ETV Bharat / health

ನಿಮ್ಮ ದೇಹದಲ್ಲಿ ಹೆಚ್ಚು ಕೊಲೆಸ್ಟ್ರಾಲ್ ಇದೆಯೇ? ಬೊಜ್ಜು ಕರಗಿಸಲು ಬೆಳ್ಳುಳ್ಳಿಯೇ ಮದ್ದು! ಹೇಗೆ ಗೊತ್ತಾ? - How To Lower Bad Cholesterol - HOW TO LOWER BAD CHOLESTEROL

ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿಯಿಂದ ಹೆಚ್ಚಿನ ಜನರು ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಪ್ರತಿದಿನ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಪ್ರಯತ್ನಿಸುತ್ತಾರೆ. ಅದರ ಹೊರತಾಗಿ, ಪ್ರತಿದಿನ ಹಸಿ ಬೆಳ್ಳುಳ್ಳಿಯನ್ನು ಹೀಗೆ ಸೇವಿಸಿದರೆ ಕೊಲೆಸ್ಟ್ರಾಲ್ ಅನ್ನು ಸುಲಭವಾಗಿ ಕರಗಿಸಬಹುದು ಎನ್ನುತ್ತಾರೆ ತಜ್ಞರು. ಆದರೆ, ಬೆಳ್ಳುಳ್ಳಿಯನ್ನು ಯಾವಾಗ ಮತ್ತು ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು ಎಂಬುದನ್ನು ತಿಳಿಯೋಣ.

HEALTH BENEFITS OF RAW GARLIC  RAW GARLIC HEALTH BENEFITS  HOW TO REDUCE BAD CHOLESTEROL  CHOLESTEROL DECREASE FOODS
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Health Team

Published : Aug 22, 2024, 5:34 PM IST

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಎದುರಿಸುತ್ತಿರುವ ಆರೋಗ್ಯ ಸಮಸ್ಯೆ ಎಂದರೆ ಅದು ಅಧಿಕ ಕೊಲೆಸ್ಟ್ರಾಲ್. ಅನೇಕರು ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಪ್ರಯತ್ನಿಸುತ್ತಿರುತ್ತಾರೆ. ಕೆಲವರು ತಿನ್ನುವ ಆಹಾರವನ್ನು ಕಡಿಮೆ ಮಾಡುತ್ತಾರೆ.

ನಿಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ಆರೋಗ್ಯಕರ ರೀತಿಯಲ್ಲಿ ಕಡಿಮೆ ಮಾಡಬಹುದೆಂದು ನಿಮಗೆ ತಿಳಿದಿದೆಯೇ? ಹಾಗಾದ್ರೆ, ದಿನನಿತ್ಯ ಹಸಿ ಬೆಳ್ಳುಳ್ಳಿಯನ್ನು ನಿಯಮಿತವಾಗಿ ಸೇವಿಸಿದರೆ ಸಾಕು, ಬೇಗನೇ ಕೊಬ್ಬು ಕರಗಿಸಲು ಸಹಾಯವಾಗುತ್ತದೆ ಎನ್ನುತ್ತಾರೆ ವೈದ್ಯರು ಮತ್ತು ಆಹಾರ ತಜ್ಞರು.

ಹಸಿ ಬೆಳ್ಳುಳ್ಳಿಯನ್ನು ಯಾವಾಗ ಮತ್ತು ಎಷ್ಟು ಪ್ರಮಾಣದಲ್ಲಿ ತಿನ್ನಬೇಕು?, ಜೊತೆಗೆ ಹಸಿ ಬೆಳ್ಳುಳ್ಳಿ ಇತರ ಆರೋಗ್ಯ ಪ್ರಯೋಜನಗಳ ಬಗ್ಗೆ ಉಪಯುಕ್ತ ಮಾಹಿತಿ ಇಲ್ಲಿದೆ.

