ETV Bharat / health

ಶುಗರ್​ ನಿಯಂತ್ರಿಸಬೇಕೆ?: ಮಧುಮೇಹಗಳಿಗೆ ವೈದ್ಯರು ಸೂಚಿಸುವ ವ್ಯಾಯಾಮಗಳು ಇಲ್ಲಿದೆ ಟ್ರೈ ಮಾಡಿ ನೋಡಿ - Exercises for Diabetes

author img

By ETV Bharat Health Team

Published : Sep 14, 2024, 4:06 PM IST

Best Exercises for Diabetes: ಸಕ್ಕರೆಯು ದೀರ್ಘಕಾಲದ ಕಾಯಿಲೆಗಳಲ್ಲಿ ಒಂದಾಗಿದೆ. ಒಮ್ಮೆ ರಕ್ತದಲ್ಲಿ ಸಕ್ಕರೆಯ ಅಂಶ ಪತ್ತೆಯಾದ ನಂತರ ಜೀವನ ಕ್ರಮದಲ್ಲಿ ಹಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಆಹಾರದಲ್ಲಿ ಬದಲಾವಣೆ ಮತ್ತು ಔಷಧಗಳನ್ನು ಬಳಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ. ಆದರೆ, ಕೆಲವು ವ್ಯಾಯಾಮಗಳಿಂದ ಮಧುಮೇಹವನ್ನೂ ನಿಯಂತ್ರಿಸಬಹುದು ಎನ್ನುತ್ತಾರೆ ವೈದ್ಯರು.

EXERCISES FOR DIABETES  DIABETES AND EXERCISE  DIABETES PATIENTS EXERCISES AT HOME  WALKING FOR DIABETES
ಸಾಂದರ್ಭಿಕ ಚಿತ್ರ (ETV Bharat)

Exercise to Lower Blood Sugar: ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನರನ್ನು ಕಾಡುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಮಧುಮೇಹವೂ ಒಂದು. ಒಮ್ಮೆ ಮಧುಮೇಹ ಬಂದರೆ ಜೀವನ ಪರ್ಯಂತ ಔಷಧಿ ಸೇವಿಸಬೇಕಾಗುತ್ತದೆ. ಆಹಾರದ ವಿಷಯದಲ್ಲಿ ಸಾಕಷ್ಟು ಕಾಳಜಿ ವಹಿಸಬೇಕು. ಇಲ್ಲದಿದ್ದರೆ, ರಕ್ತದಲ್ಲಿನ ಗ್ಲೂಕೋಸ್ ಪ್ರಮಾಣವು ಹೆಚ್ಚಾಗುತ್ತದೆ. ಮೂತ್ರಪಿಂಡ ಮತ್ತು ಹೃದಯ ಸಂಬಂಧಿ ಕಾಯಿಲೆಗಳಂತಹ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಆದಾಗ್ಯೂ, ಮಧುಮೇಹ ಪೀಡಿತರು ಪ್ರತಿದಿನ ಕೆಲವು ರೀತಿಯ ವ್ಯಾಯಾಮಗಳನ್ನು ಮಾಡುವ ಮೂಲಕ ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು ಎಂದು ಸೂಚಿಸಲಾಗಿದೆ (ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ ರಿಪೋರ್ಟ್​). ಸಕ್ಕರೆಯನ್ನು ನಿಯಂತ್ರಣದಲ್ಲಿಡುವ ವ್ಯಾಯಾಮಗಳು ಯಾವುವು ಎಂಬುದನ್ನು ಈ ಸ್ಟೋರಿಯಲ್ಲಿ ತಿಳಿದುಕೊಳ್ಳೋಣ.

ಈಜು: ಈಜು ಉತ್ತಮ ಕಾರ್ಡಿಯೋ ವ್ಯಾಯಾಮ. ಇದು ಕ್ಯಾಲೊರಿಗಳನ್ನು ಬರ್ನ್ ಮಾಡಲು ಮತ್ತು ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ಈಜುವುದರಿಂದ ಸ್ನಾಯುಗಳು ಗಟ್ಟಿಯಾಗಿ ಕೆಲಸ ಮಾಡುತ್ತವೆ. ಇದರಿಂದ ದೇಹದಲ್ಲಿ ಇನ್ಸುಲಿನ್ ಅನ್ನು ಹೆಚ್ಚು ಪರಿಣಾಮಕಾರಿಯಾಗಿ ಬಿಡುಗಡೆಯಾಗುತ್ತದೆ. ಈಜುವಾಗ ಸ್ನಾಯುಗಳು ಶಕ್ತಿಗಾಗಿ ಗ್ಲೂಕೋಸ್ ಬಳಸುತ್ತವೆ. ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟ ಕಡಿಮೆ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಅದಕ್ಕಾಗಿಯೇ ಸಕ್ಕರೆ ಕಾಯಿಲೆ ಇರುವವರು ಸ್ವಿಮ್ಮಿಂಗ್​​ ​ ಮಾಡಿದರೆ ತುಂಬಾ ಉತ್ತಮ ಎಂದು ಹೇಳುತ್ತಾರೆ.

ಸೈಕ್ಲಿಂಗ್: ಸೈಕ್ಲಿಂಗ್ ಮಾಡುವಾಗ ನಮ್ಮ ಸ್ನಾಯುಗಳು ಹೆಚ್ಚು ಕೆಲಸ ಮಾಡುತ್ತವೆ. ಈ ಸ್ನಾಯುಗಳ ಚಲನೆಗೆ ಶಕ್ತಿಯ ಅಗತ್ಯವಿರುತ್ತದೆ. ಈ ಶಕ್ತಿಯನ್ನು ಪಡೆಯಲು ನಮ್ಮ ದೇಹವು ರಕ್ತದಲ್ಲಿನ ಗ್ಲೂಕೋಸ್ ಅನ್ನು ಬಳಸುತ್ತದೆ. ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಮಧುಮೇಹದಿಂದ ಬಳಲುತ್ತಿರುವವರು ನಿಯಮಿತವಾಗಿ ಸೈಕ್ಲಿಂಗ್ ಮಾಡುವ ಮೂಲಕ ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು ಎಂದು ತಜ್ಞರು ಸೂಚಿಸುತ್ತಾರೆ.

