ETV Bharat / international

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಲಾಗಿದೆ.

author img

By PTI

Published : 2 hours ago

ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ
ಬಾಂಗ್ಲಾದೇಶ ಮಾಜಿ ಪ್ರಧಾನಿ ಹಸೀನಾ (IANS)

ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಮತ್ತು ಅವಾಮಿ ಲೀಗ್ ನಾಯಕರು ಸೇರಿದಂತೆ ಇತರ 45 ಮಂದಿ ವಿರುದ್ಧ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ ಗುರುವಾರ ಬಂಧನ ವಾರಂಟ್ ಹೊರಡಿಸಿದೆ. ಇತ್ತೀಚೆಗೆ ದೇಶಾದ್ಯಂತ ನಡೆದ ಸಾಮೂಹಿಕ ವಿದ್ಯಾರ್ಥಿ ಚಳವಳಿಯ ಸಂದರ್ಭದಲ್ಲಿ ಮಾನವೀಯ ದೌರ್ಜನ್ಯ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಈ ವಾರಂಟ್ ಹೊರಡಿಸಲಾಗಿದೆ.

ಇವರೆಲ್ಲರ ವಿರುದ್ಧ ಬಂಧನ ವಾರಂಟ್ ಕೋರಿ ಪ್ರಾಸಿಕ್ಯೂಷನ್ ನ್ಯಾಯಮಂಡಳಿಗೆ ಎರಡು ಅರ್ಜಿಗಳನ್ನು ಸಲ್ಲಿಸಿದ ನಂತರ ಅದರ ಅಧ್ಯಕ್ಷ ನ್ಯಾಯಮೂರ್ತಿ ಮೊಹಮ್ಮದ್ ಗೋಲಮ್ ಮೊರ್ತುಜಾ ಮಜುಂದಾರ್ ನೇತೃತ್ವದ ನ್ಯಾಯಮಂಡಳಿ ಈ ಆದೇಶಗಳನ್ನು ಹೊರಡಿಸಿದೆ ಎಂದು ಮುಖ್ಯ ಪ್ರಾಸಿಕ್ಯೂಟರ್ ಮುಹಮ್ಮದ್ ತಾಜುಲ್ ಇಸ್ಲಾಂ ಹೇಳಿದ್ದಾರೆ.

ನವೆಂಬರ್ 18ರೊಳಗೆ ಹಸೀನಾ ಸೇರಿದಂತೆ 46 ಜನರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ನ್ಯಾಯಮಂಡಳಿ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ ಎಂದು ಅವರು ಹೇಳಿದರು.

ಈ ಹಿಂದೆ ಆಡಳಿತದಲ್ಲಿದ್ದ ಹಸೀನಾ ನೇತೃತ್ವದ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಸಾಮೂಹಿಕ ಚಳವಳಿಯ ಸಂದರ್ಭದಲ್ಲಿ ನಡೆದ ಹತ್ಯೆಗಳಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬಾಂಗ್ಲಾದೇಶದಲ್ಲಿ ಸದ್ಯ ಅಧಿಕಾರದ ಚುಕ್ಕಾಣಿ ಹಿಡಿದಿರುವ ಮಧ್ಯಂತರ ಸರ್ಕಾರ ಆಗಸ್ಟ್​ನಲ್ಲಿ ಹೇಳಿತ್ತು.

ಹಸೀನಾ ಸರ್ಕಾರದ ಪತನದ ಸಂದರ್ಭದಲ್ಲಿ ದೇಶಾದ್ಯಂತ ಭುಗಿಲೆದ್ದ ಹಿಂಸಾಚಾರದ ಘಟನೆಗಳಲ್ಲಿ ಬಾಂಗ್ಲಾದೇಶದಲ್ಲಿ 230ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸರ್ಕಾರಿ ಉದ್ಯೋಗಗಳಲ್ಲಿ ವಿವಾದಾತ್ಮಕ ಕೋಟಾ ವ್ಯವಸ್ಥೆಯ ವಿರುದ್ಧ ಜುಲೈ ಮಧ್ಯದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ ಪ್ರಾರಂಭವಾದಾಗಿನಿಂದ ಗಲಭೆಗಳಲ್ಲಿ ಒಟ್ಟು 600ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ.

ಸರ್ಕಾರಿ ದಿನಾಚರಣೆಗಳು ರದ್ದು: ಮುಖ್ಯ ಸಲಹೆಗಾರ ಮುಹಮ್ಮದ್ ಯೂನುಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು, ಶೇಖ್ ಮುಜಿಬುರ್ ರಹಮಾನ್ ನೇತೃತ್ವದಲ್ಲಿ ನಡೆದಿದ್ದ ದೇಶದ ವಿಮೋಚನಾ ಯುದ್ಧಕ್ಕೆ ಸಂಬಂಧಿಸಿದ ಮಾರ್ಚ್ 7 ಮತ್ತು ಆಗಸ್ಟ್ 15ರ ಸಂಭ್ರಮಾಚರಣೆಗಳು ಸೇರಿದಂತೆ ಎಂಟು ರಾಷ್ಟ್ರೀಯ ದಿನಗಳ ಆಚರಣೆಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ. ಈ ನಿರ್ಧಾರವನ್ನು 1971ರ ಸ್ವಾತಂತ್ರ್ಯ ಸಂಗ್ರಾಮದ ಸ್ಫೂರ್ತಿಯ ಮೇಲಿನ ದಾಳಿ ಎಂದು ಪರಿಗಣಿಸಲಾಗಿದ್ದು, ದೇಶದ ಕೆಲ ವಲಯಗಳಿಂದ ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಈ ಕುರಿತಾದ ಅಧಿಕೃತ ಸರ್ಕಾರಿ ಆದೇಶ ಇನ್ನೂ ಬಂದಿಲ್ಲ. ಶೀಘ್ರದಲ್ಲೇ ನಡೆಯಲಿರುವ ಕ್ಯಾಬಿನೆಟ್​ ಸಭೆಯ ನಂತರ ಈ ಕುರಿತಾದ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದು ಯೂನುಸ್ ಅವರ ವೆರಿಫೈಡ್ ಫೇಸ್‌ಬುಕ್ ಪುಟದಲ್ಲಿ ಬುಧವಾರ ತಿಳಿಸಲಾಗಿದೆ.

ಇದನ್ನೂ ಓದಿ: ಸುಡಾನ್​ನಲ್ಲಿ 18 ತಿಂಗಳಿಂದ ಸಂಘರ್ಷ: 30 ಲಕ್ಷ ಜನರ ಪಲಾಯನ, ಕಾಲರಾಗೆ 700 ಮಂದಿ ಬಲಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.