ಸಿಡ್ನಿ (ಆಸ್ಟ್ರೇಲಿಯಾ): ನಗರದ ದೊಡ್ಡ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಚಾಕು ದಾಳಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ವೇಳೆ ದಾಳಿಕೋರರು ಹಲವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಘಟನೆಯ ನಂತರ ಖರೀದಿ ಕೇಂದ್ರದಲ್ಲಿ ಆತಂಕದ ವಾತಾವರಣ ಉಂಟಾಗಿದ್ದು, ಜನರನ್ನು ಕೂಡಲೇ ಶಾಪಿಂಗ್ ಕಾಂಪ್ಲೆಕ್ಸ್‌ನಿಂದ ಹೊರಹೋಗುವಂತೆ ಸೂಚಿಸಲಾಗಿತ್ತು. ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಆರೋಪಿಗೆ ಗುಂಡು ಹಾರಿಸಿದ್ದರು. ಈ ದಾಳಿಯಲ್ಲಿ ಐವರು ಸಾವನ್ನಪ್ಪಿದ್ದು, ಮಗು ಸೇರಿದಂತೆ ಅನೇಕರು ಗಾಯಗೊಂಡಿದ್ದಾರೆ.
ಅಲ್ಲಿನ ಮಾಧ್ಯಮಗಳ ವರದಿಯ ಪ್ರಕಾರ, ಸಿಡ್ನಿಯ ವೆಸ್ಟ್‌ಫೀಲ್ಡ್ ಬೋಂಡಿ ಜಂಕ್ಷನ್ ಶಾಪಿಂಗ್ ಸೆಂಟರ್‌ನಲ್ಲಿ ಆರೋಪಿಗಳಿಬ್ಬರು ಚಾಕುವಿನಿಂದ 9 ಜನರ ಮೇಲೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಐವರು ಸಾವನ್ನಪ್ಪಿದ್ದಾರೆ. ಈ ದಾಳಿ ಬಗ್ಗೆ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಆರೋಪಿಗೆ ಗುಂಡು ಹಾರಿಸಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆದ್ರೆ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಸಹಾಯಕ ಪೊಲೀಸ್ ಕಮಿಷನರ್ ಆಂಥೋನಿ ಕುಕ್ ಸುದ್ದಿಗಾರರಿಗೆ ತಿಳಿಸಿದರು.
ಶಾಪಿಂಗ್ ಸೆಂಟರ್‌ನ ಸುತ್ತಲೂ ಅನೇಕ ಆಂಬ್ಯುಲೆನ್ಸ್‌ಗಳು ಮತ್ತು ಪೋಲೀಸ್ ಕಾರುಗಳು ಜೊತೆ ಜನರು ಇರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋದಲ್ಲಿ ಕಂಡುಬಂದಿದೆ. ಸಶಸ್ತ್ರ ಪಡೆಯ ಪೊಲೀಸರು ಮೇಲ್ಛಾವಣಿಯ ಪಾರ್ಕಿಂಗ್ ಸ್ಥಳದಲ್ಲಿ ಶೋಧ ಕಾರ್ಯ ಕೈಗೊಂಡಿದ್ದಾರೆ. ಈ ಘಟನೆ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
ಓದಿ: ಹ್ಯಾಕರ್ಗಳಿಂದ ನಿಮ್ಮ ವೈಫೈ ರಕ್ಷಿಸಿಕೊಳ್ಳಲು ಈ ಕ್ರಮ ಅನುಸರಿಸಿ - Follow this to Protect WIFI