ನ್ಯೂಯಾರ್ಕ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಪ್ರಮುಖ ಟೆಕ್ ಕಂಪನಿಗಳ ಸಿಇಒಗಳೊಂದಿಗೆ ಭಾನುವಾರ 'ಫಲಪ್ರದ' ಮಾತುಕತೆ ನಡೆಸಿದರು. ಭಾರತದ ಆರ್ಥಿಕ ಬೆಳವಣಿಗೆ ಮತ್ತು ಹಲವು ವಲಯಗಳಲ್ಲಿ ದ್ವಿಪಕ್ಷೀಯ ಸಹಕಾರದ ಉಪಕ್ರಮಗಳ ಕುರಿತು ಈ ವೇಳೆ ಅವರು ಚರ್ಚಿಸಿದ್ದಾರೆ.
ಲೊಟ್ಟೆ ನ್ಯೂಯಾರ್ಕ್ ಪ್ಯಾಲೇಸ್ ಹೋಟೆಲ್ನಲ್ಲಿ ಟೆಕ್ ಸಿಇಒಗಳೊಂದಿಗೆ ಮೋದಿ ದುಂಡುಮೇಜಿನ ಸಭೆ ನಡೆಸಿದರು. ಕೃತಕ ಬುದ್ಧಿಮತ್ತೆ (ಎಐ), ಕ್ವಾಂಟಮ್ ಕಂಪ್ಯೂಟಿಂಗ್ ಮತ್ತು ಸೆಮಿಕಂಡಕ್ಟರ್‌ಗಳಂತಹ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಮುಖ ಟೆಕ್ ಕಂಪನಿಗಳ ಮುಖ್ಯಸ್ಥರು ಸಭೆಯಲ್ಲಿದ್ದರು.
Had a fruitful roundtable with tech CEOs in New York, discussing aspects relating to technology, innovation and more. Also highlighted the strides made by India in this field. I am glad to see immense optimism towards India. pic.twitter.com/qW3sZ4fv3t
— Narendra Modi (@narendramodi) September 23, 2024
ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಈ ಕುರಿತು ಮಾಹಿತಿ ನೀಡಿದ ಪ್ರಧಾನಿ ಮೋದಿ, 'ನ್ಯೂಯಾರ್ಕ್ನಲ್ಲಿ ಟೆಕ್ ಸಿಇಒಗಳೊಂದಿಗೆ ದುಂಡುಮೇಜಿನ ಫಲಪ್ರಭ ಸಭೆ ನಡೆಸಲಾಯಿತು. ತಂತ್ರಜ್ಞಾನ, ಆವಿಷ್ಕಾರ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸಿದೆವು. ಈಗಾಗಲೇ ಈ ಕ್ಷೇತ್ರದಲ್ಲಿ ಭಾರತ ದಾಪುಗಾಲಿಟ್ಟಿದೆ' ಎಂದು ತಿಳಿಸಿದ್ದಾರೆ.
ಮೆಸಚ್ಯೂಸೆಟ್ ಇನ್ಸುಟಿಟ್ಯೂಟ್ ಆಫ್ ಟೆಕ್ನಾಲಾಜಿ (ಎಂಐಟಿ) ಸ್ಕೂಲ್ ಆಫ್ ಇಂಜಿನಿಯರಿಂಗ್ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.
ಜಾಗತಿಕ ನಾಯಕರನ್ನು ಭೇಟಿ ಮಾಡಿದ ಮೋದಿ: ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ, ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಮತ್ತು ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಸೇರಿದಂತೆ ಹಲವು ಜಾಗತಿಕ ನಾಯರೊಂದಿಗೆ ಪ್ರತ್ಯೇಕ ಸಭೆ ನಡೆಸಿದರು.
Met President Mahmoud Abbas in New York. Reiterated India’s support for early restoration of peace and stability in the region. Exchanged views of further strengthening long standing friendship with the people of Palestine. pic.twitter.com/LnmAm7dDax
— Narendra Modi (@narendramodi) September 23, 2024
ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಜೊತೆ ಮಾತುಕತೆ ನಡೆಸಿದ ಮೋದಿ, ಗಾಜಾದ ಮಾನವೀಯ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿ, ಭಾರತದ ಬೆಂಬಲದ ಕುರಿತು ಪುನರುಚ್ಚರಿಸಿದ್ದಾರೆ.
ನೇಪಾಳ ಪ್ರಧಾನಿ ಕೆ.ಪಿ.ಒಲಿ ಭೇಟಿ ಕುರಿತು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಮೋದಿ, 'ಉಭಯ ದೇಶಗಳ ಸ್ನೇಹ ಸಂಬಂಧವನ್ನು ವೃದ್ಧಿಸಲಿದೆ. ಇಂಧನ, ತಂತ್ರಜ್ಞಾನ ಮತ್ತು ವ್ಯಾಪಾರದಂತಹ ಹಲವು ವಿಚಾರಗಳ ಕುರಿತು ಮಾತುಕತೆ ನಡೆಯಿತು' ಎಂದು ತಿಳಿಸಿದ್ದಾರೆ.
ಕುವೈತ್ ರಾಜ ಶೇಖ್ ಸಬಾಹ್ ಖಲೀದ್ ಅಲ್ ಸಬಾಹ್ ಅವರನ್ನು ಭೇಟಿ ಮಾಡಿದ ಮೋದಿ, 'ಭಾರತ-ಕುವೈತ್ ಬಾಂಧವ್ಯ ಹೊಸ ವೇಗ ಪಡೆಯುತ್ತಿದೆ. ದ್ವಿಪಕ್ಷೀಯ, ಐತಿಹಾಸಿಕ ಮತ್ತು ಜನರ ಸಂಪರ್ಕಗಳನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚಿಸಲಾಯಿತು' ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ವೇಳೆ 297 ಪ್ರಾಚೀನ ಕಲಾಕೃತಿಗಳನ್ನು ಭಾರತಕ್ಕೆ ಮರಳಿಸಿದ ಅಮೆರಿಕ