How to Eat Pulses for Protein: ಉತ್ತಮ ಆರೋಗ್ಯಕ್ಕಾಗಿ ನಾವು ನಿತ್ಯ ವಿವಿಧ ರೀತಿಯ ಆಹಾರಗಳನ್ನು ಸೇವನೆ ಮಾಡುತ್ತೇವೆ. ಕೆಲವು ಆಹಾರಗಳನ್ನು ಸೇವಿಸುವಾಗ ಕೆಲವು ನಿಯಮಗಳನ್ನು ಪಾಲನೆ ಮಾಡಿದರೆ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳು ಲಭಿಸುತ್ತವೆ. ಕಾಳುಗಳನ್ನು ತಿನ್ನುವಾಗ ಕೆಲವು ಅಂಶಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ತಜ್ಞರು ತಿಳಿಸುತ್ತಾರೆ.
ದ್ವಿದಳ ಧಾನ್ಯಗಳಲ್ಲಿ ಪ್ರೋಟೀನ್, ಜೀವಸತ್ವಗಳು ಮತ್ತು ಖನಿಜಗಳಂತಹ ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಇವುಗಳ ಜೊತೆಗೆ ಪೋಷಕಾಂಶಗಳ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುವ ವಿರೋಧಿ ಪೋಷಕಾಂಶಗಳು ಸಹ ಇವೆ. ಇವುಗಳು ದೇಹವು ಪೋಷಕಾಂಶಗಳನ್ನು ಹೀರಿಕೊಳ್ಳುವುದನ್ನು ತಡೆಯುವ ಸಾಧ್ಯತೆಯಿದೆ. ಇದಿರಿಂದ ಅಜೀರ್ಣ, ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ ಕಾರಣವಾಗುತ್ತದೆ. ಅದಕ್ಕಾಗಿಯೇ ಈ ಸಮಸ್ಯೆಗಳನ್ನು ತಪ್ಪಿಸಲು ಕಾಳುಗಳನ್ನು ಸೇವಿಸುವಾಗ ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದು ತಜ್ಞರು ತಿಳಿಸುತ್ತಾರೆ.
ಕಾಳುಗಳನ್ನು ಮೊಳಕೆಯೊಡಿಸಬೇಕು: ಅನೇಕ ಜನರು ವಿವಿಧ ಕಾಳುಗಳನ್ನು ನೇರವಾಗಿ ಬೇಯಿಸುತ್ತಾರೆ. ನೇರವಾಗಿಯೇ ವಿವಿಧ ಭಕ್ಷ್ಯಗಳ ಭಾಗವಾಗಿ ಬಳಸುತ್ತಾರೆ. ಕಡಿಮೆ ಜನರು ಅವುಗಳನ್ನು ಮೊದಲು ನೆನೆಸಿ, ಅವು ಮೊಳಕೆಯೊಡೆದ ನಂತರ ಬೇಯಿಸುತ್ತಾರೆ. ಹೀಗೆ ಮಾಡುವುದರಿಂದ ಪೌಷ್ಟಿಕಾಂಶ ವಿರೋಧಿ ಕಿಣ್ವಗಳನ್ನು ಉತ್ತೇಜಿಸಬಹುದು ಎಂದು ತಜ್ಞರು ತಿಳಿಸುತ್ತಾರೆ. ಈ ಪೋಷಕಾಂಶ ವಿರೋಧಿ ಕಿಣ್ವಗಳು ದೇಹವು ದ್ವಿದಳ ಧಾನ್ಯಗಳಲ್ಲಿರುವ ಪೋಷಕಾಂಶಗಳನ್ನು ಹೀರಿಕೊಳ್ಳುವುದನ್ನು ತಡೆಯುತ್ತದೆ.
ನೆನೆಸಿ ಮೊಳಕೆಯೊಡೆದ ದ್ವಿದಳ ಧಾನ್ಯಗಳಲ್ಲಿ ಇವುಗಳ ಶೇಕಡಾವಾರು ಪ್ರಮಾಣ ಕಡಿಮೆಯಾಗುತ್ತದೆ. ಇದು ದೇಹಕ್ಕೆ ಸೂಕ್ಷ್ಮ ಪೋಷಕಾಂಶಗಳು ಮತ್ತು ಪ್ರೋಟೀನ್ ನೀಡುತ್ತದೆ. ಇದರ ಪರಿಣಾಮವಾಗಿ ಜೀರ್ಣಕ್ರಿಯೆ ಸುಧಾರಿಸುತ್ತದೆ. ವಿವಿಧ ಜೀರ್ಣಕಾರಿ ಸಮಸ್ಯೆಗಳನ್ನು ತಡೆಯಬಹುದು. 2018 ರಲ್ಲಿ ಜರ್ನಲ್ ಆಫ್ ಫುಡ್ ಸೈನ್ಸ್‌ನಲ್ಲಿ ಪ್ರಕಟವಾದ "ದ್ವಿದಳ ಧಾನ್ಯಗಳಲ್ಲಿ ನೆನೆಸಿ ಬೇಯಿಸುವುದರಿಂದ ಪೋಷಕಾಂಶಗಳ ಧಾರಣದ ಮೇಲೆ ಪರಿಣಾಮ" ಎಂಬ ಅಧ್ಯಯನದಲ್ಲಿ ತಿಳಿದುಬಂದಿದೆ.
