ETV Bharat / health

ರಾಜ್ಯದಲ್ಲಿ ಮಂಕಿಫಾಕ್ಸ್ ಬಗ್ಗೆ ಆತಂಕ ಬೇಡ, ವಿಮಾನ ನಿಲ್ದಾಣ, ಬಂದರು ಸೇರಿ ವಿವಿಧೆಡೆ ಬಿಗಿ ಕ್ರಮ: ಸಚಿವ ಪಾಟೀಲ್ - Monkeypox - MONKEYPOX

ರಾಜ್ಯದಲ್ಲಿ ಮಂಕಿಫಾಕ್ಸ್ ಸೋಂಕಿನ ಬಗ್ಗೆ ಆತಂಕಪಡಬಾರದು. ವಿಮಾನ ನಿಲ್ದಾಣ, ಬಂದರು ಸೇರಿ ವಿವಿಧೆಡೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟೀಲ್ ಹೇಳಿದರು.

Monkeyfox  Monkeyfox background strictures  Bengaluru
ಮಂಕಿಪಾಕ್ಸ್ ಸೋಂಕಿನ ಕುರಿತು ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಯಿತು. (ETV Bharat)
author img

By ETV Bharat Health Team

Published : Aug 23, 2024, 7:38 PM IST

ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟೀಲ್ ಮಾತನಾಡಿದರು. (ETV Bharat)

ಬೆಂಗಳೂರು: ''ಆಫ್ರಿಕಾ ಖಂಡದಲ್ಲಿ ಆತಂಕ ಮೂಡಿಸಿರುವ ಮಂಕಿಪಾಕ್ಸ್ ಸೋಂಕಿನ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದ್ದರೂ ಈ ಸೋಂಕು ಭಾರತದಲ್ಲಿ ಹರಡುವ ಅಪಾಯ ಕಡಿಮೆ. ಹೀಗಾಗಿ ಯಾರೊಬ್ಬರೂ ಆತಂಕಕ್ಕೆ ಒಳಗಾಗಬಾರದು'' ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟಿಲ್‌ ರಾಜ್ಯದ ಜನತೆಗೆ ಅಭಯ ನೀಡಿದ್ದಾರೆ.

ವಿಕಾಸಸೌಧದಲ್ಲಿ ಇಂದು (ಶುಕ್ರವಾರ) ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮಂಕಿಪಾಕ್ಸ್ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಕಳೆದ ಆ.14ರಂದು ವಿಶ್ವ ಆರೋಗ್ಯ ಸಂಸ್ಥೆ ಮಂಕಿಪಾಕ್ಸ್ ಅನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿಯಾಗಿ ಘೋಷಿಸಿದೆ. ಆಫ್ರಿಕಾದಲ್ಲಿ ಸೋಂಕು ಹರಡಿದೆ. ಸೋಂಕನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ'' ಎಂದು ತಿಳಿಸಿದರು.

Monkeyfox  Monkeyfox background strictures  Bengaluru
ಮಂಕಿಪಾಕ್ಸ್ ಸೋಂಕಿನ ಕುರಿತು ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಯಿತು. (ETV Bharat)

''ಈ ಸೋಂಕು ಇಲ್ಲಿಯವರೆಗೆ ಭಾರತದಲ್ಲಿ ಕಂಡುಬಂದಿಲ್ಲ. ಈ ಹಿನ್ನೆಲೆಯಲ್ಲಿ ಯಾವುದೇ ಆತಂಕ ಬೇಡ. ಎನ್‌ಸಿಡಿಸಿ ಜಂಟಿ ನಿರ್ವಹಣೆ ಸಂಸ್ಥೆ ಇದರ ಹರಡುವಿಕೆ ಅಪಾಯದ ಮೌಲ್ಯಮಾಪನ ನಡೆಸುತ್ತಿದೆ. ಒಂದು ವೇಳೆ ಪ್ರಕರಣಗಳಿದ್ದರೆ ಪ್ರವೇಶ ಹಂತದಲ್ಲೇ ಎಚ್ಚರಿಸಲಾಗುವುದು'' ಎಂದು ಪಾಟೀಲ್‌ ಮಾಹಿತಿ ನೀಡಿದರು.

''ಸರ್ಕಾರದ ಮಾರ್ಗಸೂಚಿ ಪ್ರಕಾರ, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಮಂಕಿಪಾಕ್ಸ್ ಬಗ್ಗೆ ಬಹಳಷ್ಟು ಸುದ್ದಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಲಾಗಿದೆ. ನಮ್ಮ ರಾಜ್ಯದಲ್ಲಿ ಮಂಕಿಫಾಕ್ಸ್ ಒಂದು ಪ್ರಕರಣವೂ ಕಂಡುಬಂದಿಲ್ಲ. ಇದರಿಂದ ರಾಜ್ಯದ ಜನರು ಆತಂಕಕ್ಕೆ ಒಳಗಾಗುವುದು ಬೇಡ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇದರ ಟೆಸ್ಟ್‌ ಮಾಡುವ ಸೌಲಭ್ಯವಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯಲ್ಲಿ ಬೆಡ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ'' ಎಂದು ಸಚಿವರು ಹೇಳಿದರು.

''ಇದು ವೈರಲ್‌ ಇನ್ಫೆಕ್ಷನ್ ಆಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗ ಪರೀಕ್ಷೆ ಉಚಿತವಾಗಿರುತ್ತದೆ. ಸದ್ಯಕ್ಕೆ 50 ಹಾಸಿಗೆಯ ಐದು ಐಸಿಯು ವ್ಯವಸ್ಥೆ ಮಾಡಲಾಗಿದೆ. ಇಲ್ಲಿಯವರೆಗೂ ಒಂದೇ ಒಂದು ಕೇಸ್‌‍ ಪತ್ತೆಯಾಗಿಲ್ಲದಿದ್ದರೂ ಏಕಾಏಕಿ ಕಂಡುಬಂದರೆ ಸಮಸ್ಯೆಯಾಗದಿರಲಿ ಎಂಬ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ'' ಎಂದು ಪಾಟೀಲ್ ತಿಳಿಸಿದರು.
''ಈ ಸಂಬಂಧ ಆರೋಗ್ಯ ಇಲಾಖೆ ಜೊತೆಗೂ ಚರ್ಚೆ ನಡೆಸಲಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್‌ ಮಾಡುವ ಬಗ್ಗೆ ಆರೋಗ್ಯ ಇಲಾಖೆಗೆ ಕೇಂದ್ರ ಸರ್ಕಾರ ಸೂಚನೆ ನೀಡುತ್ತದೆ'' ಎಂದು ಸಚಿವರು ಹೇಳಿದರು.

ಇದನ್ನೂ ಓದಿ: ನಿಮಗೆ ಈ ರೋಗ ಲಕ್ಷಣಗಳಿದ್ದರೆ ಜಾಗರೂಕರಾಗಿರಿ: ಅದು 'ಮಂಕಿಪಾಕ್ಸ್' ಆಗಿರಬಹುದು! - Monkeypox Symptoms

ETV Bharat Logo

Copyright © 2024 Ushodaya Enterprises Pvt. Ltd., All Rights Reserved.