ETV Bharat / health

ಈ ಹಣ್ಣು ಮಾತ್ರವಲ್ಲ, ಅದರ ಬೀಜಗಳನ್ನು ಸೇವನೆ ಮಾಡಿ ನೋಡಿ: ನಿಮ್ಮ ದೇಹದಲ್ಲಿ ಈ ಬದಲಾವಣೆಗಳು ಗ್ಯಾರಂಟಿ! - WHAT HAPPENS WHEN EAT JACKFRUIT - WHAT HAPPENS WHEN EAT JACKFRUIT

ಹಲಸಿನ ಬೀಜಗಳು ರುಚಿ ಮಾತ್ರವಲ್ಲದೇ ಆರೋಗ್ಯಕ್ಕೆ ಭಾರಿ ಪ್ರಯೋಜನಗಳನ್ನು ನೀಡುತ್ತದೆ ಎಂದು ಎಲ್ಲರಿಗೂ ತಿಳಿದಿದೆ. ಹಲಸಿನ ಹಣ್ಣುಮಾತ್ರವಲ್ಲ, ಅದರ ಬೀಜ ಸಹ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎನ್ನುತ್ತಾರೆ ತಜ್ಞರು. ಈ ಬೀಜಗಳನ್ನು ಸೇವಿಸುವುದರಿಂದ ಆಗುವ ಪ್ರಯೋಜನಗಳು ಅಪಾರ. ಈ ಬಗ್ಗೆ ತಿಳಿದುಕೊಳ್ಳೋಣ

Jackfruit Seeds Health Benefits
ಈ ಹಣ್ಣು ಮಾತ್ರವಲ್ಲ, ಅದರ ಬೀಜಗಳನ್ನು ಸೇವನೆ ಮಾಡಿ ನೋಡಿ: ನಿಮ್ಮ ದೇಹದಲ್ಲಿ ಈ ಬದಲಾವಣೆಗಳು ಗ್ಯಾರಂಟಿ! (ETV Bharat)
author img

By ETV Bharat Karnataka Team

Published : Jun 26, 2024, 7:22 AM IST

Jackfruit Seeds Health Benefits: ಹಲಸಿನ ಹಣ್ಣಿನ ಸಿಹಿ ಹಾಗೂ ಆಹ್ಲಾದಕರ ಪರಿಮಳವನ್ನು ಯಾರು ಇಷ್ಟಪಡುವುದಿಲ್ಲ ಹೇಳಿ. ಅನೇಕರು ಈ ಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಚೆನ್ನಾಗಿ ಹಣ್ಣಾದ ಹಲಸಿನ ತೊಳೆಗಳ ರುಚಿಯನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಅನೇಕರು ಹಲಸಿನ ತೊಳೆಗಳನ್ನು ತಿಂದು ಅದರಲ್ಲಿನ ಬೀಜವನ್ನು ಎಸೆಯುತ್ತಾರೆ. ಇನ್ನೂ ಕೆಲವರು ಅವುಗಳನ್ನು ಬೇಯಿಸಿ ತಿನ್ನುತ್ತಾರೆ, ಮತ್ತೆ ಕೆಲವರು ಹುರಿದು ತಿನ್ನುತ್ತಾರೆ. ಇಂತಿಪ್ಪ ಎಲ್ಲರ ಅಚ್ಚುಮೆಚ್ಚಿನ ಹಣ್ಣಾದ ಹಲಸಿನಲ್ಲಿ ಹಲವು ಪೋಷಕಾಂಶಗಳಿವೆ. ಇನ್ನು ಅದರ ಬೀಜದಲ್ಲಿ ಹಣ್ಣಿನ ತೊಳೆಗಳಲ್ಲಿ ಇರುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿವೆ ಎನ್ನುತ್ತಾರೆ ತಜ್ಞರು. ಈ ಬೀಜಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ

ಏನೆಲ್ಲಾ ಪೋಷಕಾಂಶಗಳು: ಹಲಸಿನ ಬೀಜಗಳಲ್ಲಿ ಪ್ರೋಟೀನ್, ಫೈಬರ್, ಆರೋಗ್ಯಕರ ಕೊಬ್ಬುಗಳು (ಒಮೆಗಾ 3, ಒಮೆಗಾ 6), ವಿಟಮಿನ್ ಎ, ಸಿ, ಇ, ಬಿ, ಕಬ್ಬಿಣ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಸತು ಮುಂತಾದ ಖನಿಜಗಳಿವೆ,

