ETV Bharat / international

ಉಕ್ರೇನ್‌ನಲ್ಲಿ ಯುದ್ಧ ನಿಲ್ಲಿಸುವ ಬಗ್ಗೆ ಟ್ರಂಪ್‌-ಪುಟಿನ್ ದೂರವಾಣಿ ಚರ್ಚೆ- ವರದಿ

ಉಕ್ರೇನ್‌ನಲ್ಲಿ ಯುದ್ಧ ನಿಲ್ಲಿಸುವ ಕುರಿತು ರಷ್ಯಾಧ್ಯಕ್ಷ ವ್ಲಾಡಿಮಿರ್​ ಪುಟಿನ್ ಹಾಗು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದೂರವಾಣಿ ಮೂಲಕ ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್
ಡೊನಾಲ್ಡ್​ ಟ್ರಂಪ್ ಮತ್ತು ವ್ಲಾಡಿಮಿರ್​ ಪುಟಿನ್ (ಸಂಗ್ರಹ ಚಿತ್ರ) (IANS)
author img

By PTI

Published : Nov 11, 2024, 10:38 AM IST

ವಾಷಿಂಗ್ಟನ್(ಅಮೆರಿಕ)​: ಉಕ್ರೇನ್‌ನಲ್ಲಿ ಯುದ್ಧ ಕೊನೆಗೊಳಿಸುವ ಕುರಿತಾಗಿ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​ ಅವರಿಗೆ ದೂರವಾಣಿ ಕರೆ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಫ್ಲೋರಿಡಾದ ತಮ್ಮ ರೆಸಾರ್ಟ್‌ನಿಂದ ವ್ಲಾಡಿಮಿರ್ ಪುಟಿನ್‌ಗೆ ಕರೆ ಮಾಡಿರುವ ಅವರು, ಉಕ್ರೇನ್‌ನಲ್ಲಿ ಯುದ್ಧ ನಿಲ್ಲಿಸುವ ಕುರಿತಾಗಿ ಪುಟಿನ್‌ಗೆ ಕೆಲವು ಸಲಹೆಗಳನ್ನು ನೀಡಿದ್ದಾರೆ. ಇಬ್ಬರು ನಾಯಕರು ತಮ್ಮ ಫೋನ್ ಸಂಭಾಷಣೆಯಲ್ಲಿ, ಯುರೋಪ್‌ ಖಂಡದಲ್ಲಿ ಶಾಂತಿ ಸ್ಥಾಪಿಸುವುದು ಮತ್ತು ಉಕ್ರೇನ್‌ನಲ್ಲಿ ಯುದ್ಧ ನಿಲ್ಲಿಸುವ ಕುರಿತು ಪರಿಹಾರೋಪಾಯಗಳನ್ನು ಶೀಘ್ರದಲ್ಲೇ ಚರ್ಚಿಸುವ ಆಸಕ್ತಿ ವ್ಯಕ್ತಪಡಿಸಿದ್ದಾರೆ ಎಂದು ವಾಷಿಂಗ್ಟನ್​ ಪೋಸ್ಟ್ ಪತ್ರಿಕೆ ತನ್ನ ವಿಶೇಷ ವರದಿಯಲ್ಲಿ ತಿಳಿಸಿದೆ.

ಡೊನಾಲ್ಡ್​​ ಟ್ರಂಪ್ ಜನವರಿ 20, 2025ರಂದು ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನವೆಂಬರ್​ 5ರಂದು ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಐತಿಹಾಸಿಕ ವಿಜಯ ದಾಖಲಿಸಿದ ಟ್ರಂಪ್,​ 70ಕ್ಕೂ ಹೆಚ್ಚು ವಿಶ್ವ ನಾಯಕರೊಂದಿಗೆ ಮಾತನಾಡಿದ್ದಾರೆ. ಅವರು ಕರೆ ಮಾಡಿದ ಮೊದಲಿಗರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೇಲ್‌ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೇರಿದ್ದಾರೆ.

ಇದನ್ನೂ ಓದಿ: ಡೊನಾಲ್ಡ್​ ಟ್ರಂಪ್​​ 2.0 ಆಡಳಿತದಲ್ಲಿ ಟೆಕ್​ ದೈತ್ಯ ಎಲಾನ್​ ಮಸ್ಕ್​​​ ಪಾತ್ರವೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.