ಮಾಂಸಾಹಾರ ಪ್ರಿಯರಲ್ಲಿ ಹೆಚ್ಚಿನವರು ಚಿಕನ್ ಅನ್ನು ಇಷ್ಟಪಡುತ್ತಾರೆ. ಅದು ಎಷ್ಟಂದ್ರೆ.. ಪ್ರತಿದಿನ ಚಿಕನ್ ಫ್ರೈ, ಚಿಕನ್ ಕರಿ, ಬಿರಿಯಾನಿ ಮತ್ತು ಚಿಕನ್ 65 ಮುಂತಾದ ವೆರೈಟಿಗಳನ್ನು ಮಾಡಿ ತಿನ್ನುವಷ್ಟು. ಆದರೂ, ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನುವುದು ಎಷ್ಟು ಮುಖ್ಯವೋ ಮಾಂಸವನ್ನು ತಿನ್ನುವುದು ಅಷ್ಟೇ ಮುಖ್ಯ. ಪ್ರತಿದಿನ ಕೋಳಿ ಮಾಂಸ ತಿಂದರೆ ಅಪಾಯ ತಪ್ಪಿದ್ದಲ್ಲ ಎಂದು ಆಹಾರ ತಜ್ಞರು ಎಚ್ಚರಿಸುತ್ತಾರೆ. ದಿನನಿತ್ಯ ಚಿಕನ್ ತಿನ್ನುವುದರಿಂದ ಕೆಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ ಎಂದು ಹೇಳಲಾಗುತ್ತದೆ. ಆ ಸಮಸ್ಯೆಗಳೇನು ಎಂಬುದನ್ನು ತಿಳಿಯೋಣ..
ಅಧಿಕ ರಕ್ತದೊತ್ತಡದ ಸಾಧ್ಯತೆ: ದಿನನಿತ್ಯ ಚಿಕನ್ ತಿನ್ನುವುದರಿಂದ ನಮ್ಮ ದೇಹದಲ್ಲಿ ಕೊಬ್ಬು ಹೆಚ್ಚುತ್ತದೆ. ನಮ್ಮ ದೇಹದಲ್ಲಿ ಸೋಡಿಯಂನ ಶೇಕಡಾವಾರು ಪ್ರಮಾಣವೂ ಹೆಚ್ಚಾಗುತ್ತದೆ. ಸ್ಕಿನ್ ಲೆಸ್ ಚಿಕನ್ ಗಿಂತ ಸ್ಕಿನ್ ಇರುವ ಚಿಕನ್ ತಿನ್ನುವುದರಿಂದ ಈ ಅಪಾಯ ಇನ್ನೂ ಹೆಚ್ಚು ಎನ್ನುತ್ತಾರೆ ತಜ್ಞರು. ಹೆಚ್ಚು ಸೋಡಿಯಂ ಅಧಿಕ ರಕ್ತದೊತ್ತಡದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತದೆ.
2017 ರಲ್ಲಿ ಅಮೆರಿಕನ್ ಜರ್ನಲ್ ಆಫ್ ಕ್ಲಿನಿಕಲ್ ನ್ಯೂಟ್ರಿಷನ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಪ್ರತಿದಿನ ಚಿಕನ್ ತಿನ್ನುವ ಜನರು ಅಧಿಕ ರಕ್ತದೊತ್ತಡದ ಸಮಸ್ಯೆ ಎದುರಿಸುವ ಸಾಧ್ಯತೆ 50 ಪ್ರತಿಶತ ಹೆಚ್ಚು ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಈ ಸಂಶೋಧನೆಯಲ್ಲಿ ಹಾರ್ವರ್ಡ್ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ನಲ್ಲಿ ಪೌಷ್ಟಿಕಾಂಶದ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಫ್ರಾಂಕ್ ಬಾವೋ ಭಾಗವಹಿಸಿದ್ದರು. ದಿನನಿತ್ಯ ಚಿಕನ್ ತಿಂದರೆ ಅಧಿಕ ರಕ್ತದೊತ್ತಡ ಬರಬಹುದು ಎಂದು ತಿಳಿಸಿದ್ದಾರೆ. ಆದ್ದರಿಂದ, ದಿನಕ್ಕೆ 50 ಗ್ರಾಂಗಿಂತ ಹೆಚ್ಚು ಚಿಕನ್ ತಿನ್ನಬಾರದು ಎಂದು ಸೂಚಿಸಿದ್ದಾರೆ.
