Health benefits of flax Seed: ಅಗಸೆ ಬೀಜಗಳ ಸೇವನೆಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಅಗಸೆ ಬೀಜದಲ್ಲಿ ಪೋಷಕಾಂಶಗಳು ಸಮೃದ್ಧವಾಗಿವೆ. ಇದರಲ್ಲಿ ವಿಟಮಿನ್-ಬಿ1, ಪ್ರೊಟೀನ್, ಒಮೆಗಾ-3 ಕೊಬ್ಬಿನಾಮ್ಲಗಳು, ಫೈಬರ್, ತಾಮ್ರ, ಫೋಲೇಟ್, ಮೆಗ್ನೀಸಿಯಮ್, ಮ್ಯಾಂಗನೀಸ್, ಸತು ಸೇರಿದಂತೆ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ಆದರೆ, ಹುರಿದ ಅಗಸೆ ಬೀಜಗಳನ್ನು ಸೇವಿಸುವುದರಿಂದ ಅಧಿಕ ಕೊಲೆಸ್ಟ್ರಾಲ್, ಮಧುಮೇಹ ಸೇರಿದಂತೆ ಹಲವು ರೋಗಗಳನ್ನು ನಿಯಂತ್ರಣದಲ್ಲಿಡಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು.
ಹುರಿದ ಅಗಸೆ ಬೀಜದ ಲಾಭಗಳು:
- ಹುರಿದ ಅಗಸೆ ಬೀಜಗಳನ್ನು ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಯಾಗುತ್ತದೆ. ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಒಂದು ಚಮಚ ಹುರಿದ ಅಗಸೆ ಬೀಜಗಳನ್ನು ಸೇವಿಸಿದರೆ ಅವರ ಸಮಸ್ಯೆಯನ್ನು ಕಡಿಮೆ ಮಾಡಬಹುದು ಎಂದು ತಜ್ಞರು ಸಲಹೆ ನೀಡುತ್ತಾರೆ.
- ಹುರಿದ ಅಗಸೆ ಬೀಜಗಳನ್ನು ತಿನ್ನುವುದು ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ. ಇದು ಕರಗುವ ಫೈಬರ್ ಅನ್ನು ಹೊಂದಿರುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
- ಅಗಸೆ ಬೀಜಗಳ ಸೇವನೆಯಿಂದ ರಕ್ತದಲ್ಲಿನ ಸಕ್ಕರೆಯ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರ ನಿಯಮಿತ ಸೇವನೆಯು ಮಧುಮೇಹದ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ.
- ಆರೋಗ್ಯ ತಜ್ಞರ ಪ್ರಕಾರ, ಅಗಸೆ ಬೀಜಗಳಲ್ಲಿ ಫೈಬರ್ ಸಮೃದ್ಧವಾಗಿವೆ. ಇದು ಅಜೀರ್ಣ ಸಮಸ್ಯೆಯನ್ನು ಹೋಗಲಾಡಿಸಲು ಸಹ ಸಹಾಯ ಮಾಡುತ್ತದೆ. ಅಜೀರ್ಣದ ಸಂದರ್ಭದಲ್ಲಿ, ಹುರಿದ ಅಗಸೆಬೀಜದ ಪುಡಿಯ ಸೇವನೆಯು ಅತ್ಯಂತ ಪ್ರಯೋಜನಕಾರಿಯಾಗಿದೆ.
- ಅಗಸೆ ಬೀಜಗಳು ಗ್ಯಾಸ್ಟ್ರಿಕ್, ಮಲಬದ್ಧತೆ, ಅಜೀರ್ಣದಂತಹ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ. ಅಜೀರ್ಣದಂತಹ ಸಮಸ್ಯೆಗಳನ್ನು ನಿವಾರಿಸಲು, ನೀವು ಬಿಸಿನೀರಿನೊಂದಿಗೆ ಹುರಿದ ಅಗಸೆಬೀಜದ ಪುಡಿಯನ್ನು ಸೇವಿಸಬಹುದು.
