ETV Bharat / health

ಜೋಳದ ರೊಟ್ಟಿ ಸೇವಿಸಿದರೆ ಶುಗರ್ ನಿಯಂತ್ರಣ, ಅಧಿಕ ತೂಕ ಸಮಸ್ಯೆಗೂ ಪರಿಹಾರ: ತಜ್ಞರ ಸಲಹೆ - JOWAR HEALTH BENEFITS FOR DIABETES

Jowar Roti Benefits for Diabetes: ಜೋಳದ ರೊಟ್ಟಿ ಸೇವಿಸಿದರೆ ಶುಗರ್ ನಿಯಂತ್ರಣಕ್ಕೆ ಬರುತ್ತದೆ. ಅಧಿಕ ತೂಕ ಹಾಗೂ ಹೃದಯ ಸಮಸ್ಯೆಗಳು ಬರದಂತೆ ತಡೆಯುತ್ತದೆ ಎಂದು ತಜ್ಞರ ಸಲಹೆ ನೀಡಿದ್ದಾರೆ.

JOWAR ROTI BENEFITS FOR DIABETES  DIABETES  JOWAR ROTI GOOD FOR HEALTH  JOWAR ROTI BENEFITS FOR WEIGHT LOSS
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Health Team

Published : Jan 21, 2025, 6:43 PM IST

Jowar Roti Benefits for Diabetes: ಇತ್ತೀಚಿನ ದಿನಗಳಲ್ಲಿ ಅನೇಕರು ಮೊದಲಿನಂತೆಯೇ ಹಳೆಯ ಆಹಾರ ಪದ್ಧತಿ ಅನುಸರಿಸಲು ಮುಂದಾಗುತ್ತಿದ್ದಾರೆ. ಜೋಳ, ಗೋಧಿ, ದ್ವಿದಳ ಹಾಗೂ ಸಿರಿಧಾನ್ಯಗಳನ್ನು ತಮ್ಮ ದೈನಂದಿನ ಆಹಾರದ ಭಾಗವಾಗಿಸಿಕೊಳ್ಳುತ್ತಿದ್ದಾರೆ. ಪ್ರತಿದಿನ ಜೋಳದಿಂದ ಮಾಡಿದ ಆಹಾರಗಳನ್ನು ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿ ಜೋಳದ ರೊಟ್ಟಿಯು ಮಧುಮೇಹದಿಂದ ಬಳಲುತ್ತಿರುವವರಿಗೆ ತುಂಬಾ ಉಪಯುಕ್ತವಾಗಿದೆ. ಇದು ಶುಗರ್​ ನಿಯಂತ್ರಣ ಮಾತ್ರವಲ್ಲದೇ ಇತರ ಪ್ರಯೋಜನಗಳನ್ನು ಒಳಗೊಂಡಿದೆ.

ಜೋಳದ ರೊಟ್ಟಿ ಮಧುಮೇಹಿಗಳಿಗೆ ಉತ್ತಮ: ವಿಶೇಷವಾಗಿ ಜೋಳದ ರೊಟ್ಟಿ ಮಧುಮೇಹಿಗಳಿಗೆ ಒಳ್ಳೆಯ ಆಹಾರ. ಇದರ ಕಡಿಮೆ ಗ್ಲೈಸೆಮಿಕ್ ಗುಣದಿಂದಾಗಿ ಗ್ಲೂಕೋಸ್ ಮಟ್ಟಗಳು ನಿಯಂತ್ರಣಕ್ಕೆ ಬರುತ್ತದೆ. ಮಧುಮೇಹವನ್ನು ನಿಯಂತ್ರಣದಲ್ಲಿ ಇಡುತ್ತದೆ. ಜೊತೆಗೆ ಶುಗರ್​ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ವಿಶೇಷವಾಗಿ ಇನ್ಸುಲಿನ್ ಹಾಗೂ ಮಾತ್ರೆಗಳನ್ನು ತೆಗೆದುಕೊಳ್ಳುವವರಿಗೆ ಹೆಚ್ಚು ಉಪಯುಕ್ತವಾಗಿದೆ. ಜೋಳದಲ್ಲಿ ನಾರಿನಂಶ ಹೆಚ್ಚಿದ್ದು, ಇದು ಅತಿಯಾದ ಹಸಿವನ್ನು ತಡೆಯಲು ಸಹಾಯ ಮಾಡುತ್ತದೆ. ಸ್ವಲ್ಪ ತಿಂದರೂ ಹೊಟ್ಟೆ ತುಂಬುತ್ತದೆ ಎಂದು ತಜ್ಞರು ಹೇಳುತ್ತಾರೆ.

