ETV Bharat / health

ರಾಜ್ಯದಲ್ಲಿ ಡೆಂಘೀ ಭೀತಿ; ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮುಂದಾದ ಆರೋಗ್ಯ ಇಲಾಖೆ - Dengue cases in Karnataka

author img

By ETV Bharat Karnataka Team

Published : May 15, 2024, 7:13 PM IST

Updated : May 15, 2024, 7:23 PM IST

Dengue cases in Karnataka: ಮಳೆಗಾಲದಲ್ಲಿ ಡೆಂಘೀ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಬಾಧಿಸುವುದು ಸಾಮಾನ್ಯ. ಹಾಗಾಗಿ ಡೆಂಘೀ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತನ್ನ ಅಧೀನ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸುವುದರ ಮೂಲಕ ಆರೋಗ್ಯ ಇಲಾಖೆಯು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ.

DENGUE CASES IN KARNATAKA
ಸಂಗ್ರಹ ಚಿತ್ರ (ETV Bharat)

ಬೆಂಗಳೂರು : ರಾಜ್ಯದಲ್ಲಿ ಇಷ್ಟು ದಿನ ಬಿಸಿಲಿನ ತಾಪಕ್ಕೆ ನಲುಗಿದ್ದ ಜನಕ್ಕೆ ಈಗ ಮಳೆ ತಂಪೆರೆದಿದೆ. ಇದರ ಬೆನ್ನಲ್ಲೇ ಡೆಂಘೀ ಭೀತಿ ಕೂಡ ಎದುರಾಗಿದೆ. ಮೇ 13ರ ವರೆಗೆ ರಾಜ್ಯದಲ್ಲಿ ಒಟ್ಟು 2,877 ಡೆಂಘೀ ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ 1,725 ಪ್ರಕರಣಗಳು ವರದಿಯಾಗಿದ್ದವು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಈ ಸಾಲಿನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಇಲಾಖೆಯ ಅಂಕಿ - ಅಂಶಗಳು ತಿಳಿಸಿವೆ.

ಮಳೆಗಾಲದಲ್ಲಿ ಡೆಂಘೀ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ. ಇದಕ್ಕಾಗಿ ಇಲಾಖೆಯು ರಾಷ್ಟ್ರೀಯ ಆರೋಗ್ಯ ಮಿಷನ್ (NHM) ನಿರ್ದೇಶಕರ ಅಧ್ಯಕ್ಷತೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳು (ಡಿಹೆಚ್​ಒ) ಮತ್ತು ರೋಗ ನಿಯಂತ್ರಣ ಅಧಿಕಾರಿಗಳೊಂದಿಗೆ ಸಭೆಗಳು ನಡೆಸುವುದರ ಮೂಲಕ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಲ್ಲದೆ, ಆರೋಗ್ಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಪ್ರತಿನಿತ್ಯ ಮನೆ-ಮನೆಗೆ ಭೇಟಿ ನೀಡುವುದು, ಜಿಲ್ಲಾ ಆಸ್ಪತ್ರೆಗಳಲ್ಲಿ ದೃಢಪಟ್ಟ ಡೆಂಘೀ ಪ್ರಕರಣಗಳ ಮೇಲ್ವಿಚಾರಣೆ, ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ಜಾಗೃತಿ ಅಭಿಯಾನಗಳು ಮತ್ತು ಪರೀಕ್ಷಾ ಕಿಟ್‌ಗಳು ಮತ್ತು ಚಿಕಿತ್ಸಾ ಔಷಧಿಗಳ ಲಭ್ಯತೆಯನ್ನು ಪರೀಶೀಲನೆ ನಡೆಸಲಾಗುತ್ತಿದೆ.

ಈ ಡೆಂಘೀ ಜ್ವರವೂ ವಿಶೇಷವಾಗಿ ಈಡಿಸ್‌ ಎಂಬ ಹೆಣ್ಣು ಸೊಳ್ಳೆಯ ಕಚ್ಚುವಿಕೆಯಿಂದ ಉಂಟಾಗುತ್ತದೆ. ಸೋಂಕಿತ ವ್ಯಕ್ತಿಯನ್ನು ಕಚ್ಚಿ ನಂತರ ಸೋಂಕಿಲ್ಲದ ವ್ಯಕ್ತಿಯನ್ನು ಕಚ್ಚಿದಾಗ ಈ ಕಾಯಿಲೆಯು ಬರುತ್ತದೆ. ಇದು ಪ್ರಪಂಚದಾದ್ಯಂತ ಉಷ್ಣವಲಯದ ಮತ್ತು ಉಪ ಉಷ್ಣವಲಯದ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ.

