ETV Bharat / international

ಅಮೆರಿಕದ ಓಹಿಯೋದಲ್ಲಿ ಭಾರತ ಮೂಲದ ವಿದ್ಯಾರ್ಥಿ ಸಾವು - ಶ್ರೇಯಸ್ ರೆಡ್ಡಿ ಬೆನಿಗೇರಿ

ಅಮೆರಿಕದ ಓಹಿಯೋದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದು ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಘಟನೆಯನ್ನು ದೃಢಪಡಿಸಿದ್ದಾರೆ.

indian-origin-student-dies
ವಿದ್ಯಾರ್ಥಿ ಸಾವು
author img

By PTI

Published : Feb 2, 2024, 9:11 AM IST

ನ್ಯೂಯಾರ್ಕ್(ಅಮೆರಿಕ): ಓಹಿಯೋದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಕಚೇರಿ ಗುರುವಾರ ಖಚಿತಪಡಿಸಿದೆ. ಶ್ರೇಯಸ್ ರೆಡ್ಡಿ ಬೆನಿಗೇರಿ ಮೃತಪಟ್ಟ ವಿದ್ಯಾರ್ಥಿ. ಇವರು ಸಿನ್ಸಿನಾಟಿಯ ಲಿಂಡ್ನರ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು.

ನ್ಯೂಯಾರ್ಕ್ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣದಲ್ಲಿ ಯಾವುದೇ ಕೈವಾಡದ ಶಂಕೆ ಸದ್ಯಕ್ಕಿಲ್ಲ. ಶ್ರೇಯಸ್ ರೆಡ್ಡಿ ಸಾವು ಅತೀವ ದುಃಖ ತಂದಿದೆ ಎಂದು ಕಾನ್ಸುಲೇಟ್​ ಜನರಲ್​ ತನ್ನ ಎಕ್ಸ್​​ ಖಾತೆಯಲ್ಲಿ ಪೋಸ್ಟ್​ ಮಾಡಿದೆ.

ಕಾನ್ಸುಲೇಟ್ ಕಚೇರಿ ಶ್ರೇಯಸ್​ ಕುಟುಂಬವನ್ನು ಸಂಪರ್ಕಿಸಿದ್ದು, ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುತ್ತಿದೆ. ಭಾರತದಲ್ಲಿರುವ ಅವರ ಕುಟುಂಬಕ್ಕೆ ಮಾಹಿತಿ ನೀಡಿಲಾಗಿದೆ. ತಂದೆ ಶೀಘ್ರವೇ ಭಾರತದಿಂದ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚಿಗಷ್ಟೇ ಭಾರತೀಯ ವಿದ್ಯಾರ್ಥಿಯೊಬ್ಬನನ್ನು ಅಮೆರಿಕದಲ್ಲಿ ಮದ್ಯ ವ್ಯಸನಿ ಹತ್ಯೆಗೈದಿದ್ದ.

ಇದನ್ನೂ ಓದಿ: ಅಮೆರಿಕ: ಆಶ್ರಯ ನೀಡಿದ ಭಾರತೀಯ ವಿದ್ಯಾರ್ಥಿ ಹತ್ಯೆಗೈದ ಮಾದಕ ವ್ಯಸನಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.