ಜುಲೈ 30ರಂದು ಕೇರಳದ ವಯನಾಡ್ ಜಿಲ್ಲೆಯಲ್ಲಿ ಯಾರೂ ಊಹಿಸದ ರೀತಿಯಲ್ಲಿ ಭೂಕುಸಿತ ಸಂಭವಿಸಿದ್ದು, ದೊಡ್ಡ ಪ್ರಮಾಣದಲ್ಲಿ ಸಾವು-ನೋವುಗಳು ಸಂಭವಿಸಿವೆ. ಆ ಪ್ರದೇಶದಲ್ಲಿ ಮನೆಗಳಲ್ಲಿ ಮುಕ್ಕಾಲು ಭಾಗಕ್ಕೂ ಹೆಚ್ಚು ಮನೆಗಳು ಅವಶೇಷಗಳಡಿ ಹೂತು ಹೋಗಿವೆ. ಈ ದುರಂತದಲ್ಲಿ 174 ಜನ ಸಾವನ್ನಪ್ಪಿದರೆ, 180ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಲವರು ಮನೆಗಳನ್ನು ಕಳೆದುಕೊಂಡು ನಿರ್ಗತಿಕರಾದರೆ, ಇನ್ನೂ ಕೆಲವರು ತಮ್ಮ ಕುಟುಂಬವನ್ನು ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಸಾವು ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
கேரள மாநிலம் வயநாடு பகுதியிலும், வால்பாறையிலும் நிலச்சரிவினால் ஏற்பட்ட பேரழிவுகள் என் நெஞ்சைப் பதற வைக்கின்றன. தங்களது அன்புக்குரியவர்களையும், வீடு வாசல், உடைமைகளையும் இழந்து தவிக்கும் குடும்பங்களுக்கு எனது ஆழ்ந்த இரங்கல்கள்.
— Kamal Haasan (@ikamalhaasan) July 30, 2024
பருவநிலை மாற்றத்தின் காரணமாக இயற்கைப் பேரிடர்கள்…
ಘಟನೆ ಬೆನ್ನಲ್ಲೇ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ತಿಳಿಸಿದ್ದಾರೆ. ಇದಲ್ಲದೇ ಈ ದುರಂತ ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಚಿತ್ರರಂಗದ ಗಣ್ಯರು ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ಕಾಲಿವುಡ್ ಸ್ಟಾರ್ಗಳಾದ ಕಮಲ ಹಾಸನ್ ಹಾಗೂ ವಿಜಯ್ ದಳಪತಿ ಅವರು ಮೊದಲನೇಯದಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಕುಟುಂಬದವರನ್ನು ಕಳೆದುಕೊಂಡು ದುಃಖದಲ್ಲಿರುವವರಿಗೆ ಸಾಂತ್ವನ ಹೇಳಿದ್ದಾರೆ.
Deeply saddened on hearing the tragic news of landslide #Wayanad, #Kerala.
— TVK Vijay (@tvkvijayhq) July 30, 2024
My thoughts and prayers are with the bereaved families.
Request the Government authorities that the necessary rescue and relief measures be provided to the affected on a war-footing.
ವಿಜಯ್ ಹಾಗೂ ಕಮಲ್ ಹಾಸನ್ ಅವರು ದುರಂತದ ಬಗ್ಗೆ ತೀವ್ರ ಕಳವಳವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ. ವಯನಾಡ್ ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿರುವ ಇವರು, ಸಾವ್ನಪ್ಪಿದವರಿಗೆ ಸಂತಾಪ ಸೂಚಿಸಿ, ಅವರ ಕುಟುಂಬದವರಿಗೆ ಧೈರ್ಯ ತುಂಬಿದ್ದಾರೆ. ಕಮಲ್ ಹಾಸನ್ ಅವರು ತಮಿಳಿನಲ್ಲಿ ಪೋಸ್ಟ್ ಮಾಡಿದ್ದರೆ, ವಿಜಯ್ ಅವರು ಇಂಗ್ಲಿಷ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
.#WayanadLandslide my thoughts and prayers with the families.. Heartbreaking..! Respects to all members of Government agencies and people on the field helping the families with rescue operations 🙏🏼
— Suriya Sivakumar (@Suriya_offl) July 31, 2024
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ವಿಜಯ್ ದಳಪತಿ, "ಕೇರಳದ ವಯನಾಡ್ನಲ್ಲಿ ಸಂಭವಿಸಿದ ಭೂಕುಸಿತದ ದುರಂತ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ದುಃಖಿತ ಕುಟುಂಬಗಳಿಗೆ ನನ್ನ ಸಾಂತ್ವನ. ಭೂಕುಸಿತದ ಸಂತ್ರಸ್ತರಿಗೆ ಅಗತ್ಯ ರಕ್ಷಣಾ ಮತ್ತು ಪರಿಹಾರ ಕ್ರಮಗಳನ್ನು ಒದಗಿಸುವಂತೆ ಸರ್ಕಾರದ ಅಧಿಕಾರಿಗಳಿಗೆ ವಿನಂತಿಸುತ್ತೇನೆ" ಎಂದು ಬರೆದಿದ್ದಾರೆ.
