ETV Bharat / international

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ವಿರೋಧಿಸಿ ಅಮೆರಿಕದಲ್ಲಿ ಭಾರತೀಯ ಮೂಲದ ವೈದ್ಯರಿಂದ ಪ್ರತಿಭಟನೆ - doctors protest in US - DOCTORS PROTEST IN US

ಕೋಲ್ಕತ್ತಾದಲ್ಲಿ ನಡೆದ ಕಿರಿಯ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣವನ್ನು ಖಂಡಿಸಿರುವ ಅಮೆರಿಕದ ಹೂಸ್ಟನ್, ಟೆಕ್ಸಾಸ್ ವೈದ್ಯಕೀಯ ಕೇಂದ್ರದ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಕಳವಳ ವ್ಯಕ್ತಪಡಿಸಿದ್ದಾರೆ.

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ವಿರೋಧಿಸಿ ಅಮೆರಿಕಾದಲ್ಲಿ ಭಾರತೀಯ ಮೂಲದ ವೈದ್ಯರಿಂದ ಖಂಡನೆ
ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ವಿರೋಧಿಸಿ ಅಮೆರಿಕಾದಲ್ಲಿ ಭಾರತೀಯ ಮೂಲದ ವೈದ್ಯರಿಂದ ಖಂಡನೆ (AFP)
author img

By ETV Bharat Karnataka Team

Published : Aug 27, 2024, 10:43 AM IST

ಭಾರತೀಯ ಮೂಲದ ಅಮೆರಿಕ ವೈದ್ಯೆ ಶಾರದ ಗೌಡ (ETV Bharat)

ಹೂಸ್ಟನ್​, ಅಮೆರಿಕ: ಕೋಲ್ಕತ್ತಾ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಈ ಹತ್ಯೆ ಬಗ್ಗೆ ಅಮೆರಿಕದಲ್ಲಿರುವ ಭಾರತೀಯ ಮೂಲದ ಹಲವು ವೈದ್ಯರು ಕೂಡ ಕಳವಳ ವ್ಯಕ್ತಪಡಿಸಿದ್ದಾರೆ. ಹೂಸ್ಟನ್, ಟೆಕ್ಸಾಸ್ ವೈದ್ಯಕೀಯ ಕೇಂದ್ರದ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಪ್ರಕರಣ ಖಂಡಿಸಿ ಹತ್ಯೆಗೀಡಾದ ಕಿರಿಯ ವೈದ್ಯೆಗೆ ನ್ಯಾಯ ದೊರಕಿಸಿಕೊಡುವಂತೆ ಫಲಕಗಳನ್ನು ಪ್ರದರ್ಶಿಸಿದ್ದಾರೆ.

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ವಿರೋಧಿಸಿ ಅಮೆರಿಕಾದಲ್ಲಿ ಭಾರತೀಯ ಮೂಲದ ವೈದ್ಯರಿಂದ ಖಂಡನೆ
ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ವಿರೋಧಿಸಿ ಅಮೆರಿಕಾದಲ್ಲಿ ಭಾರತೀಯ ಮೂಲದ ವೈದ್ಯರಿಂದ ಖಂಡನೆ (AFP)

ವೈದ್ಯೆಯ ಹತ್ಯೆಗೆ ಮಹತ್ವದ ತಿರುವು: ಕೋಲ್ಕತ್ತಾದ ಆರ್​ಜಿಕಾರ್​ ಮೆಡಿಕಲ್​ ಕಾಲೇಜಿನಲ್ಲಿ ಆಗಸ್ಟ್ 9 ರ ರಾತ್ರಿ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯಾಗಿತ್ತು. ಮೃತದೇಹ ಪತ್ತೆಯಾಗುವ ಮೊದಲು ಇದು ಆಕೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದರು. ಬಳಿಕ ಅದು ಅತ್ಯಾಚಾರ, ಕೊಲೆ ಎಂದು ತಿಳಿದು ಬಂದಿತ್ತು. ಈ ಹತ್ಯೆಯಲ್ಲಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಗರಿಕ ಸ್ವಯಂಸೇವಕ ಸಂಜಯ್ ರಾಯ್​ನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಮೃತ ವೈದ್ಯೆಯ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಇದು ಓರ್ವನಿಂದ ನಡೆದ ಕೊಲೆಯಲ್ಲ. ಅನೇಕರಿಂದ ನಡೆದ ಸಾಮೂಹಿಕ ಅತ್ಯಾಚಾರ ಎಂದು ತಿಳಿದು ಬಂದಿದೆ.

