ETV Bharat / health

ಪ್ರತಿದಿನ ವಾಲ್‌ನಟ್ಸ್ ಸೇವಿಸಿದರೆ ಹೃದಯದ ಆರೋಗ್ಯಕ್ಕೆ ಉತ್ತಮ: ಸಂಶೋಧನೆ - WALNUTS HEALTH BENEFITS

Health Benefits of Walnuts: ಹೃದ್ರೋಗದ ಅಪಾಯ ಕಡಿಮೆಯಾಗಬೇಕಾದರೆ, ಪ್ರತಿದಿನ ನಿಯಮಿತವಾಗಿ ವಾಲ್‌ನಟ್ಸ್ ಸೇವಿಸುವುದು ಉತ್ತಮ ಎಂದು ತಜ್ಞರು ತಿಳಿಸುತ್ತಾರೆ.

WALNUTS BENEFITS  WALNUTS FOR HEART HEALTH  HEALTH BENEFITS OF WALNUTS  WHY ARE WALNUTS GOOD FOR HEART
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Health Team

Published : Jan 2, 2025, 4:21 PM IST

Health Benefits of Walnuts: ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿ ಹಾಗೂ ಆಹಾರ ಪದ್ಧತಿಯಿಂದಾಗಿ ಅನೇಕ ಜನರು ಚಿಕ್ಕ ವಯಸ್ಸಿನಲ್ಲಿ ಅನೇಕ ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ವಯಸ್ಸಿನ ಬೇಧವಿಲ್ಲದೆ ಹೃದಯ ಸಂಬಂಧಿ ಕಾಯಿಲೆಗಳನ್ನು ಎದುರಿಸುತ್ತಿದ್ದಾರೆ. ಹಠಾತ್ ಹೃದ್ರೋಗಕ್ಕೆ ತುತ್ತಾಗಿ ಹಲವು ಜನರು ಪ್ರಾಣ ಕಳೆದುಕೊಂಡಿರುವ ಘಟನೆಗಳು ವರದಿಯಾಗಿವೆ. ಹೆಚ್ಚಿನ ಜನರು ಉತ್ತಮ ಆರೋಗ್ಯಕ್ಕಾಗಿ ತಮ್ಮ ದೈನಂದಿನ ಆಹಾರದಲ್ಲಿ ವಿವಿಧ ರೀತಿಯ ಹಣ್ಣುಗಳು ಹಾಗೂ ಒಣ ಹಣ್ಣುಗಳು, ಬೀಜಗಳನ್ನು ಸೇರಿಸಿಕೊಳ್ಳುತ್ತಾರೆ.ಅದರಲ್ಲಿ ವಾಲ್ ನಟ್ಸ್ ಇರುವಂತೆ ನೋಡಿಕೊಳ್ಳುವುದು ಬಹಳ ಮುಖ್ಯ ಎನ್ನುತ್ತಾರೆ ತಜ್ಞರು.

ಇವುಗಳನ್ನು ಪ್ರತಿನಿತ್ಯ ಸೇವಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ. ಎಲ್ಲಕ್ಕಿಂತ ಹೆಚ್ಚಾಗಿ ವಾಲ್​​ನಟ್ಸ್ ತಿನ್ನುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಇತ್ತೀಚಿನ ಸಂಶೋಧನೆಯೊಂದು ವಾಲ್‌ನಟ್ಸ್ ಸೇವನೆಯು ಪ್ರೌಢಾವಸ್ಥೆಯಲ್ಲಿ ಹೃದ್ರೋಗದ ಅಪಾಯ ಕಡಿಮೆ ಮಾಡುತ್ತದೆ ಎಂದು ತಿಳಿದಿದೆ. ವಾಲ್‌ನಟ್ಸ್‌ನಲ್ಲಿ ಯಾವ ಪೋಷಕಾಂಶಗಳಿವೆ? ಅವುಗಳನ್ನು ತಿನ್ನುವುದರಿಂದ ಹೃದಯಕ್ಕೆ ಹೇಗೆ ಲಾಭವಾಗುತ್ತದೆ? ಸಂಶೋಧನೆಯ ಸಂಪೂರ್ಣ ವಿವರಗಳನ್ನು ತಿಳಿಯೋಣ.

