ETV Bharat / international

ಜಿ7 ಶೃಂಗಸಭೆಯಲ್ಲಿ ಬೈಡನ್-ಮೋದಿ ಮುಖಾಮುಖಿ: ಸಿಖ್​ ಪ್ರತ್ಯೇಕತಾವಾದಿ ಹತ್ಯೆ ವಿಷಯ ಪ್ರಸ್ತಾಪ ಸಾಧ್ಯತೆ - Biden Modi at G7 Summit

author img

By PTI

Published : Jun 13, 2024, 8:59 AM IST

ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್​ ಜಿ-7 ಶೃಂಗಸಭೆಯಲ್ಲಿ ಎದುರು ಬದುರಾಗುವ ಸಾಧ್ಯತೆ ಇದೆ ಎಂದು ಯುಎಸ್​ ರಾಷ್ಟ್ರೀಯ ಭದ್ರತಾ ಸಲಹೆಗಾರ ತಿಳಿಸಿದ್ದಾರೆ.

ಬೈಡೆನ್-ಮೋದಿ
ಬೈಡೆನ್-ಮೋದಿ (ANI)

ವಾಷಿಂಗ್ಟನ್​: ಇಟಲಿಯಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಮುಖಾಮುಖಿ ಆಗಲಿದ್ದು, ಸಿಖ್​ ಪ್ರತ್ಯೇಕತಾವಾದಿ ಮುಖಂಡನ ಹತ್ಯೆ ವಿಚಾರ ಪ್ರಸ್ತಾಪವಾಗುವ ಸಾಧ್ಯತೆ ಇದೆ. ಇದರ ಜತೆಗೆ ಎರಡೂ ರಾಷ್ಟ್ರಗಳ ನಡುವಣ ಸಂಬಂಧ ವೃದ್ಧಿ ಬಗ್ಗೆ ಮಾತುಕತೆ ನಡೆಯುವ ಸಾಧ್ಯತೆಗಳಿವೆ ಎಂದು ಯುಎಸ್​ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವನ್ ತಿಳಿಸಿದ್ದಾರೆ.

ಈ ಬಗ್ಗೆ ಬುಧವಾರ ಪ್ರತಿಕ್ರಿಯೆ ನೀಡಿರುವ ಅವರು, ಬೈಡನ್​​ ಅವರು ಪ್ರಧಾನಿ ಮೋದಿಯವರನ್ನು ಭೇಟಿ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಜಿ7 ಸಭೆಯಲ್ಲಿ ಪ್ರಸ್ತಾಪವಾಗಲಿರುವ ಹಲವಾರು ವಿಷಯಗಳ ಕುರಿತು ಉಭಯ ನಾಯಕರ ಮಧ್ಯೆ ಚರ್ಚೆಗಳು ನಡೆಯಲಿವೆ. ಅದರಲ್ಲೂ ಸಿಖ್ ಪ್ರತ್ಯೇಕತಾವಾದಿ ನಾಯಕನ ಹತ್ಯೆ ಪ್ರಕರಣದ ಬಗ್ಗೆ ಅಮೆರಿಕ ಉನ್ನತ ಮಟ್ಟದಲ್ಲಿ ಚರ್ಚಿಸಬಹುದು. ಈ ವಿಷಯವಾಗಿ ಪ್ರಧಾನಿ ಮೋದಿ ಅವರೊಂದಿಗೆ ಬೈಡನ್​ ಈ ವಿಷಯ ಪ್ರಸ್ತಾಪ ಮಾಡಿ, ಸ್ಪಷ್ಟನೆ ಬಯಸಬಹುದು ಎಂದು ನಿರೀಕ್ಷಿಸಲಾಗಿದೆ ಎಂದು ಸುಲ್ಲಿವನ್ ತಿಳಿಸಿದ್ದಾರೆ.

ಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ: ಭಾರತದ ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ನಿನ್ನೆ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿ7 ಶೃಂಗಸಭೆಗಾಗಿ ಪ್ರಧಾನಿ ಮೋದಿ ಗುರುವಾರ ಇಟಲಿಗೆ ಪ್ರಯಾಣಿಸಲಿದ್ದಾರೆ ಎಂದು ಖಚಿತ ಪಡಿಸಿದ್ದಾರೆ. ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡ ನಂತರ ಮೋದಿ ಅವರ ಮೊದಲ ವಿದೇಶ ಪ್ರವಾಸ ಇದಾಗಿದೆ.

ಇಟಲಿ ತಲುಪಿದ ಬಳಿಕ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿ ಮಾಡಲಿದ್ದಾರೆ. ಆದಾಗ್ಯೂ, ದ್ವಿಪಕ್ಷೀಯ ಅಥವಾ ಇತರ ನಾಯಕರೊಂದಿಗಿನ ಸಭೆಗಳ ವಿವರಗಳನ್ನು ಇನ್ನೂ ರೂಪಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಉನ್ನತ ಮಟ್ಟದ ನಿಯೋಗದೊಂದಿಗೆ ಮೋದಿ ಪಯಣ: ಜೂನ್ 14 ರಂದು ನಡೆಯಲಿರುವ ಶೃಂಗಸಭೆಯಲ್ಲಿ ಉನ್ನತ ಮಟ್ಟದ ನಿಯೋಗದೊಂದಿಗೆ ಮೋದಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ. ಇದರಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್, ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಒಳಗೊಂಡಿರುವ ಉನ್ನತ ಮಟ್ಟದ ನಿಯೋಗವೂ ಪ್ರಧಾನ ಮಂತ್ರಿಯವರೊಂದಿಗೆ ಇರಲಿದೆ.

ಜಿ-7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗಿನ ಸಭೆ ಸೇರಿದಂತೆ ಹಲವು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.

ಇದನ್ನೂ ಓದಿ: ಸಾಮರ್ಥ್ಯ ಮೀರಿ ವಿಪರೀತ ಖರ್ಚು, ಒಟ್ಟು ಆರ್ಥಿಕತೆಯ ಶೇ 110ರಷ್ಟು ಸಾಲ! ಮಾಲ್ಡೀವ್ಸ್‌ಗೆ ವಿಶ್ವಬ್ಯಾಂಕ್ ಎಚ್ಚರಿಕೆ - Maldives Debt

ETV Bharat Logo

Copyright © 2024 Ushodaya Enterprises Pvt. Ltd., All Rights Reserved.