"ಜೋಳದಲ್ಲಿ ಕಾರ್ಬೋಹೈಡ್ರೇಟ್‌ಗಳು ಗ್ಲೂಕೋಸ್ ರೂಪದಲ್ಲಿ ನಿಧಾನವಾಗಿ ರಕ್ತವನ್ನು ಪ್ರವೇಶಿಸುತ್ತವೆ. ಪರಿಣಾಮವಾಗಿ, ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿ ಇರುತ್ತದೆ. ಇದರಿಂದಾಗಿ ಶುಗರ್​ ಇರುವವರು ಜೋಳದಿಂದ ಮಾಡಿರುವ ಸೇವಿಸುವುದು ಒಳ್ಳೆಯದು. ಜೋಳದಲ್ಲಿ ಪ್ರೋಟೀನ್‌ಗಳು ಸಮೃದ್ಧವಾಗಿವೆ. ಜೋಳದ ರೊಟ್ಟಿಯು ಮಧುಮೇಹ ಇರುವವರಿಗೆ ಮಾತ್ರವಲ್ಲದೇ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರಿಗೂ ಉತ್ತಮ ಆಹಾರವಾಗಿದೆ. ಹೆಚ್ಚಿನ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಅನಗತ್ಯ ಕ್ಯಾಲೊರಿಗಳನ್ನು ನಿಯಂತ್ರಿಸುವ ಕೆಲಸ ಮಾಡುತ್ತದೆ. ಇದರಲ್ಲಿ ವಿವಿಧ ರೀತಿಯ ವಿಟಮಿನ್ ಕೊರತೆಗಳನ್ನು ಕಡಿಮೆ ಮಾಡುತ್ತದೆ ಹಾಗೂ ರೋಗನಿರೋಧಕ ಶಕ್ತಿ ಹೆಚ್ಚಿಸಲು ಪೂರಕವಾಗಿದೆ"

-ಡಾ.ಲಹರಿ ಸುರಪನೇನಿ, ಪೌಷ್ಟಿಕತಜ್ಞರು

ಕಾರ್ಬೋಹೈಡ್ರೇಟ್ಸ್​, ಪ್ರೋಟೀನ್ಸ್​: ಜೋಳದಲ್ಲಿ ಉತ್ಕರ್ಷಣ ನಿರೋಧಕಗಳು ದೇಹದಲ್ಲಿನ ಕಲ್ಮಶಗಳು ಮತ್ತು ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಇದು ಹೃದಯ ಸಂಬಂಧಿತ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಇದರಲ್ಲಿ ಕಾರ್ಬೋಹೈಡ್ರೇಟ್‌ಗಳು ಹಾಗೂ ಪ್ರೋಟೀನ್‌ಗಳಿಂದ ಸಮೃದ್ಧವಾಗಿದೆ. ಇದು ದೇಹಕ್ಕೆ ಅಗತ್ಯವಿರುವ ಶಕ್ತಿಯನ್ನು ಒದಗಿಸುತ್ತದೆ. ಜೋಳವನ್ನು ಪ್ರತಿದಿನ ಸೇವನೆ ಮಾಡುವುದರಿಂದ ನೀವು ಆ್ಯಕ್ಟಿವ್​ ಆಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ಜೀರ್ಣಾಂಗ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುವ ಹಲವು ಗುಣಗಳನ್ನು ಜೋಳವು ಹೊಂದಿದೆ. ಜೋಳವು ಮಲಬದ್ಧತೆಯನ್ನು ಕಡಿಮೆ ಮಾಡುತ್ತದೆ ಹಾಗೂ ಕರುಳನ್ನು ಆರೋಗ್ಯಕ್ಕೆ ಉತ್ತಮವಾಗಿದೆ ಕರವಾಗಿರಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.

ಮೂಳೆಗಳ ಆರೋಗ್ಯಕ್ಕೆ ಉತ್ತಮ: ಜೋಳದ ರೊಟ್ಟಿಯಲ್ಲಿ ಪೊಟ್ಯಾಸಿಯಮ್ ಮತ್ತು ವಿಟಮಿನ್ ಬಿ ಯಂತಹ ಪೋಷಕಾಂಶಗಳಿಂದ ಕೂಡ ಸಮೃದ್ಧವಾಗಿದೆ. ಇದು ರಕ್ತಹೀನತೆಯನ್ನು ಕಡಿಮೆ ಮಾಡುವಲ್ಲಿ ಹಾಗೂ ಹಿಮೋಗ್ಲೋಬಿನ್ ಹೆಚ್ಚಿಸುವಲ್ಲಿ ಪೂರಕವಾದ ಪಾತ್ರ ವಹಿಸುತ್ತದೆ. ಮೆಗ್ನೀಸಿಯಮ್ ಹಾಗೂ ಕ್ಯಾಲ್ಸಿಯಂನಂತಹ ಖನಿಜಗಳು ಮೂಳೆಗಳ ಆರೋಗ್ಯವನ್ನು ಕಾಪಾಡುತ್ತದೆ. ಜೊತೆಗೆ ಮೂಳೆ ಸಂಬಂಧಿತ ಕಾಯಿಲೆಗಳು, ಇತರೆ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಆದರೆ, ಜೋಳದ ರೊಟ್ಟಿಯು ಆರೋಗ್ಯಕರವಾಗಿದೆ, ಆದ್ರೆ, ಇದನ್ನು ಎಣ್ಣೆಯಲ್ಲಿ ಹಚ್ಚಿ ಬೇಯಿಸಬಾರದು ಎಂದು ತಜ್ಞರು ಸಲಹೆ ನೀಡುತ್ತದೆ.

ಇವುಗಳನ್ನೂ ಓದಿ:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.