ಹಲಸಿನ ಹಣ್ಣಿನ ಬೀಜದ ಪ್ರಯೋಜನಗಳು

ರಕ್ತದಲ್ಲಿನ ಸಕ್ಕರೆ ಮಟ್ಟದ ನಿಯಂತ್ರಣ: ಪಪ್ಪಾಯಿ ಬೀಜಗಳಲ್ಲಿ ಫೈಬರ್ ಸಮೃದ್ಧವಾಗಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಫೈಬರ್ ದೇಹವು ಆಹಾರದಿಂದ ಸಕ್ಕರೆಯನ್ನು ಹೀರಿಕೊಳ್ಳುವ ವೇಗವನ್ನು ನಿಧಾನಗೊಳಿಸುತ್ತದೆ ಅಂತಾರೆ ತಜ್ಞರು. ಇದು ಹಠಾತ್ ಸ್ಪೈಕ್ ಮತ್ತು ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿನ ಕುಸಿತವನ್ನು ತಡೆಯಲು ಸಹಾಯ ಮಾಡುತ್ತದೆ.

2018 ರಲ್ಲಿ "ಜರ್ನಲ್ ಆಫ್ ಡಯಾಬಿಟಿಕ್ ಫುಡ್ಸ್" ನಲ್ಲಿ ಪ್ರಕಟವಾದ ಅಧ್ಯಯನವು 8 ವಾರಗಳವರೆಗೆ ನಿತ್ಯ 2 ಟೇಬಲ್ಸ್ಪೂನ್ ಹಲಸಿನ ಬೀಜದ ಪುಡಿ ಸೇವಿಸಿದ ಮಧುಮೇಹವುಳ್ಳ ಜನರಲ್ಲಿ ರಕ್ತದಲ್ಲಿನ ಸಕ್ಕರೆಯ ಮಟ್ಟವು ಗಮನಾರ್ಹವಾಗಿ ಕಡಿಮೆಯಾಗಿದೆ ಎಂದು ಕಂಡುಹಿಡಿದಿದೆ. ಹೈದರಾಬಾದ್‌ನ ಉಸ್ಮಾನಿಯಾ ವಿಶ್ವವಿದ್ಯಾಲಯದ ಮಧುಮೇಹ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಸಿ.ರಾಜೇಂದ್ರನ್ ಈ ಸಂಶೋಧನೆಯಲ್ಲಿ ಭಾಗವಹಿಸಿದ್ದರು.

ಜೀರ್ಣಕ್ರಿಯೆ ಸುಧಾರಣೆಗೆ ಸಹಕಾರಿ : ಹಲಸಿನ ಬೀಜಗಳಲ್ಲಿನ ಫೈಬರ್​ ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ಮಲಬದ್ಧತೆ ತಡೆಯಲು ಮತ್ತು ಮಲ ಚಲನೆಯನ್ನು ಸುಲಭಗೊಳಿಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ.

ರೋಗನಿರೋಧಕ ಶಕ್ತಿ ಹೆಚ್ಚಳ: ತಜ್ಞರು ಹಲಸಿನ ಬೀಜಗಳಲ್ಲಿ ರೋಗ ನಿರೋಧಕ ಶಕ್ತಿ ಸಮೃದ್ಧವಾಗಿದೆ, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆಂಟಿಆಕ್ಸಿಡೆಂಟ್‌ಗಳು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ.

ಹೃದಯದ ಆರೋಗ್ಯ ಹೆಚ್ಚಿಸುತ್ತದೆ: ಹಲಸಿನ ಬೀಜಗಳಲ್ಲಿ ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಇವೆರಡೂ ಹೃದಯದ ಆರೋಗ್ಯಕ್ಕೆ ಪ್ರಮುಖ ಖನಿಜಗಳಾಗಿವೆ. ಪೊಟ್ಯಾಸಿಯಮ್ ರಕ್ತನಾಳಗಳನ್ನು ಸಡಿಲಗೊಳಿಸುತ್ತದೆ ಮತ್ತು ಹೃದಯವನ್ನು ಆರೋಗ್ಯವಾಗಿಡುತ್ತದೆ ಎಂದು ವಿವರಿಸಲಾಗಿದೆ.

