ETV Bharat / health

ಹೃದಯದ ಆರೋಗ್ಯ ರಕ್ಷಿಸಲು ಶುಗರ್​ ಪೇಷಂಟ್​ಗಳಿಗೆ ವೈದ್ಯರು ನೀಡಿದ ಸಲಹೆಗಳು ಇಲ್ಲಿವೆ - HEART HEALTH TIPS

ಮಧುಮೇಹ ಹಾಗೂ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳು ತಮ್ಮ ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ವೈದ್ಯರು ಕೆಲವು ಮಹತ್ವದ ಸಲಹೆಗಳನ್ನು ನೀಡಿದ್ದಾರೆ.

HEALTH CARE TIPS FOR DIABETICS  HEALTHY LIVING WITH DIABETES  HEALTHY LIVING WITH KIDNEY DISEASE  ಹೃದಯದ ಆರೋಗ್ಯ ರಕ್ಷಣೆ
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Health Team

Published : Jan 11, 2025, 12:04 PM IST

Best Tips to Protect Heart Health: ಇಂದಿನ ಬದಲಾದ ಜೀವನಶೈಲಿ ಹಾಗೂ ಆಹಾರ ಪದ್ಧತಿಯಿಂದಾಗಿ ಅನೇಕ ಜನರು ಚಿಕ್ಕ ವಯಸ್ಸಿನಲ್ಲಿಯೇ ವಿವಿಧ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಪ್ರಮುಖವಾಗಿ ಮಧುಮೇಹದ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಒಮ್ಮೆ ಮಧುಮೇಹ ಪತ್ತೆಯಾದ ಬಳಿಕ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳದೇ ಇದ್ದರೆ, ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುವ ಅಪಾಯ ಹೆಚ್ಚಿರುತ್ತದೆ. ಟೈಪ್ 2 ಮಧುಮೇಹ ನಿಯಂತ್ರಿಸದಿದ್ದರೆ ಮೂತ್ರಪಿಂಡ, ಹೃದಯ ಕಾಯಿಲೆ ಬರುವ ಅಪಾಯ ಹೆಚ್ಚು ಎಂದು ಆರೋಗ್ಯ ತಜ್ಞರು ತಿಳಿಸುತ್ತಾರೆ.

ಏಕೆಂದರೆ, ರಕ್ತದಲ್ಲಿನ ಅಧಿಕ ಸಕ್ಕರೆ ಮಟ್ಟವು ಮೂತ್ರಪಿಂಡಗಳು, ಹೃದಯದಲ್ಲಿನ ರಕ್ತನಾಳಗಳು ಹಾಗೂ ನರಗಳಿಗೆ ಹಾನಿ ಉಂಟುಮಾಡುತ್ತದೆ. ಇದು ಅಂತಿಮವಾಗಿ ಮೂತ್ರಪಿಂಡ, ಹೃದಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಮೂತ್ರಪಿಂಡದ ಸಮಸ್ಯೆ ಇರುವವರು ತಮ್ಮ ಹೃದಯದ ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಇಲ್ಲದಿದ್ದರೆ, ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯು ರಕ್ತದೊತ್ತಡ ಹೆಚ್ಚಾಗುತ್ತದೆ. ಇದರ ಪರಿಣಾಮವಾಗಿ ಇದು ಹೃದಯದ ಮೇಲೆ ಒತ್ತಡ ಹೆಚ್ಚುತ್ತದೆ ಹಾಗೂ ವಿವಿಧ ಆರೋಗ್ಯದ ಸಮಸ್ಯೆಗಳಿಗೂ ಕಾರಣವಾಗುತ್ತದೆ.

ಮಧುಮೇಹ ಮತ್ತು ಮೂತ್ರಪಿಂಡದ ತೊಂದರೆ ಇರುವವರು ತಮ್ಮ ಹೃದಯದ ಆರೋಗ್ಯಕ್ಕಾಗಿ ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಜೊತೆಗೆ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದರಿಂದ ಹೃದಯದ ಆರೋಗ್ಯವನ್ನು ಸುಧಾರಿಸಬಹುದು ಎಂದು ಖ್ಯಾತ ಹೃದ್ರೋಗ ತಜ್ಞ ಡಾ.ರಮೇಶ್ ಗುಡಪತಿ ತಿಳಿಸುತ್ತಾರೆ.