ಅನ್ನದೊಂದಿಗೆ ಸೇವಿಸುವ ಬದಲು ಧಾನ್ಯಗಳು ಮತ್ತು ಕಾಳುಗಳನ್ನು ಸೇವಿಸುವುದರಿಂದ ದೇಹದ ಪೋಷಕಾಂಶಗಳನ್ನು ಹೀರಿಕೊಳ್ಳುವ ಸಾಮರ್ಥ್ಯ ಹೆಚ್ಚಾಗುತ್ತದೆ. ಇದರ ಪರಿಣಾಮವಾಗಿ ಮೂಳೆಗಳು ಬಲಗೊಳ್ಳುತ್ತವೆ. ದೇಹದಲ್ಲಿ ಪ್ರತಿಕಾಯಗಳು ಉತ್ಪತ್ತಿಯಾಗುತ್ತವೆ. ಜೊತೆಗೆ ರೋಗನಿರೋಧಕ ಶಕ್ತಿ ಸುಧಾರಿಸಲು ಸಾಧ್ಯವಾಗುತ್ತದೆ. ಚಿಕ್ಕ ವಯಸ್ಸಿನಲ್ಲಿಯೇ ನಿಮ್ಮ ಕೂದಲು ಬಿಳಿ ಬಣ್ಣಕ್ಕೆ ತಿರುಗುವುದನ್ನು ತಡೆಯಬಹುದು ಎಂದು ಆರೋಗ್ಯ ತಜ್ಞರು ವಿವರಿಸುತ್ತಾರೆ.
ನಿಮ್ಮ ಆಹಾರದಲ್ಲಿ ಐದು ಬಗೆಯ ದ್ವಿದಳ ಧಾನ್ಯ ಸೇರಿಸಿ: ಹೆಚ್ಚಿನ ಜನರು ತಮ್ಮ ದೈನಂದಿನ ಆಹಾರದಲ್ಲಿ ಹೆಸರು, ಕಡಲೆ ಮತ್ತು ತೊಗರಿ ಕಾಳು ಸೇರಿದಂತೆ ವಿವಿಧ ದ್ವಿದಳ ಧಾನ್ಯಗಳನ್ನು ಸೇರಿಸಿಕೊಳ್ಳುತ್ತಾರೆ. ನಮ್ಮ ದೇಶದಲ್ಲಿ ಹಲವು ಬಗೆಯ ದ್ವಿದಳ ಧಾನ್ಯಗಳು ಮತ್ತು ಕಾಳುಗಳು ಲಭ್ಯವಿದೆ. ಪ್ರತಿ ವಾರ ನಿಮ್ಮ ಆಹಾರದಲ್ಲಿ ಕನಿಷ್ಠ ಐದು ಬಗೆಯ ದ್ವಿದಳ ಧಾನ್ಯಗಳನ್ನು ಸೇರಿಸಿಕೊಂಡರೆ, ಅವುಗಳಲ್ಲಿರುವ ಪೋಷಕಾಂಶಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ತಜ್ಞರು ಹೇಳುತ್ತಾರೆ.
ನೀವು ಇವುಗಳೊಂದಿಗೆ ಉಪ್ಪಿನಕಾಯಿ, ಇಡ್ಲಿ, ದೋಸೆ, ಲಡ್ಡು, ಹಲ್ವಾ ಮತ್ತು ಪಾಪಡ್‌ನಂತಹ ವಿವಿಧ ಖಾದ್ಯಗಳನ್ನು ತಯಾರಿಸಿ ಸೇವಿಸಬಹುದು. ಇದು ಹೊಟ್ಟೆಯಲ್ಲಿ ಉತ್ತಮ ಬ್ಯಾಕ್ಟೀರಿಯಾಗಳ ಬೆಳವಣಿಗೆಗೆ ಉತ್ತೇಜಿಸುತ್ತದೆ ಹಾಗೂ ಜೀರ್ಣಾಂಗ ವ್ಯವಸ್ಥೆಯ ಆರೋಗ್ಯವನ್ನು ಸುಧಾರಿಸುತ್ತದೆ ಎಂದು ತಜ್ಞರು ತಿಳಿಸುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಈ ವೆಬ್ಸೈಟ್ನ್ನು ವೀಕ್ಷಿಸಬಹುದು:
ಓದುಗರಿಗೆ ಸೂಚನೆ: ಇಲ್ಲಿ ನಿಮಗೆ ನೀಡಿರುವ ಎಲ್ಲ ಆರೋಗ್ಯ ಮಾಹಿತಿ ಮತ್ತು ಸಲಹೆಗಳು ನಿಮ್ಮ ತಿಳಿವಳಿಕೆಗಾಗಿ ಮಾತ್ರ. ವೈಜ್ಞಾನಿಕ ಸಂಶೋಧನೆ, ಅಧ್ಯಯನಗಳು, ವೈದ್ಯಕೀಯ ಮತ್ತು ಆರೋಗ್ಯ ವೃತ್ತಿಪರ ಸಲಹೆ ಆಧರಿಸಿ ನಾವು ಈ ಮಾಹಿತಿ ನಿಮಗೆ ನೀಡಿದ್ದೇವೆ. ಆದರೆ, ಇವುಗಳನ್ನು ಅನುಸರಿಸುವ ಮೊದಲು ಪರಿಣತ ವೈದ್ಯರ ಸಲಹೆಯನ್ನು ತೆಗೆದುಕೊಳ್ಳುವುದು ಉತ್ತಮ.