ಜೆರುಸಲೆಂ: "ರತನ್ ಟಾಟಾ ಅವರು ಭಾರತ ಮತ್ತು ಇಸ್ರೇಲ್ ದೇಶಗಳ ನಡುವಿನ ಸ್ನೇಹ ಬಾಂಧವ್ಯದ ಸರ್ವಶ್ರೇಷ್ಠ ವ್ಯಕ್ತಿ" ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕೊಂಡಾಡಿದ್ದಾರೆ. ಭಾರತದ ಅತ್ಯಂತ ಗೌರವಾನ್ವಿತ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನಕ್ಕೆ ಸಂತಾಪ ಸೂಚಿಸಿ ಶನಿವಾರ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಅವರು ಪೋಸ್ಟ್ ಮಾಡಿದ್ದಾರೆ.
ಟಾಟಾ ಗ್ರೂಪ್‌ನ ಮಾಜಿ ಅಧ್ಯಕ್ಷ ರತನ್ ಟಾಟಾ ಬುಧವಾರ ರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ತಮ್ಮ 86 ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದರು.
To my friend, Prime Minister @narendramodi.
— Benjamin Netanyahu - בנימין נתניהו (@netanyahu) October 12, 2024
I and many in Israel mourn the loss of Ratan Naval Tata, a proud son of India and a champion of the friendship between our two countries. 🇮🇱🇮🇳
Please convey my condolences to Ratan's family.
In sympathy,
Benjamin Netanyahu
ಈ ಕುರಿತು ಇಸ್ರೇಲ್ ಪ್ರಧಾನಿ ನೆತನ್ಯಾಹು ಸಂತಾಪ ಸೂಚಿಸಿ ಮಾಡಿರುವ ಪೋಸ್ಟ್‌ನಲ್ಲಿ, ಉಭಯ ರಾಷ್ಟ್ರಗಳ ಸಂಬಂಧ ವೃದ್ಧಿಗೆ ಟಾಟಾ ನೀಡಿದ ಕೊಡುಗೆಗಳನ್ನು ಉಲ್ಲೇಖಿಸಿದ್ದಾರೆ.
"ನನ್ನ ಗೆಳೆಯ ಹಾಗು ಪ್ರಧಾನಿ ನರೇಂದ್ರ ಮೋದಿ ಅವರೇ, ರತನ್ ಟಾಟಾರ ನಿಧನಕ್ಕೆ ನಾನು ಮತ್ತು ಇಸ್ರೇಲ್ ಜನರು ಶೋಕ ವ್ಯಕ್ತಪಡಿಸುತ್ತಿದ್ದೇವೆ. ಅವರು ಭಾರತದ ಹೆಮ್ಮೆಯ ಪುತ್ರ. ಎರಡೂ ದೇಶಗಳ ಸ್ನೇಹ ಬಾಂಧವ್ಯ ವೃದ್ಧಿಗೆ ಕೆಲಸ ಮಾಡಿದ ಸರ್ವಶ್ರೇಷ್ಠ ವ್ಯಕ್ತಿ" ಎಂದು ತಿಳಿಸಿದ್ದಾರೆ. ಇದೇ ವೇಳೆ, ಟಾಟಾ ಅವರ ಕುಟುಂಬಕ್ಕೆ ತಮ್ಮ ಸಂತಾಪಗಳನ್ನು ತಿಳಿಸುವಂತೆ ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.
"ರತನ್ ಟಾಟಾ ನಮ್ಮ ದೇಶದ ನಿಜವಾದ ಗೆಳೆಯ" ಎಂದು ಕಳೆದ ಗುರುವಾರ ಸಿಂಗಾಪುರ ಪ್ರಧಾನಿ ಲಾರೆನ್ಸ್ ವಾಂಗ್ ಬಣ್ಣಿಸಿದ್ದರು. ಅದೇ ರೀತಿ, ಫ್ರಾನ್ಸ್ ಅಧ್ಯಕ್ಷ ಎಮ್ಯಾನುವೆಲ್ ಮ್ಯಾಕ್ರಾನ್ ಸಂತಾಪ ವ್ಯಕ್ತಪಡಿಸುತ್ತಾ, ರತನ್ ಟಾಟಾ ಅವರು ನಾವೀನ್ಯತೆ ಮತ್ತು ಕೈಗಾರಿಕೋತ್ಪಾದನೆಗೆ ನೀಡಿದ ಕೊಡುಗೆಗಳನ್ನು ಶ್ಲಾಘಿಸುತ್ತಾ, ಭಾರತ-ಫ್ರಾನ್ಸ್ ನಡುವಿನ ಸಂಬಂಧ ಬಲಪಡಿಸುವಲ್ಲಿ ಅವರ ಪಾತ್ರವನ್ನು ಗುರುತಿಸಿ ಸ್ಮರಿಸಿದ್ದಾರೆ.
ಇದನ್ನೂ ಓದಿ: ಲಾವೋಸ್ ಪ್ರಧಾನಿ ಭೇಟಿ ಮಾಡಿದ ಮೋದಿ: ಉಭಯ ರಾಷ್ಟ್ರಗಳ ಬಾಂಧವ್ಯ ವೃದ್ಧಿ ಬಗ್ಗೆ ಮಾತುಕತೆ