ಡೆಂಘೀ ರೋಗದ ಲಕ್ಷಣಗಳುರೋಗ ನಿಯಂತ್ರಣಾ ಕ್ರಮಗಳು
ಮೈಬಿಸಿಸೊಳ್ಳೆಗಳು ಕಚ್ಚದಂತೆ ಕ್ರಮ ವಹಿಸುವುದು
ತೀವ್ರ ತಲೆ ನೋವುಮನೆ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸುವುದು
ಕೀಲು ಮತ್ತು ಸ್ನಾಯು ನೋವುಸೊಳ್ಳೆ ಪರದೆ ಬಳಕೆ ಮಾಡುವುದು
ದದ್ದು ಮತ್ತು ರಕ್ತಸ್ರಾವಸೊಳ್ಳೆಗಳ ಸಂತಾನೋತ್ಪತ್ತಿ ಸ್ಥಳ ಕಡಿಮೆ ಮಾಡುವುದು
ವಾಂತಿಶುದ್ಧ ಹಾಗೂ ಕುದಿಸಿ ಆರಿಸಿದ ನೀರು ಬಳಕೆ ಮಾಡುವುದು
ವಾಕರಿಕೆಸೀನುವಾಗ, ಕೆಮ್ಮುವಾಗ ಕರವಸ್ತ್ರಗಳ ಬಳಕೆ ಮಾಡುವುದು

ಡೆಂಘೀ ರೋಗ ಲಕ್ಷಣಗಳು: ಮೈಬಿಸಿ (ತಾಪಮಾನ) ಹೆಚ್ಚಾಗುವುದು, ತೀವ್ರ ತಲೆನೋವು, ಕೀಲು ಮತ್ತು ಸ್ನಾಯು ನೋವು, ದದ್ದು ಮತ್ತು ಕೆಲವು ಸಲ ರಕ್ತಸ್ರಾವ, ವಾಂತಿ ಮತ್ತು ವಾಕರಿಕೆ ಕಾಣಿಸಿಕೊಳ್ಳಬಹುದು. ಕೆಲವು ಸಂದರ್ಭಗಳಲ್ಲಿ ಇದು ಡೆಂಘೀ ಹೆಮರಾಜಿಕ್ ಜ್ವರ ಎಂಬ ತೀವ್ರವಾದ ರೂಪಕ್ಕೆ ತಿರುಗಿ ಜೀವಕ್ಕೆ ಅಪಾಯಕಾರಿಯಾಗಬಹುದು.

ಎಚ್ಚರಿಕೆಗಳು: ಡೆಂಘೀಗೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಆದರೆ, ರೋಗಲಕ್ಷಣಗಳ ಬೆಂಬಲ ಮತ್ತು ನಿರ್ವಹಣೆ ಮುಖ್ಯವಾಗಿದೆ. ಸೊಳ್ಳೆಗಳ ಸಂತಾನೋತ್ಪತ್ತಿ ಸ್ಥಳಗಳನ್ನು ಕಡಿಮೆ ಮಾಡುವುದು ಮತ್ತು ಸೊಳ್ಳೆ ಕಡಿತದಿಂದ ರಕ್ಷಣೆ ಮಾಡಿಕೊಳ್ಳುವುದು ಮಹತ್ವದ ವಿಷಯ. ಡೆಂಘೀಯಿಂದ ದೂರ ಉಳಿಯಲು ಸೊಳ್ಳೆ ಕಚ್ಚದಂತೆ ಸದಾ ಎಚ್ಚರವಹಿಸಬೇಕು. ಶುದ್ಧ ಹಾಗೂ ಕುದಿಸಿ ಆರಿಸಿದ ನೀರನ್ನು ಕುಡಿಯುವುದು ಬಹಳ ಉತ್ತಮ. ಸೀನುವಾಗ, ಕೆಮ್ಮುವಾಗ ಕರವಸ್ತ್ರಗಳನ್ನು ಅಡ್ಡಲಾಗಿ ಇಟ್ಟುಕೊಳ್ಳಬೇಕು. ಸೊಳ್ಳೆಗಳು ಕಡಿಯದಂತೆ ನೋಡಿಕೊಳ್ಳಬೇಕು. ಮನೆ ಸುತ್ತಲೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು.

ಇದನ್ನೂ ಓದಿ: ಡೆಂಗ್ಯೂನ ದ್ವೀತಿಯ ಸೋಂಕಿಗಿಂತ ಪ್ರಾಥಮಿಕ ಸೋಂಕು ಅಪಾಯಕಾರಿ: ಅಧ್ಯಯನ

Last Updated : May 15, 2024, 7:23 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.