ಶುಗರ್​ ನಿಯಂತ್ರಣದಲ್ಲಿ ಇಡಬೇಕು: ಹೃದಯ ಸಮಸ್ಯೆಗಳ ಅಪಾಯ ಕಡಿಮೆ ಮಾಡಲು ಮಧುಮೇಹ ರೋಗಿಗಳು ಮೊದಲು ತಮ್ಮ ಶುಗರ್​ ಲೆವಲ್​ನ್ನು ನಿಯಂತ್ರಣದಲ್ಲಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಇದರ ಪರಿಣಾಮ ಮೂತ್ರಪಿಂಡ ಮತ್ತು ಹೃದಯ ಸಮಸ್ಯೆಗಳ ಅಪಾಯ ಕಡಿಮೆಯಾಗುತ್ತದೆ ಎಂದು ಡಾ.ರಮೇಶ್ ಹೇಳುತ್ತಾರೆ.

ರಕ್ತದೊತ್ತಡ ನಿಯಂತ್ರಣದಲ್ಲಿರಲಿ: ಮಧುಮೇಹ, ಮೂತ್ರಪಿಂಡದ ಸಮಸ್ಯೆ ಇರುವವರು ಹೃದಯ ಕಾಯಿಲೆಯನ್ನು ತಪ್ಪಿಸಲು ತಮ್ಮ ರಕ್ತದೊತ್ತಡ ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯವಾಗಿದೆ. ಇಲ್ಲದಿದ್ದರೆ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ವೈದ್ಯರು ಎಚ್ಚರಿಕೆ ನೀಡುತ್ತಾರೆ.

ಔಷಧಿಗಳನ್ನು ಸರಿಯಾಗಿ ತೆಗೆದುಕೊಳ್ಳಿ: ಮಧುಮೇಹ, ಮೂತ್ರಪಿಂಡದ ಕಾಯಿಲೆ ಇರುವ ಅನೇಕ ಜನರು ತಾವು ತೆಗೆದುಕೊಳ್ಳುವ ಔಷಧಿಗಳ ಬಗ್ಗೆ ಅಸಡ್ಡೆ ತೋರುತ್ತಾರೆ. ಕೆಲವೊಮ್ಮೆ ಅವರು ತಮ್ಮ ಔಷಧಿಗಳನ್ನು ತೆಗೆದುಕೊಳ್ಳುವುದನ್ನು ಕೂಡ ಮರೆತುಬಿಡುತ್ತಾರೆ. ಆರೋಗ್ಯವಾಗಿರಲು ಸೂಚಿಸಲಾದ ಔಷಧಿಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ವೈದ್ಯರು ಸಲಹೆ ನೀಡುತ್ತಾರೆ.

ಧೂಮಪಾನ ಮಾಡಬೇಡಿ: ಧೂಮಪಾನದ ಅಭ್ಯಾಸ ಹೊಂದಿರುವ ಮಧುಮೇಹ ಮತ್ತು ಮೂತ್ರಪಿಂಡದ ರೋಗಿಗಳು ಸಾಧ್ಯವಾದಷ್ಟು ಬೇಗ ತ್ಯಜಿಸಬೇಕು. ಏಕೆಂದರೆ ಈ ಅಭ್ಯಾಸವು ಹೃದಯದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟುಮಾಡುತ್ತದೆ. ಧೂಮಪಾನದಿಂದ ದೂರವಿರುವುದು ಉತ್ತಮವಾಗಿದೆ ಎಂದು ವೈದ್ಯರು ಹೇಳುತ್ತಾರೆ.

ನಿಯಮಿತ ವ್ಯಾಯಾಮ ಅವಶ್ಯ: ಆರೋಗ್ಯವಾಗಿರಬೇಕಾದರೆ, ನೀವು ನಿಯಮಿತವಾಗಿ ವ್ಯಾಯಾಮ ಮಾಡಬೇಕು, ನಿಮ್ಮ ದೇಹದ ತೂಕವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕಾಗುತ್ತದೆ. ಮಧುಮೇಹ ಮತ್ತು ಮೂತ್ರಪಿಂಡದ ಕಾಯಿಲೆಗಳಿಂದ ಬಳಲುತ್ತಿರುವವರು ತಾವು ತೆಗೆದುಕೊಳ್ಳಬೇಕಾದ ಔಷಧಿಗಳ ಬಗ್ಗೆ ತಿಳಿದಿರಬೇಕು. ಸರಿಯಾದ ಸಮಯದಲ್ಲಿ ಅವುಗಳನ್ನು ತೆಗೆದುಕೊಳ್ಳುವ ಬಗ್ಗೆ ಜಾಗರೂಕರಾಗಿರಬೇಕು ಎಂದು ವೈದ್ಯರು ತಿಳಿಸುತ್ತಾರೆ.