ಹೀಗೆ ಹೇಳುತ್ತೆ ಸಂಶೋಧನೆ: ಇತ್ತೀಚೆಗೆ 'ಯೂನಿವರ್ಸಿಟಿ ಆಫ್ ಮಿನ್ನೇಸೋಟ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್'ನ ಸಂಶೋಧಕರು ಈ ಸಂಶೋಧನೆ ನಡೆಸಿದ್ದಾರೆ. ಇದನ್ನು 'ನ್ಯೂಟ್ರಿಷನ್, ಮೆಟಾಬಾಲಿಸಮ್ & ಕಾರ್ಡಿಯೋವಾಸ್ಕುಲರ್ ಡಿಸೀಸ್' ಜರ್ನಲ್‌ನಲ್ಲಿ ಪ್ರಕಟಿಸಲಾಗಿದೆ. ನಿರ್ದಿಷ್ಟವಾಗಿ ವಾಲ್‌ನಟ್ಸ್​ನಲ್ಲಿ ಒಮೆಗಾ- 3 ಆಲ್ಫಾ-ಲಿನೋಲೆನಿಕ್ ಕೊಬ್ಬಿನಾಮ್ಲ ಸಮೃದ್ಧವಾಗಿದೆ. ಇದಲ್ಲದೆ, ಅವುಗಳಲ್ಲಿ ಫೈಬರ್, ಪ್ರೊಟೀನ್, ಮೆಗ್ನೀಸಿಯಮ್, ರಂಜಕ ಮತ್ತು ಇತರ ಪ್ರಮುಖ ಪೋಷಕಾಂಶಗಳಿವೆ ಎಂಬುದನ್ನು ಸಂಶೋಧನೆಯಿಂದ ಸ್ಪಷ್ಟವಾಗಿದೆ.

ವಿವಿಧ ಸಮಸ್ಯೆಗಳಿಗೆ ಪರಿಹಾರ: ಅಲ್ಲದೆ, ವಾಲ್​ನಟ್ಸ್ ಪಾಲಿಫಿನಾಲ್​​ಗಳನ್ನು ಒಳಗೊಂಡಂತೆ ವಿವಿಧ ಉತ್ಕರ್ಷಣ ನಿರೋಧಕಗಳನ್ನು ಸಹ ಒದಗಿಸುತ್ತದೆ. ಆದ್ದರಿಂದ ಇವುಗಳನ್ನು ಪ್ರತಿನಿತ್ಯ ಸೇವಿಸುವುದರಿಂದ ಇವುಗಳಲ್ಲಿರುವ ಎಲ್ಲಾ ಪೋಷಕಾಂಶಗಳು ಹದಿಹರೆಯದಲ್ಲಿ ಮತ್ತು ಪ್ರೌಢಾವಸ್ಥೆಯಲ್ಲಿ ಅನೇಕ ಹೃದಯ ಸಂಬಂಧಿ ಕಾಯಿಲೆಗಳಿಂದ ರಕ್ಷಿಸುತ್ತದೆ ಎಂದು ಸಂಶೋಧಕರು ತಿಳಿಸುತ್ತಾರೆ. ಇವುಗಳ ಸೇವನೆಯಿಂದ ಕ್ಯಾನ್ಸರ್, ಬೊಜ್ಜು, ಮಧುಮೇಹ ಹಾಗೂ ಮೆದುಳು ಸಂಬಂಧಿತ ಸಮಸ್ಯೆಗಳಿಂದ ಪರಿಹಾರ ದೊರೆಯುತ್ತದೆ ಎಂದು ಈ ಸಂಶೋಧನೆಯಲ್ಲಿ ತಿಳಿದಿದೆ.