ಈರುಳ್ಳಿಯಂತೆ ಬೆಳ್ಳುಳ್ಳಿ ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ವಿಶೇಷವಾಗಿ, ಬೆಳ್ಳುಳ್ಳಿಯಲ್ಲಿ ಉತ್ಕರ್ಷಣ ನಿರೋಧಕಗಳು, ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತದ ಗುಣಲಕ್ಷಣಗಳು ಸಮೃದ್ಧವಾಗಿವೆ. ಬೆಳ್ಳುಳ್ಳಿ ಕೂಡ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ. ಅದಕ್ಕಾಗಿಯೇ ಬೆಳ್ಳುಳ್ಳಿ ದೈನಂದಿನ ಆಹಾರದ ಭಾಗವಾಗಿರಬೇಕು ಎಂದು ಆಹಾರ ತಜ್ಞರು ಸಲಹೆ ನೀಡುತ್ತಾರೆ.

ಸುಲಭವಾಗಿ ಕೊಲೆಸ್ಟ್ರಾಲ್ ಕರಗುತ್ತೆ: ಅಧಿಕ ಕೊಲೆಸ್ಟ್ರಾಲ್​ನಿಂದ ಬಳಲುತ್ತಿರುವವರು ಹಸಿ ಬೆಳ್ಳುಳ್ಳಿ ಸೇವನೆಯಿಂದ ಉತ್ತಮ ಫಲಿತಾಂಶ ಪಡೆಯಬಹುದು ಎಂದು ಖ್ಯಾತ ಪೌಷ್ಟಿಕ ಆಹಾರ ತಜ್ಞರಾದ ಡಾ. ಲಹರಿ ಸುರಪನೇನಿ ಹೇಳಿದ್ದಾರೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸುವ ಮೂಲಕ ಹೃದಯದ ಆರೋಗ್ಯವನ್ನು ಉತ್ತಮವಾಗಿರಲು ಸಹಾಯ ಮಾಡುತ್ತದೆ.

ಅದಕ್ಕೆ ಮುಖ್ಯ ಕಾರಣ ಬೆಳ್ಳುಳ್ಳಿಯಲ್ಲಿರುವ ಅಲಿಸಿನ್ ಎಂಬ ವಸ್ತು. ಅದಕ್ಕಾಗಿಯೇ ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ಕರಗಿಸುವಲ್ಲಿ ಬೆಳ್ಳುಳ್ಳಿ ಪ್ರಮುಖವಾಗಿದೆ. ಇದಲ್ಲದೆ, ಇದರ ಔಷಧೀಯ ಗುಣಗಳು ರಕ್ತದ ಟ್ರೈಗ್ಲಿಸರೈಡ್‌ಗಳನ್ನು ಕಡಿಮೆ ಮಾಡುವಲ್ಲಿ ಮತ್ತು ದೇಹದ ತೂಕವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ.

ಬೆಳ್ಳುಳ್ಳಿ ಯಾವಾಗ, ಎಷ್ಟು ತಿನ್ನಬೇಕು?: ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಮತ್ತು ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ಪಡೆಯಲು ಹಸಿ ಬೆಳ್ಳುಳ್ಳಿಯನ್ನು ತೆಗೆದುಕೊಳ್ಳಿ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಎರಡು ಎಸಳು ಬೆಳ್ಳುಳ್ಳಿಯನ್ನು ಜಗಿಯುವುದು ತುಂಬಾ ಪ್ರಯೋಜನಕಾರಿ. ರುಚಿ ಹಿಡಿಸದೇ ಇದ್ದರೆ, ತಿಂದ ನಂತರ ಸ್ವಲ್ಪ ನೀರು ಕುಡಿಯಬಹುದು. ಇಲ್ಲವಾದರೆ, ಹಸಿ ಬೆಳ್ಳುಳ್ಳಿ ತಿನ್ನಲು ಕಷ್ಟಪಡುವವರು ಜೇನುತುಪ್ಪದೊಂದಿಗೂ ತಿನ್ನಬಹುದು. ಇದನ್ನು ತಿಂದರೂ ಉತ್ತಮ ಆರೋಗ್ಯ ಲಾಭಗಳು ದೊರೆಯುತ್ತವೆ.