2018 ರಲ್ಲಿ 'ಜರ್ನಲ್ ಆಫ್ ಕ್ಲಿನಿಕಲ್ ಎಂಡೋಕ್ರೈನಾಲಜಿ ಮತ್ತು ಮೆಟಾಬಾಲಿಸಮ್'ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಸೈಕ್ಲಿಂಗ್ ಟೈಪ್-2 ಡಯಾಬಿಟಿಸ್ ಹೊಂದಿರುವ ಜನರಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಬ್ರೆಜಿಲ್‌ನ ಯೂನಿವರ್ಸಿಡೇಡ್ ಫೆಡರಲ್ ಡೊ ರಿಯೊ ಗ್ರಾಂಡೆ ಡೊ ಸುಲ್ (UFRGS) ಡಾ.ಡೇನಿಯಲಾ ಆಂಪಿಯರ್ ಈ ಸಂಶೋಧನೆಯಲ್ಲಿ ಭಾಗವಹಿಸಿದ್ದರು.

ನಡಿಗೆ: ಮಧುಮೇಹ ಇರುವವರು ಸಮತೋಲಿತ ಆಹಾರ ಸೇವನೆ ಮತ್ತು ನಿತ್ಯ ವಾಕಿಂಗ್ ಮಾಡುವುದರಿಂದ ಆರೋಗ್ಯವಾಗಿರಬಹುದು. ಬೆಳಗ್ಗೆ ಮತ್ತು ಸಂಜೆ ಅರ್ಧ ಗಂಟೆ ವಾಕಿಂಗ್ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡಬಹುದು ಎನ್ನುತ್ತಾರೆ ತಜ್ಞರು. ವಾಕಿಂಗ್ ಉತ್ತಮ ವ್ಯಾಯಾಮವಾಗಿರುವುದರಿಂದ, ಮಧುಮೇಹಿಗಳು ಪ್ರತಿದಿನ ನಡೆಯಲು ಸಲಹೆ ನೀಡುತ್ತಾರೆ ವೈದ್ಯರು.

ಜಾಗಿಂಗ್: ಮಧುಮೇಹದಿಂದ ಬಳಲುತ್ತಿರುವ ಜನರು ಜಾಗಿಂಗ್ ಮಾಡುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಸಾಮಾನ್ಯವಾಗಿರಿಸಿಕೊಳ್ಳಲು ಸಾಧ್ಯವಾಗುತ್ತದೆ. ಆದರೆ, ಜಾಗಿಂಗ್ ಮಾಡುವ ಮೊದಲು ನೀವು ವೈಯಕ್ತಿಕ ವೈದ್ಯರನ್ನು ಸಂಪರ್ಕಿಸಬೇಕು. ಅವರ ಸಲಹೆ ಮತ್ತು ಸೂಚನೆಗಳ ಪ್ರಕಾರವೇ ಜಾಗಿಂಗ್ ಮಾಡಬೇಕು ಎನ್ನುತ್ತಾರೆ ತಜ್ಞರು.

ಯೋಗ: ಮಧುಮೇಹದಿಂದ ಬಳಲುತ್ತಿರುವವರು ಯೋಗ ಮಾಡುವುದರಿಂದ ಗ್ಲೂಕೋಸ್ ಪ್ರಮಾಣ ಸಾಮಾನ್ಯವಾಗಿರುತ್ತದೆ ಮತ್ತು ಒತ್ತಡ ಕಡಿಮೆಯಾಗುತ್ತದೆ. ಯೋಗವು ಇನ್ಸುಲಿನ್ ಸೂಕ್ಷ್ಮತೆ ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.

ವಿಶೇಷ ಸೂಚನೆ: ಇಲ್ಲಿ ನಿಮಗೆ ನೀಡಿರುವ ಎಲ್ಲ ಆರೋಗ್ಯ ಮಾಹಿತಿ ಮತ್ತು ವೈದ್ಯಕೀಯ ಸಲಹೆಗಳು ನಿಮ್ಮ ತಿಳಿವಳಿಕೆಗಾಗಿ ಮಾತ್ರ. ವೈಜ್ಞಾನಿಕ ಸಂಶೋಧನೆ, ಅಧ್ಯಯನಗಳು, ವೈದ್ಯಕೀಯ ಮತ್ತು ಆರೋಗ್ಯ ವೃತ್ತಿಪರ ಸಲಹೆಯನ್ನು ಆಧರಿಸಿ ನಾವು ಈ ಮಾಹಿತಿ ನಿಮಗೆ ನೀಡಿದ್ದೇವೆ. ಆದರೆ, ಇವುಗಳನ್ನು ಅನುಸರಿಸುವ ಮೊದಲು ಪರಿಣತ ವೈದ್ಯರ ಸಲಹೆಯನ್ನು ತೆಗೆದುಕೊಳ್ಳುವುದು ಉತ್ತಮ.

ಹೆಚ್ಚಿನ ಮಾಹಿತಿಗಾಗಿ ನೀವು ಈ ವೆಬ್​ಸೈಟ್​ಗೆ ಸಂಪರ್ಕಿಸಬಹುದು: (National Library of Medicine Report)

https://www.ncbi.nlm.nih.gov/books/NBK549946/

ಇದನ್ನೂ ಓದಿ:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.