- ಹುರಿದ ಅಗಸೆಬೀಜವನ್ನು ಸೇವಿಸುವುದರಿಂದ ನಿದ್ರಾಹೀನತೆಯ ಸಮಸ್ಯೆಗೆ ದೂರವಾಗಿಸಲು ಸಹಾಯ ಮಾಡುತ್ತದೆ. ಇದು ಒತ್ತಡವನ್ನು ಕಡಿಮೆ ಮಾಡುವ ಮೂಲಕ ನಿದ್ರೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಅಗಸೆ ಬೀಜಗಳು ಫೈಬರ್ ಅನ್ನು ಹೊಂದಿರುತ್ತವೆ.
- ಇದು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ ಹಾಗೂ ಜೀರ್ಣ ಶಕ್ತಿಯನ್ನು ದ್ವಿಗುಣಗೊಳಿಸುತ್ತದೆ. ಮಾಂಸಾಹಾರಿ ತಿನ್ನುವವರು ಮೊಟ್ಟೆಯ ಬದಲು ಅಗಸೆ ಬೀಜಗಳನ್ನು ಸೇವಿಸುವುದು ಉತ್ತಮ.
- ಚಳಿಗಾಲದಲ್ಲಿ ನೆಗಡಿ, ಕೆಮ್ಮಿನಂಥ ಸೀಸನ್ ಕಾಯಿಲೆಗಳು ಸಾಮಾನ್ಯವಾಗಿರುತ್ತವೆ. ಇಂತಹ ಕಾಯಿಲೆಗಳಿಂದ ದೂರವಿರಲು ಅಗಸೆ ಬೀಜಗಳನ್ನು ಸೇವಿಸುವುದು ಒಳ್ಳೆಯದು ಎನ್ನುತ್ತಾರೆ ತಜ್ಞರು.
- ಅಗಸೆ ಬೀಜಗಳು ಒಮೆಗಾ-3 ಕೊಬ್ಬಿನಾಮ್ಲಗಳು ಮತ್ತು ಅಮೈನೋ ಆಮ್ಲಗಳನ್ನು ಸಹ ಹೊಂದಿರುತ್ತವೆ. ಇವು ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ.
ಹೆಚ್ಚಿನ ಮಾಹಿತಿಗಾಗಿ ಈ ವೆಬ್ಸೈಟ್ಗಳನ್ನು ವೀಕ್ಷಿಸಬಹುದು:
- https://www.bhf.org.uk/informationsupport/heart-matters-magazine/nutrition/ask-the-expert/flax-seeds
- https://pmc.ncbi.nlm.nih.gov/articles/PMC7599758/
ಓದುಗರಿಗೆ ವಿಶೇಷ ಸೂಚನೆ: ಇಲ್ಲಿ ನಿಮಗೆ ನೀಡಿರುವ ಎಲ್ಲ ಆರೋಗ್ಯ ಮಾಹಿತಿ ಮತ್ತು ಸಲಹೆಗಳು ನಿಮ್ಮ ತಿಳಿವಳಿಕೆಗಾಗಿ ಮಾತ್ರ. ವೈಜ್ಞಾನಿಕ ಸಂಶೋಧನೆ, ಅಧ್ಯಯನಗಳು, ವೈದ್ಯಕೀಯ ಮತ್ತು ಆರೋಗ್ಯ ವೃತ್ತಿಪರ ಸಲಹೆ ಆಧರಿಸಿ ನಾವು ಈ ಮಾಹಿತಿ ನಿಮಗೆ ನೀಡಿದ್ದೇವೆ. ಆದರೆ, ಇವುಗಳನ್ನು ಅನುಸರಿಸುವ ಮೊದಲು ಪರಿಣಿತ ವೈದ್ಯರ ಸಲಹೆಯನ್ನು ತೆಗೆದುಕೊಳ್ಳುವುದು ಉತ್ತಮ.