ಇದೆಲ್ಲದರ ಜೊತೆಗೆ ಆಹಾರದ ಬಗ್ಗೆ ಹಲವು ಮುನ್ನೆಚ್ಚರಿಕೆಗಳನ್ನು ವಹಿಸಬೇಕು. ಅದರಲ್ಲೂ ಹಸಿರು ತರಕಾರಿಗಳನ್ನು ಹೆಚ್ಚಾಗಿ ಸೇವನೆ ಮಾಡಬೇಕು. ನೀವು ಸೇವಿಸುವ ಆಹಾರದಲ್ಲಿ ನಾರಿನಂಶ ಹೆಚ್ಚಿರುವಂತೆ ನೋಡಿಕೊಳ್ಳಿ. ಉಪ್ಪು ಹಾಗೂ ಸಿಹಿ ಆಹಾರಗಳ ಸೇವನೆ ಸಾಧ್ಯವಾದಷ್ಟು ಕಡಿಮೆ ಮಾಡಿ. ಜಂಕ್ ಫುಡ್‌ಗಳನ್ನು ಸೇವಿಸಬಾರದು. ಈ ಕೆಲವು ಮುನ್ನೆಚ್ಚರಿಕೆಗಳನ್ನು ಅನುಸರಿಸಿದರೆ ಹೃದಯಕ್ಕೆ ಸಂಬಂಧಿಸಿದ ಹೆಚ್ಚಿನ ಸಮಸ್ಯೆಗಳನ್ನು ತಡೆಗಟ್ಟಬಹುದು ಎಂದು ಹೃದ್ರೋಗ ತಜ್ಞ ಡಾ. ರಮೇಶ್ ವಿವರಿಸುತ್ತಾರೆ.

ಈ ಮೇಲಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಮೂಲಕ ಮೂತ್ರಪಿಂಡ, ಮಧುಮೇಹ ರೋಗಿಗಳನ್ನು ಹೃದಯ ಸಮಸ್ಯೆಗಳಿಂದ ರಕ್ಷಿಸಬಹುದು ಎಂದು ನ್ಯಾಷನಲ್​ ಇನಸ್ಟಿಟ್ಯೂಟ್​ ಆಫ್​ ಹೆಲ್ತ್​ನ ಸಂಶೋಧನಾ ತಂಡ ಸ್ಪಷ್ಟಪಡಿಸಿದೆ. ಸಂಬಂಧಿತ ಸಂಶೋಧನಾ ವರದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಮಾಹಿತಿಗಾಗಿ ಈ ವೆಬ್​ಸೈಟ್​ನ್ನು ವೀಕ್ಷಿಸಬಹುದು: https://www.niddk.nih.gov/health-information/kidney-disease/heart-disease

ಓದುಗರಿಗೆ ಸೂಚನೆ : ಇಲ್ಲಿ ನಿಮಗೆ ನೀಡಿರುವ ಎಲ್ಲ ಆರೋಗ್ಯ ಮಾಹಿತಿ ಮತ್ತು ಸಲಹೆಗಳು ನಿಮ್ಮ ತಿಳಿವಳಿಕೆಗಾಗಿ ಮಾತ್ರ. ವೈಜ್ಞಾನಿಕ ಸಂಶೋಧನೆ, ಅಧ್ಯಯನಗಳು, ವೈದ್ಯಕೀಯ ಮತ್ತು ಆರೋಗ್ಯ ವೃತ್ತಿಪರ ಸಲಹೆ ಆಧರಿಸಿ ನಾವು ಈ ಮಾಹಿತಿ ನಿಮಗೆ ನೀಡಿದ್ದೇವೆ. ಆದರೆ, ಇವುಗಳನ್ನು ಅನುಸರಿಸುವ ಮೊದಲು ಪರಿಣಿತ ವೈದ್ಯರ ಸಲಹೆಯನ್ನು ತೆಗೆದುಕೊಳ್ಳುವುದು ಉತ್ತಮ.

ಇವುಗಳನ್ನೂ ಓದಿ:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.