ರಕ್ಷಣಾ ಸಿಬ್ಬಂದಿಗೆ ಧನ್ಯವಾದ ಸಲ್ಲಿಸಿದ ಕಮಲ್: ಇಂಡಿಯನ್ 2 ನಟ ಕಮಲ ಹಾಸನ್ ಎಕ್ಸ್ ಪೋಸ್ಟ್ನಲ್ಲಿ, "ಕೇರಳದ ವಯನಾಡ್ ಮತ್ತು ವಾಲ್ಪಾರೈನಲ್ಲಿ ಭೂಕುಸಿತದಿಂದ ಉಂಟಾದ ವಿಪತ್ತುಗಳ ಬಗ್ಗೆ ನನ್ನ ಹೃದಯ ಮಿಡಿಯುತ್ತದೆ. ತಮ್ಮ ಪ್ರೀತಿಪಾತ್ರರು, ಮನೆಗಳು ಮತ್ತು ವಸ್ತುಗಳನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಹವಾಮಾನ ಬದಲಾವಣೆಯಿಂದಾಗಿ ನೈಸರ್ಗಿಕ ವಿಕೋಪಗಳು ಸಾಮಾನ್ಯ ಸಂಗತಿಯಾಗಿವೆ. ಇದರ ಪ್ರಭಾವವನ್ನು ಅರ್ಥಮಾಡಿಕೊಂಡು ನಾವು ಎಲ್ಲರೂ ಕೂಡಿ ಕೆಲಸ ಮಾಡುವುದು ಬಹಳ ಅವಶ್ಯಕ. ಇಂತಹ ಆಪತ್ತು ತುಂಬಿರುವ ಸನ್ನಿವೇಶದಲ್ಲಿ ಜನರನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ತೊಡಗಿರುವ ಸೇನಾಪಡೆಯವರಿಗೆ, ರಾಜ್ಯ ಸರ್ಕಾರಗಳ ಸಿಬ್ಬಂದಿಗೆ ನನ್ನ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ. ರಕ್ಷಣಾ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಕೇಳುತ್ತೇನೆ" ಎಂದು ಹಂಚಿಕೊಂಡಿದ್ದಾರೆ.
ಇದೇ ರೀತಿಯಲ್ಲಿ ನಟ ಸೂರ್ಯ ಶಿವಕುಮಾರ್ ಎಕ್ಸ್ ಪೋಸ್ಟ್ನಲ್ಲಿ, "ಕುಟುಂಬಗಳಿಗೆ ನನ್ನ ಸಾಂತ್ವನಗಳು. ಇದು ಹೃದಯ ವಿದ್ರಾವಕ ಘಟನೆ! ರಕ್ಷಣಾ ಕಾರ್ಯಾಚರಣೆಯಲ್ಲಿ ಕುಟುಂಬಗಳಿಗೆ ಸಹಾಯ ಮಾಡುತ್ತಿರುವ ಎಲ್ಲ ಸರ್ಕಾರಿ ಸಂಸ್ಥೆಗಳು ಮತ್ತು ಕಾರ್ಯಾಚರಣೆಯಲ್ಲಿ ತೊಡಗಿರುವ ಜನರಿಗೆ ನನ್ನ ಗೌರವಪೂರ್ವಕ ನಮನಗಳು" ಎಂದು ಬರೆದುಕೊಂಡಿದ್ದಾರೆ.