ಕ್ಯಾನ್ಸರ್ ವಿರುದ್ಧ ಹೋರಾಡುತ್ತೆ: ಕೆಲವು ಸಂಶೋಧನೆಗಳು ಹಲಸಿನ ಬೀಜಗಳಲ್ಲಿನ ಉತ್ಕರ್ಷಣ ನಿರೋಧಕಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ.

ತೂಕ ಇಳಿಸಲು ಸಹಾಯಕ: ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಹಲಸಿನ ಬೀಜಗಳು ಅತ್ಯುತ್ತಮ ಆಯ್ಕೆಯಾಗಿದೆ ಎನ್ನುತ್ತಾರೆ ತಜ್ಞರು. ಏಕೆಂದರೆ ಹಲಸಿನ ಬೀಜಗಳಲ್ಲಿರುವ ನಾರಿನಂಶವು ದೀರ್ಘಕಾಲದವರೆಗೆ ಹೊಟ್ಟೆಯನ್ನು ತುಂಬಲು ಸಹಾಯ ಮಾಡುತ್ತದೆ, ಹೀಗಾಗಿ ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ ಮತ್ತು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.

ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೂ ಈ ಹಸಲಿನ ಬೀಜ: ಹಲಸಿನ ಬೀಜಗಳಲ್ಲಿನ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟ್​ಗಳು ಚರ್ಮ ಮತ್ತು ಕೂದಲಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಚರ್ಮದ ಸ್ಥಿತಿಸ್ಥಾಪಕತ್ವ ಸುಧಾರಿಸಲು, ಸುಕ್ಕುಗಳನ್ನು ಕಡಿಮೆ ಮಾಡಲು ಮತ್ತು ಕೂದಲು ಉದುರುವುದನ್ನು ತಡೆಯಲು ಅವು ಸಹಾಯ ಮಾಡುತ್ತದೆ.

ರಕ್ತಹೀನತೆ ಸುಧಾರಣೆಗೆ ಸಹಕಾರಿ: ಹಲಸಿನ ಬೀಜಗಳಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿದೆ. ಇವು ಕೆಂಪು ರಕ್ತ ಕಣಗಳನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತದೆ. ಹಲಸಿನ ಬೀಜಗಳನ್ನು ತ್ಯಜಿಸದೇ ಆಹಾರದಲ್ಲಿ ಸೇರಿಸಿದರೆ ಕಬ್ಬಿಣದ ಕೊರತೆಯನ್ನೂ ಕೂಡಾ ಸರಿದೂಗಿಸಬಹುದು.

ನಿಮ್ಮ ಗಮನಕ್ಕೆ : ಇಲ್ಲಿ ನಿಮಗೆ ನೀಡಿರುವ ಎಲ್ಲ ಆರೋಗ್ಯ ಮಾಹಿತಿ ಮತ್ತು ಸಲಹೆಗಳು ನಿಮ್ಮ ತಿಳಿವಳಿಕೆಗಾಗಿ ಮಾತ್ರವೇ ನೀಡಲಾಗಿದೆ. ಅಧ್ಯಯನಗಳು, ವೈದ್ಯಕೀಯ ಮತ್ತು ಆರೋಗ್ಯ ವೃತ್ತಿಪರ ಶಿಫಾರಸುಗಳ ಆಧಾರದ ಮೇಲೆ ನಾವು ಈ ಮಾಹಿತಿಯನ್ನು ಒದಗಿಸುತ್ತಿದ್ದೇವೆ. ಆದರೆ, ಇವುಗಳನ್ನು ಅನುಸರಿಸುವ ಮೊದಲು ಪರಿಣತ ವೈದ್ಯರ ಸಲಹೆಯನ್ನು ತೆಗೆದುಕೊಳ್ಳುವುದು ಉತ್ತಮ.

ಇದನ್ನು ಓದಿ: ಕಣಗಲೆ ಹೂವಿನ ಗಿಡಗಳನ್ನು ಮನೆಯಲ್ಲಿ ಬೆಳೆಸಬಹುದೇ?: ಬೋನ್ಸಾಯ್, ಹತ್ತಿ, ಕಳ್ಳಿ ಗಿಡ ನೆಟ್ಟರೆ ಅಪಾಯ ಪಕ್ಕಾ! ವಾಸ್ತು ತಜ್ಞರು ಹೇಳುವುದೇನು? - Oleander Flower At Home

ETV Bharat Logo

Copyright © 2025 Ushodaya Enterprises Pvt. Ltd., All Rights Reserved.