ಹೃದಯ ಸಂಬಂಧಿ ಸಮಸ್ಯೆಗಳು: ದಿನನಿತ್ಯ ಹೆಚ್ಚು ಚಿಕನ್ ತಿನ್ನುವುದರಿಂದ ನಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಧಿಕವಾಗುತ್ತದೆ. ಇದು ಹೃದಯದ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಅಲ್ಲದೆ, ಭವಿಷ್ಯದಲ್ಲಿ ಹೃದಯ ಸಂಬಂಧಿ ಸಮಸ್ಯೆಗಳು ಬರುವ ಸಾಧ್ಯತೆ ಹೆಚ್ಚು ಎಂದು ತಜ್ಞರು ಎಚ್ಚರಿಸಿದ್ದಾರೆ.
ತೂಕ ಹೆಚ್ಚಾಗುವುದು: ಕೋಳಿ ಮಾಂಸದಲ್ಲಿ ಹೆಚ್ಚಿನ ಕ್ಯಾಲೋರಿಗಳಿವೆ. ಪ್ರತಿನಿತ್ಯ ಇದನ್ನು ತಿನ್ನುವುದರಿಂದ ತೂಕ ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಅದರಲ್ಲೂ ಚಿಕನ್ ಬಿರಿಯಾನಿ, ಬಟರ್ ಚಿಕನ್, ಫ್ರೈಡ್ ಚಿಕನ್ ತಿಂದರೆ ಹೆಚ್ಚು ಅಪಾಯಕಾರಿ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಏಕೆಂದರೆ ಅವುಗಳ ತಯಾರಿಕೆಯಲ್ಲಿ ಎಣ್ಣೆ, ಮಸಾಲೆಗಳು ಮತ್ತು ಇತರ ಕೊಬ್ಬಿನ ಪದಾರ್ಥಗಳನ್ನು ಬಳಸಲಾಗುತ್ತದೆ. ಇದರಿಂದ ಇತರ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
- ಕೋಳಿ ಮಾಂಸದಲ್ಲಿ ಪ್ರೋಟೀನ್ ಅಧಿಕವಾಗಿದೆ. ಆದರೆ, ಪ್ರತಿದಿನ ಚಿಕನ್ ತಿಂದರೆ ಮೂಳೆ ಸಮಸ್ಯೆ ಬರಬಹುದು ಎನ್ನುತ್ತಾರೆ ತಜ್ಞರು.
- ಕೋಳಿ ಮಾಂಸ ತಿನ್ನುವುದರಿಂದ ದೇಹದಲ್ಲಿ ಉಷ್ಣತೆ ಹೆಚ್ಚುತ್ತದೆ. ಹೀಗಾಗಿ ಪ್ರತಿನಿತ್ಯ ಇದನ್ನು ತಿಂದರೆ ದೇಹದ ಉಷ್ಣತೆ ಹೆಚ್ಚುತ್ತದೆ.ಇದು ಇತರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಹೇಳಲಾಗುತ್ತದೆ.
ಸೂಚನೆ : ಇಲ್ಲಿ ನಿಮಗೆ ನೀಡಿರುವ ಎಲ್ಲಾ ಆರೋಗ್ಯ ಮಾಹಿತಿ ಮತ್ತು ಸಲಹೆಗಳು ನಿಮ್ಮ ತಿಳುವಳಿಕೆಗಾಗಿ ಮಾತ್ರ. ವೈಜ್ಞಾನಿಕ ಸಂಶೋಧನೆ, ಅಧ್ಯಯನಗಳು, ವೈದ್ಯಕೀಯ ಮತ್ತು ಆರೋಗ್ಯ ವೃತ್ತಿಪರ ಸಲಹೆಯನ್ನು ಆಧರಿಸಿ ನಾವು ಈ ಮಾಹಿತಿಯನ್ನು ಒದಗಿಸುತ್ತಿದ್ದೇವೆ. ಇವುಗಳನ್ನು ಅನುಸರಿಸುವ ಮೊದಲು ನಿಮ್ಮ ವೈಯಕ್ತಿಕ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.
ಓದಿ: ಈ ರೋಗಲಕ್ಷಣಗಳು ನಿಮ್ಮಲ್ಲಿ ಕಾಣಿಸಿಕೊಳ್ಳುತ್ತಿದ್ದರೆ ಕ್ಯಾಲ್ಸಿಯಂ ಕೊರತೆ ಇರಬಹುದು.. - Calcium Deficiency