ಅಂತೆಯೇ ನಟಿ ರಶ್ಮಿಕಾ ಮಂದಣ್ಣ ಕೂಡ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ದುರಂತದ ಚಿತ್ರವೊಂದನ್ನು ಹಂಚಿಕೊಂಡು, "ಈ ಚಿತ್ರವನ್ನು ನೋಡಿ ನನ್ನ ಹೃದಯ ಚೂರಾಯಿತು. ಕ್ಷಮಿಸಿ, ಇದು ತುಂಬಾ ಭಯಾನಕವಾಗಿದೆ. ಸಂತ್ರಸ್ತ ಕುಟುಂಬಗಳಿಗೆ ನನ್ನ ಪ್ರಾರ್ಥನೆಗಳು" ಎಂದು ಪ್ರತಿಕ್ರಿಯಿಸಿದ್ದಾರೆ.
ಮತ್ತೊಂದೆಡೆ ಭೂಮಿ ಪಡ್ನೇಕರ್ ಕೂಡ ಸ್ಟೋರಿ ಹಂಚಿಕೊಂಡಿದ್ದು, "ಅಗಾಧ ಮಾನವ ನಷ್ಟವನ್ನು ನೋಡಿದರೆ ಹೃದಯ ವದ್ರಾವಕವಾಗಿದೆ. ಕೇರಳ ಭೂಕುಸಿತ ಹಾಗೂ ಹೌರಾ- ಮುಂಬೈ ರೈಲು ಅಪಘಾತದಲ್ಲಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪ" ಎಂದು ಬರೆದಿದ್ದಾರೆ. ಮಲಯಾಳಂ ನಟರಾದ ಮಮ್ಮುಟ್ಟಿ, ಮೋಹನ್ ಲಾಲ್ ಕೂಡ ದುರಂತದಲ್ಲಿ ಸಾವನ್ನಪ್ಪಿದವರಿಗೆ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ. ಮಲಯಾಳಂ ನಟಿ ನಿಖಿಲಾ ವಿಮಲ್ ಅವರು ವಯನಾಡ್ ಭೂಕುಸಿತದ ಸಂತ್ರಸ್ತರ ಸಂಕಷ್ಟ ಪರಿಹಾರ ಕಾರ್ಯಾಚರಣೆಯ ಭಾಗವಾಗಿರುವ ಸ್ವಯಂಸೇವಕರ ತಂಡದ ಜೊತೆ ಸೇರಿಕೊಂಡು, ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.
ಸಂಕಷ್ಟ ಪರಿಹಾರ ನಿಧಿಗೆ 20 ಲಕ್ಷ ರೂ. ನೀಡಿದ ವಿಕ್ರಮ್: ತಂಗಲನ್ ಬಿಡುಗಡೆಗಾಗಿ ಕಾಯುತ್ತಿರುವ ತಮಿಳು ನಟ ಚಿಯಾನ್ ವಿಕ್ರಮ್ ಅವರು ವಯನಾಡ್ ಭೂಕುಸಿತದ ಸಂಸತ್ರಸ್ತರಿಗೆ ಸಹಾಯ ಮಾಡಲು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸಂಕಷ್ಟ ಪರಿಹಾರ ನಿಧಿಗೆ 20 ಲಕ್ಷ ರೂಪಾಯಿ ನೀಡಿದ್ದಾರೆ. ನಟ ಮಮ್ಮುಟ್ಟಿ ಅವರು ತಮ್ಮ ಚಾರಿಟೆಬಲ್ ಟ್ರಸ್ಟ್ ಮೂಲಕ ಬದುಕುಳಿದವರಿಗೆ ಅಗತ್ಯವಿರುವ ಅಹಾರ ಪದಾರ್ಥಗಳು, ಔಷಧಗಳು, ಬಟ್ಟೆಗಳು ಹಾಗೂ ಇತರ ಅಗತ್ಯ ವಸ್ತುಗಳನ್ನು ನೀಡಲು ಬೆಂಗಾವಲು ಪಡೆಯನ್ನು ವಯನಾಡ್ಗೆ ಕಳುಹಿಸಿದ್ದಾರೆ.
ಇದನ್ನೂ ಓದಿ: ಕಿಚ್ಚನ 'ಮ್ಯಾಕ್ಸ್' ಬಿಡುಗಡೆಗೆ ಮುಹೂರ್ತ ಫಿಕ್ಸ್: ಇನ್ಮುಂದೆ ವರ್ಷಕ್ಕೆ 2 ಸಿನಿಮಾ ಕೊಡಲಿದ್ದಾರೆ ಸುದೀಪ್ - MAX movie