಥೆಯವರು "ಟೈಗರ್" ಎಂಬ ಬಿರುದು ಕೊಟ್ಟಿದ್ದಾರೆ. ನನ್ನ ಅಭಿನಯದ ಮೂರು ಚಿತ್ರಗಳು ಬಿಡುಗಡೆಗೆ ಸಜ್ಜಾಗುತ್ತಿವೆ. ಬಿರುದಿಗೆ ಧಕ್ಕೆ ತರದಂತೆ ನೋಡಿಕೊಳ್ಳುತ್ತೇನೆ. ಚೈತನ್ಯ ಅವರ ಆ ದಿನಗಳು ಚಿತ್ರ ನೋಡಿದಾಗಿನಿಂದ ನಾನು ಅವರ ಅಭಿಮಾನಿ. ಅವರ ಜೊತೆಗೆ ಕೆಲಸ ಮಾಡಬೇಕು ಎಂಬ ಆಸೆ ಇತ್ತು. ಅದು ಈಗ ಈಡೇರುತ್ತಿದೆ. ಅವರೇನು ಬಲರಾಮನ ಪಾತ್ರ ಸೃಷ್ಟಿ ಮಾಡಿದ್ದಾರೋ ಅದಕ್ಕೆ ಪ್ರಾಣ ಒತ್ತೆಯಿಟ್ಟು, ಬೆವರು-ರಕ್ತ ಹರಿಸಿ ಅದಕ್ಕೆ ನ್ಯಾಯ ಸಲ್ಲಿಸುತ್ತೇನೆ ಎಂದು ತಿಳಿಸಿದರು.

balaraamana dinagalu
ಬಲರಾಮನ ದಿನಗಳು

ಇದನ್ನೂ ಓದಿ: ನಿರೂಪ್ ಭಂಡಾರಿ - ಸಾಯಿಕುಮಾರ್ ನಟನೆಯ ಸಿನಿಮಾ ಟೈಟಲ್ ರಿವೀಲ್; ಹೆಚ್ಚಿದ ಕುತೂಹಲ

ನಿರ್ದೇಶಕ ಕೆ.ಎಂ ಚೈತನ್ಯ ಮಾತನಾಡಿ, ನಾನು ನಿರ್ದೇಶಿಸಿರುವ ಸಿನಿಮಾಗಳಲ್ಲಿ ಪ್ರತ್ಯಕ್ಷವಾಗಿ ಅಲ್ಲದಿದ್ದರೂ, ಪರೋಕ್ಷವಾಗಿ ಸಂದೇಶ ಕೊಟ್ಟಿದ್ದೇನೆ. ಇದರಲ್ಲೂ ಅದು ಮುಂದುವರೆಯುತ್ತದೆ. ಈ ಚಿತ್ರ ಆಗುತ್ತಿರುವುದಕ್ಕೆ ಮುಖ್ಯ ಕಾರಣ ಶ್ರೇಯಸ್‍. ಈ ಕಥೆ ಆಯ್ಕೆ ಮಾಡಿದ್ದು ಅವರು. ಭೂಗತಲೋಕದ ಬಗ್ಗೆ ಸಾಕಷ್ಟು ಕಥೆಗಳನ್ನು ಮಾಡಿದ್ದೆ. ಅದರಲ್ಲಿ ಯಾವ ಕಥೆ ತೆಗೆದುಕೊಳ್ಳಬೇಕು ಅಂತಾ ಹೇಳಿದ್ದು ಅವರೇ. ಜೊತೆಗೆ ಬಹಳ ವರ್ಷಗಳಿಂದ ವಿನೋದ್‍ ಪ್ರಭಾಕರ್ ಜೊತೆ ಚಿತ್ರ ಮಾಡುವ ಆಸೆ ಇತ್ತು. ಅದಕ್ಕೆ ಪೂರಕವಾಗಿ ಕಥೆ ಸಿಕ್ಕಿದೆ. ಈ ಚಿತ್ರಕ್ಕೆ ಅವರು ಅತ್ಯುತ್ತಮ ಆಯ್ಕೆ. ಇದು ಭೂಗತಲೋಕದ ಸಿನಿಮಾ. ಜೊತೆಗೆ ಸಮಾಜ, ರಾಜಕೀಯ ಹೀಗೆ ಎಲ್ಲಾ ಆಯಾಮಗಳು ಇರುತ್ತವೆ. ಚಿತ್ರದ ಬಗ್ಗೆ ಈಗಲೇ ಹೆಚ್ಚು ಹೇಳುವುದು ಕಷ್ಟ. ಇದು ಯಾವುದೇ ವ್ಯಕ್ತಿಯ ಕುರಿತಾದ ಚಿತ್ರ ಅಲ್ಲ. ಇದರಲ್ಲಿ ಮನರಂಜನೆ ಇರುತ್ತದೆ. ಇಡೀ ಕುಟುಂಬ ನೋಡುವ ಚಿತ್ರ ಎಂದು ತಿಳಿಸಿದರು.

ಇದನ್ನೂ ಓದಿ: ರಿಲೀಸ್​ಗೆ ರೆಡಿ 'ನಗುವಿನ ಹೂಗಳ ಮೇಲೆ': ಹಿರಿತೆರೆಯಲ್ಲಿ‌‌ ಮೋಡಿ ಮಾಡಲು ಸಜ್ಜಾಯ್ತು ಕಿರುತೆರೆ ಜೋಡಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.