ETV Bharat / international

2013ರ ಗೋಲಿಬಾರ್ ಪ್ರಕರಣ: ಶೇಖ್ ಹಸೀನಾ ವಿರುದ್ಧ 'ಸಾಮೂಹಿಕ ಕೊಲೆ' ದೂರು ದಾಖಲು - Sheikh Hasina - SHEIKH HASINA

2013ರಲ್ಲಿ ನಡೆದಿದೆ ಎನ್ನಲಾದ ನರಮೇಧ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ.

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ (IANS)
author img

By PTI

Published : Aug 18, 2024, 5:15 PM IST

ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಮತ್ತು ಇತರ 33 ಮಂದಿಯ ವಿರುದ್ಧ ಸಾಮೂಹಿಕ ಕೊಲೆ ಪ್ರಕರಣ ದಾಖಲಿಸುವಂತೆ ರವಿವಾರ ಬಾಂಗ್ಲಾದೇಶದ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. 2013ರಲ್ಲಿ ಹೆಫಾಜತ್-ಎ-ಇಸ್ಲಾಂ ಆಯೋಜಿಸಿದ್ದ ರ್ಯಾಲಿ ಮೇಲೆ ವಿವೇಚನಾರಹಿತವಾಗಿ ಗುಂಡು ಹಾರಿಸಿ ಸಾಮೂಹಿಕ ಹತ್ಯೆ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಬಾಂಗ್ಲಾದೇಶ ಪೀಪಲ್ಸ್ ಪಾರ್ಟಿ (ಬಿಪಿಪಿ) ಅಧ್ಯಕ್ಷ ಬಾಬುಲ್ ಸರ್ದಾರ್ ಚಖಾರಿ ಅವರು ಢಾಕಾ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಝಾಕಿ-ಅಲ್-ಫರಾಬಿ ನ್ಯಾಯಾಲಯದಲ್ಲಿ ಈ ಕುರಿತಾದ ಅರ್ಜಿ ಸಲ್ಲಿಸಿದ್ದಾರೆ ಎಂದು ಢಾಕಾ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ. 2013ರ ಮೇ 5ರಂದು ಮೋತಿಜೀಲ್ ನ ಶಾಪ್ಲಾ ಚಟ್ಟರ್​ನಲ್ಲಿ ನಡೆದ ರ್ಯಾಲಿಯಲ್ಲಿ ಸಾಮೂಹಿಕ ಹತ್ಯೆ ನಡೆದಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ನ್ಯಾಯಾಲಯವು ವಾದಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು, ಈ ವಿಷಯದ ಬಗ್ಗೆ ನಂತರ ಆದೇಶ ಹೊರಡಿಸುವುದಾಗಿ ಹೇಳಿದೆ.

ಅಲ್ಲಿಗೆ ಈಗ ಬಾಂಗ್ಲಾದೇಶದಲ್ಲಿ ಹಸೀನಾ ವಿರುದ್ಧ ಎಂಟು ಕೊಲೆ, ಒಂದು ಅಪಹರಣ ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳು ಮತ್ತು ನರಮೇಧ ಸೇರಿದಂತೆ 11 ಪ್ರಕರಣಗಳು ದಾಖಲಾಗಿವೆ. ಬಾಂಗ್ಲಾದೇಶದಲ್ಲಿ ಉಂಟಾದ ಆಂತರಿಕ ಗಲಭೆಗಳ ನಂತರ ಆಗಸ್ಟ್ 5ರಂದು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ 76 ವರ್ಷದ ಶೇಖ್ ಹಸೀನಾ ಸದ್ಯ ಭಾರತದಲ್ಲಿ ಆಶ್ರಯ ಪಡೆದಿದ್ದಾರೆ.

ಹಸೀನಾ ಸರ್ಕಾರದ ಪತನದ ನಂತರ ದೇಶಾದ್ಯಂತ ಭುಗಿಲೆದ್ದ ಹಿಂಸಾಚಾರದ ಘಟನೆಗಳಲ್ಲಿ ಬಾಂಗ್ಲಾದೇಶದಲ್ಲಿ 230ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ ಸರ್ಕಾರಿ ಉದ್ಯೋಗಗಳಲ್ಲಿ ವಿವಾದಾತ್ಮಕ ಮೀಸಲಾತಿ ವ್ಯವಸ್ಥೆಯ ವಿರುದ್ಧ ಜುಲೈ ಮಧ್ಯದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ ಪ್ರಾರಂಭವಾದಾಗಿನಿಂದ 600ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ.

ಜುಲೈ 15ರಿಂದ ಆಗಸ್ಟ್ 5ರ ವರೆಗೆ ಹಸೀನಾ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಸಾಮೂಹಿಕ ಆಂದೋಲನದ ಸಂದರ್ಭದಲ್ಲಿ ನಡೆದಿದೆ ಎಂದು ಆರೋಪಿಸಲಾದ ನರಮೇಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪದ ಮೇಲೆ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿಯು ಬುಧವಾರ ಮಾಜಿ ಪ್ರಧಾನಿ ಹಸೀನಾ ಮತ್ತು ಇತರ ಒಂಬತ್ತು ಜನರ ವಿರುದ್ಧ ತನಿಖೆಯನ್ನು ಪ್ರಾರಂಭಿಸಿದೆ.

ಹಸೀನಾ ನೇತೃತ್ವದ ಸರ್ಕಾರದ ಪತನದ ನಂತರ ಬಾಂಗ್ಲಾದೇಶದಲ್ಲಿ ಹೊಸ ಮಧ್ಯಂತರ ಸರ್ಕಾರವನ್ನು ರಚಿಸಲಾಗಿದ್ದು, 84 ವರ್ಷದ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನುಸ್ ಅವರನ್ನು ಸರ್ಕಾರದ ಮುಖ್ಯ ಸಲಹೆಗಾರರಾಗಿ ನೇಮಿಸಲಾಗಿದೆ.

ಇದನ್ನೂ ಓದಿ: 'ಯುಎಇಯಲ್ಲಿ ಶಾಪಿಂಗ್​ ಮಾಡಿ, ರೂಪಾಯಿಯಲ್ಲೇ ಪಾವತಿಸಿ': ಭಾರತದ UPI ಕಮಾಲ್! - UPI in UAE

ETV Bharat Logo

Copyright © 2024 Ushodaya Enterprises Pvt. Ltd., All Rights Reserved.