ಬೆಳ್ಳುಳ್ಳಿಯಿಂದ ಹಲವು ಆರೋಗ್ಯ ಪ್ರಯೋಜನಗಳು: ಬೆಳ್ಳುಳ್ಳಿಯನ್ನು ಹೀಗೆ ತಿಂದರೆ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುವುದಲ್ಲದೆ ಇತರ ಆರೋಗ್ಯ ಲಾಭಗಳೂ ಸಿಗುತ್ತವೆ. ಬೆಳ್ಳುಳ್ಳಿಯಲ್ಲಿರುವ ಪೋಷಕಾಂಶಗಳು ರಕ್ತದೊತ್ತಡವನ್ನು ನಿಯಂತ್ರಿಸಲು ತುಂಬಾ ಸಹಕಾರಿ. ಇದು ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನೂ ಸಹ ಕಡಿಮೆ ಮಾಡುತ್ತದೆ. ಅಂತೆಯೇ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮುಖ್ಯವಾಗಿ ಪ್ರತಿದಿನ ಬೆಳಗ್ಗೆ ಎರಡು ಬೆಳ್ಳುಳ್ಳಿ ಎಸಳು ತಿನ್ನುವುದರಿಂದ ಶೀತ ಮತ್ತು ಜ್ವರದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು.

ಬೆಳ್ಳುಳ್ಳಿಯಲ್ಲಿರುವ ರಾಸಾಯನಿಕಗಳು ಕಬ್ಬಿಣಾಂಶ ಬಿಡುಗಡೆಗೆ ಹೆಚ್ಚು ಉತ್ತೇಜಿಸುತ್ತದೆ. ಇದರಿಂದ ರಕ್ತಹೀನತೆ ಸಮಸ್ಯೆ ನಿವಾರಣೆಯಾಗುತ್ತದೆ. ಬೆಳ್ಳುಳ್ಳಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಆಲ್‌ಝೈಮರ್‌‌ ಮತ್ತು ಬುದ್ಧಿಮಾಂದ್ಯತೆಯಂತಹ ಕಾಯಿಲೆಗಳನ್ನು ತಡೆಯುತ್ತದೆ. ಅದೇ ರೀತಿ ಹಸಿರು ಬೆಳ್ಳುಳ್ಳಿಯಲ್ಲಿರುವ ಔಷಧೀಯ ಗುಣಗಳು ಇನ್ಸುಲಿನ್ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿಡಲು ನೆರವಾಗುತ್ತದೆ.

ಓದುಗರ ಗಮನಕ್ಕೆ: ಇಲ್ಲಿ ನಿಮಗೆ ನೀಡಿರುವ ಎಲ್ಲಾ ಆರೋಗ್ಯ ಮಾಹಿತಿ ಮತ್ತು ಸಲಹೆಗಳು ನಿಮ್ಮ ತಿಳುವಳಿಕೆಗಾಗಿ ಮಾತ್ರ. ವೈಜ್ಞಾನಿಕ ಸಂಶೋಧನೆ, ಅಧ್ಯಯನಗಳು, ವೈದ್ಯಕೀಯ ಮತ್ತು ಆರೋಗ್ಯ ವೃತ್ತಿಪರ ಸಲಹೆಯನ್ನು ಆಧರಿಸಿ ನಾವು ಈ ಮಾಹಿತಿಯನ್ನು ನಿಮಗೆ ನೀಡಿದ್ದೇವೆ. ಆದರೆ, ಇವುಗಳನ್ನು ಅನುಸರಿಸುವ ಮೊದಲು ನಿಮ್ಮ ವೈಯಕ್ತಿಕ ವೈದ್ಯರ ಸಲಹೆಯನ್ನು ತೆಗೆದುಕೊಳ್ಳುವುದು ಉತ್ತಮ.

ಇದನ್ನೂ ಓದಿ:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.