ವಾಲ್‌ನಟ್ಸ್ ಉತ್ತಮ ಆಹಾರ: ಈ ಸಂಶೋಧನೆಯಲ್ಲಿ ಭಾಗವಹಿಸಿದವರಲ್ಲಿ ಒಬ್ಬರು, ಮಿನ್ನೇಸೋಟ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್‌ನಲ್ಲಿ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ಸಮುದಾಯ ಆರೋಗ್ಯದ ಪ್ರಾಧ್ಯಾಪಕ ಲಿನ್ ಎಂ. ಸ್ಟೀಫನ್ ಅವರು ಇದನ್ನೇ ಸ್ಪಷ್ಟಪಡಿಸಿದ್ದಾರೆ. ಇತರ ಒಣಗಿದ ಹಣ್ಣುಗಳನ್ನು ತಿನ್ನುವವರಿಗಿಂತ, ವಾಲ್‌ನಟ್ಸ್ ಸೇವಿಸುವವರಲ್ಲಿ ಹೃದ್ರೋಗದ ಅಪಾಯ ಕಡಿಮೆ ಇರುತ್ತದೆ ಎಂದು ಅವರು ವಿವರಿಸುತ್ತಾರೆ. ಅಲ್ಲದೆ, ಆರೋಗ್ಯಕರ ಪೌಷ್ಟಿಕಾಂಶ ಮತ್ತು ಉತ್ತಮ ಜೀವನಶೈಲಿ ಅಭ್ಯಾಸಗಳನ್ನು ರೂಢಿಸಿಕೊಳ್ಳಲು ಸಹಾಯ ಮಾಡಲು ವಾಲ್‌ನಟ್ಸ್ ಉತ್ತಮ ಆಹಾರವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಸಂಶೋಧಕರು ತಿಳಿಸುತ್ತಾರೆ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್‌ನ ಸದಸ್ಯರ ತಂಡ ನಡೆಸಿದ ಸಂಶೋಧನೆಯಲ್ಲಿ, ವಾಲ್‌ನಟ್ಸ್ ತಿನ್ನುವುದು ಪ್ರೌಢಾವಸ್ಥೆಯಲ್ಲಿ ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಕಂಡುಬಂದಿದೆ. ಈ ಸಂಶೋಧನಾ ವರದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಮಾಹಿತಿಗಾಗಿ ಈ ವೆಬ್​ಸೈಟ್​ ವೀಕ್ಷಿಸಬಹುದು: https://pubmed.ncbi.nlm.nih.gov/33097410/

ಓದುಗರಿಗೆ ಪ್ರಮುಖ ಸೂಚನೆ: ಇಲ್ಲಿ ನಿಮಗೆ ನೀಡಿರುವ ಎಲ್ಲ ಆರೋಗ್ಯ ಮಾಹಿತಿ ಮತ್ತು ಸಲಹೆಗಳು ನಿಮ್ಮ ತಿಳಿವಳಿಕೆಗಾಗಿ ಮಾತ್ರ. ವೈಜ್ಞಾನಿಕ ಸಂಶೋಧನೆ, ಅಧ್ಯಯನಗಳು, ವೈದ್ಯಕೀಯ ಮತ್ತು ಆರೋಗ್ಯ ವೃತ್ತಿಪರ ಸಲಹೆ ಆಧರಿಸಿ ನಾವು ಈ ಮಾಹಿತಿ ನಿಮಗೆ ನೀಡಿದ್ದೇವೆ. ಆದರೆ, ಇವುಗಳನ್ನು ಅನುಸರಿಸುವ ಮೊದಲು ಪರಿಣಿತ ವೈದ್ಯರ ಸಲಹೆಯನ್ನು ತೆಗೆದುಕೊಳ್ಳುವುದು ಉತ್ತಮ.

ಇವುಗಳನ್ನೂ ಓದಿ:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.