ಈ ವೇಳೆ ಮಾಜಿ ಆರ್​ಜಿಕರ್​​ ಪ್ರಾಂಶುಪಾಲ ಸಂದೀಪ್​ ಘೋಷ್​​ ನಡುವಳಿಕೆಯೂ ಅನುಮಾನಗಳಿಗೆ ಕಾರಣವಾಗಿತ್ತು. ಘಟನೆ ಬಗ್ಗೆ ವಿವದಾತ್ಮಕ ಹೇಳಿಕೆ ನೀಡಿದ್ದರಿಂದ ವಿರೋಧ ವ್ಯಕ್ತವಾಗಿ, ಅವಮಾನಗಳನ್ನು ಸಹಿಸಲಾಗದೇ ಪ್ರಾಂಶುಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆದರೆ ಇದಾದ ಕೆಲವೇ ಗಂಟೆಗಳಲ್ಲಿ ಸಂದೀಪ್​ ಘೋಷ್​ ಬೇರೆ ದೊಡ್ಡ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾಗಿ ನೇಮಕಗೊಂಡಿದ್ದರು. ಇದು ತೀವ್ರ ಟೀಕೆಗೂ ಕಾರಣವಾಗಿತ್ತು.

ಇದರ ಜತೆಗೆ ಸಂದೀಪ್ ಘೋಷ್ ಮೃತ ದೇಹಗಳನ್ನು ಮಾರಾಟ ಮಾಡಿ ಹಣ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇಲಾಗಿ ವೈದ್ಯೆಯ ಹತ್ಯೆಯಲ್ಲಿ ಇವರ ಪಾತ್ರವಿದೆ ಎಂಬ ಶಂಕೆ ವ್ಯಕ್ತವಾಗಿದೆ. ಇದು ದೇಶಾದ್ಯಂತ ಪ್ರತಿಭಟನೆಗೆ ಕೂಡ ಕಾರಣವಾಗಿತ್ತು. ಆದರೆ, ಮಮತಾ ಬ್ಯಾನರ್ಜಿ ಸರ್ಕಾರ ಹಲವು ಅಚ್ಚರಿಯ ಕ್ರಮಗಳನ್ನು ಕೈಗೊಂಡಿದೆ. ಹತ್ಯೆ ವಿರುದ್ಧ ಆಂದೋಲನ ನಡೆಸಿದ ಹಲವು ವೈದ್ಯರನ್ನು ದೂರದ ಊರುಗಳಿಗೆ ವರ್ಗಾವಣೆ ಮಾಡಿದೆ. ಪ್ರಮುಖವಾಗಿ ಪ್ರಕರಣದ ತನಿಖೆಯನ್ನು ಚುರುಕುಗೊಳಿಸುವಲ್ಲಿಯೂ ವಿಫಲವಾಗಿದೆ. ಸುಪ್ರೀಂಕೋರ್ಟ್ ಕೂಡ ಬಂಗಾಳ ಸರ್ಕಾರವನ್ನು ತೀವ್ರವಾಗಿ ಟೀಕಿಸಿದೆ. ಬಂಗಾಳಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ಹೇಯ ಕೃತ್ಯ ಎಂದು ಸುಪ್ರೀಂ ಕೋರ್ಟ್ ಬಣ್ಣಿಸಿದೆ.

ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವಲ್ಲಿ ಗಂಭೀರ ವಿಳಂಬಕ್ಕೆ ಬಂಗಾಳ ಸರ್ಕಾರವೇ ಕಾರಣ ಎಂದು ಆರೋಪಿಸಲಾಗಿದೆ. ಇನ್ನೊಂದೆಡೆ ಸಾಕ್ಷ್ಯಾಧಾರಗಳನ್ನು ತಿರುಚುವ ಷಡ್ಯಂತ್ರವೂ ನಡೆದಿದೆ. ಅಪರಾಧದ ಸ್ಥಳದಲ್ಲಿ ನವೀಕರಣ ಮಾಡಿರುವುದು, ಸಾಕ್ಷ್ಯವನ್ನು ನಾಶಪಡಿಸುವ ಪ್ರಯತ್ನ ಕಂಡ ನಂತರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ. ಸದ್ಯ ಆರೋಪಿ ಸಂಜಯ್ ರಾಯ್ ಅವರ ಪಾಲಿಗ್ರಾಫ್ ಪರೀಕ್ಷೆ ನಡೆಸಲಾಗಿದ್ದು ಸಂಜಯ್ ರಾಯ್ ಸಂಪೂರ್ಣ ಸುಳ್ಳು ಹೇಳಿರುವ ಬಗ್ಗೆ ವರದಿಯಾಗಿದೆ.

ಇದನ್ನೂ ಓದಿ: ಮಹಿಳೆಯರ ಮೇಲಿನ ದೌರ್ಜನ್ಯ ಮಹಾಪಾಪ, ಅಪರಾಧಿಗಳನ್ನು ಬಿಡಬಾರದು: ಪ್ರಧಾನಿ ಮೋದಿ - Modi On Crimes Against Women

ಇದನ್ನೂ ಓದಿ: ಬಂಗಾಳ ವೈದ್ಯೆ ಕೇಸ್​: ಪ್ರಮುಖ ಆರೋಪಿಗೆ ಸುಳ್ಳು ಪತ್ತೆ ಪರೀಕ್ಷೆ, ಸಂಜಯ್​ ಘೋಷ್​ಗೆ ಸೇರಿದ ಆಸ್ತಿಗಳ ಮೇಲೆ ಸಿಬಿಐ ದಾಳಿ - Kolkata Doctor Murder Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.