ಇಸ್ಲಾಮಾಬಾದ್: ಹವಾಮಾನ ಬದಲಾವಣೆಯ ವಿನಾಶಕಾರಿ ಪರಿಣಾಮ ಎದುರಿಸಲು ಹೆಚ್ಚುವರಿಯಾಗಿ 2 ಮಿಲಿಯನ್ ಡಾಲರ್ ಹಣಕಾಸು ನೆರವು ನೀಡುವಂತೆ ಪಾಕಿಸ್ತಾನ ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್)ಗೆ ಮನವಿ ಮಾಡಿದೆ.
ಈ ತಿಂಗಳಾಂತ್ಯದಲ್ಲಿ ಐಎಂಎಫ್ ಸಭೆ ನಿಗದಿಯಾಗಿದೆ. ಹೀಗಾಗಿ, ಹೆಚ್ಚುವರಿ ನಿಧಿ ನೀಡುವಂತೆ ಪಾಕಿಸ್ತಾನ ಹಣಕಾಸು ಸಚಿವ ಮೊಹಮ್ಮದ್ ಔರಂಗಜೇಬ್ ಮನವಿ ಮಾಡಿದ್ದಾರೆ.
ಅಕ್ಟೋಬರ್ 21ರಿಂದ ಅಕ್ಟೋಬರ್ 26ರವರೆಗೆ ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿ ಐಎಂಎಫ್ ಮತ್ತು ವಿಶ್ವಬ್ಯಾಂಕ್ ಗ್ರೂಪ್ನ ವಾರ್ಷಿಕ ಸಭೆ ಆಯೋಜನೆಯಾಗಿದೆ.
ಹೆಚ್ಚುವರಿ ಸಾಲ ಮರುಪಾವತಿಸುವ ಪಾಕಿಸ್ತಾನದ ಸಾಮರ್ಥ್ಯದ ಬಗ್ಗೆ ಈಗಾಗಲೇ ಐಎಂಎಫ್ ಕಳವಳ ವ್ಯಕ್ತಪಡಿಸಿದೆ.
ಇದನ್ನೂ ಓದಿ: ಹಲವು ಇಸ್ರೇಲ್ ಸೈನಿಕರನ್ನು ಹತ್ಯೆ ಮಾಡಿದ್ದೇವೆ: ಹಮಾಸ್ ಘೋಷಣೆ