ETV Bharat / international

ಭಾರತದಲ್ಲಿನ ಹೂಡಿಕೆ ಅವಕಾಶಗಳನ್ನು ಬಳಸಿಕೊಳ್ಳುವಂತೆ ಆಸ್ಟ್ರಿಯಾ ಉದ್ಯಮಿಗಳಿಗೆ ಪ್ರಧಾನಿ ಮೋದಿ ಆಹ್ವಾನ - PM Modi Invites Austrian Businesses

author img

By ETV Bharat Karnataka Team

Published : Jul 10, 2024, 8:50 PM IST

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಆಸ್ಟ್ರಿಯಾದ ಚಾನ್ಸೆಲರ್ ಕಾರ್ಲ್ ನೆಹಮ್ಮರ್ ಉಭಯ ರಾಷ್ಟ್ರಗಳ ವ್ಯಾಪಾರೋದ್ಯಮಿಗಳೊಂದಿಗೆ ಮಾತನಾಡಿದರು. ಮೂಲಸೌಕರ್ಯ, ಆಟೋಮೊಬೈಲ್, ಇಂಧನ, ಇಂಜಿನಿಯರಿಂಗ್ ಮತ್ತು ಸ್ಟಾರ್ಟ್-ಅಪ್‌ಗಳು ಸೇರಿದಂತೆ ವಿವಿಧ ವಲಯಗಳ ಪ್ರಮುಖ ಆಸ್ಟ್ರಿಯನ್ ಮತ್ತು ಭಾರತೀಯ CEO ಗಳ ಗುಂಪನ್ನು ಉದ್ದೇಶಿಸಿ ಊಬಯ ನಾಯಕರು ಜಂಟಿಯಾಗಿ ಮಾತನಾಡಿದರು.

pm-modi-invites-austrian-businesses-to-utilise-investment-opportunities-in-india
ಭಾರತದಲ್ಲಿನ ಹೂಡಿಕೆ ಅವಕಾಶಗಳನ್ನು ಬಳಸಿಕೊಳ್ಳುವಂತೆ ಆಸ್ಟ್ರಿಯಾ ಉದ್ಯಮಿಗಳಿಗೆ ಪ್ರಧಾನಿ ಮೋದಿ ಆಹ್ವಾನ (ANI Photo)

ನವದೆಹಲಿ: ಮುಂದಿನ ಕೆಲವು ವರ್ಷಗಳಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆ ಆಗಲಿದೆ. ಆ ನಿಟ್ಟಿನಲ್ಲಿ ನಾವು ಸಾಗುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬುಧವಾರ ಆಸ್ಟ್ರಿಯಾದ ವ್ಯಾಪಾರ ಒಕ್ಕೂಟದೊಂದಿಗೆ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರಧಾನಮಂತ್ರಿಗಳು ಆಸ್ಟ್ರಿಯಾಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ. ಮತ್ತು ಇದರೊಂದಿಗೆ ಅವರು 41 ವರ್ಷಗಳ ನಂತರ ಆಸ್ಟ್ರಿಯಾಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ನಾಯಕರು ಎಂಬ ಹೆಗ್ಗಳಿಕೆ ಪ್ರಧಾನಿ ಮೋದಿ ಅವರಿಗೆ ಸಂದಿದೆ. ಭಾರತದ ಪ್ರಧಾನಿಯೊಬ್ಬರು ಆಸ್ಟ್ರಿಯಾಕ್ಕೆ ಬೇಟಿ ನೀಡಿ 40 ವರ್ಷಗಳೇ ಕಳೆದಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಆಸ್ಟ್ರಿಯಾದ ಚಾನ್ಸೆಲರ್ ಕಾರ್ಲ್ ನೆಹಮ್ಮರ್ ಅವರು ಮೂಲಸೌಕರ್ಯ, ಆಟೋಮೊಬೈಲ್, ಇಂಧನ, ಇಂಜಿನಿಯರಿಂಗ್ ಮತ್ತು ಸ್ಟಾರ್ಟ್ ಅಪ್‌ಗಳು ಸೇರಿದಂತೆ ವಿವಿಧ ವಲಯಗಳ ಪ್ರಮುಖ ಆಸ್ಟ್ರಿಯನ್ ಮತ್ತು ಭಾರತೀಯ ಸಿಇಒಗಳ ಗುಂಪನ್ನು ಉದ್ದೇಶಿಸಿ ಮಾತನಾಡಿದರು.

ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವಲ್ಲಿ ಮತ್ತು ಭಾರತ ಮತ್ತು ಆಸ್ಟ್ರಿಯಾ ನಡುವೆ ಆರ್ಥಿಕ ಸಹಕಾರವನ್ನು ಉತ್ತೇಜಿಸುವಲ್ಲಿ ಉದ್ಯಮದ ಪ್ರಮುಖರು ವಹಿಸಿದ ಪಾತ್ರವನ್ನು ಇಬ್ಬರೂ ನಾಯಕರು ಸ್ಮರಿಸಿದರು. ಉಭಯ ದೇಶಗಳ ನಡುವಿನ ವ್ಯಾಪಾರ ಮತ್ತು ಹೂಡಿಕೆಯು ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿದೆ ಎಂಬ ವಿಚಾರವನ್ನು ಇಬ್ಬರೂ ನಾಯಕರು ಪ್ರಸ್ತಾಪಿಸಿದರು. ಭಾರತ - ಆಸ್ಟ್ರಿಯಾ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಸಹಮತ ಸೂಚಿಸಿದರು.

ಕಳೆದ ಹತ್ತು ವರ್ಷಗಳಲ್ಲಿ ಭಾರತವು ಪರಿವರ್ತನಾಶೀಲ ಪ್ರಗತಿಯನ್ನು ಸಾಧಿಸಿದೆ ಮತ್ತು ರಾಜಕೀಯ ಸ್ಥಿರತೆ, ನೀತಿ ಭವಿಷ್ಯ ಮತ್ತು ಅದರ ಸುಧಾರಣಾ-ಆಧಾರಿತ ಆರ್ಥಿಕ ಕಾರ್ಯಸೂಚಿಯ ಸಾಮರ್ಥ್ಯಗಳನ್ನು ಪರಿಗಣಿಸಿ ಅದೇ ಹಾದಿಯಲ್ಲಿ ಮುಂದುವರಿಯುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. 'ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್' ಅನ್ನು ಸುಧಾರಿಸಲು ತಮ್ಮ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಮೋದಿ ಸಭೆಯಲ್ಲಿ ವಿವರಿಸಿದರು.

ಇದಲ್ಲದೇ, ಭಾರತೀಯ ಆರ್ಥಿಕ ಬೆಳವಣಿಗೆ ಮತ್ತು ರೂಪಾಂತರದ ಬಗ್ಗೆ ಮಾತನಾಡಿದ ಪ್ರಧಾನಿಗಳು, ಸ್ಟಾರ್ಟ್-ಅಪ್‌ಗಳ ಕ್ಷೇತ್ರದಲ್ಲಿ, ಮುಂದಿನ ಪೀಳಿಗೆಯ ಮೂಲಸೌಕರ್ಯಗಳ ಸೃಷ್ಟಿಯಲ್ಲಿ ಭಾರತದ ಯಶಸ್ಸು ಮತ್ತು ಹಸಿರು ಕಾರ್ಯಸೂಚಿಯಲ್ಲಿ ಮುನ್ನಡೆಯುವ ಬದ್ಧತೆಯನ್ನು ಒತ್ತಿ ಹೇಳಿದರು.

ಭಾರತ ಮತ್ತು ಆಸ್ಟ್ರಿಯಾ ನಡುವೆ ಸ್ಥಾಪಿಸಲಾದ ಸ್ಟಾರ್ಟ್ ಅಪ್ ಸೇತುವೆಯು ಗಣನೀಯ ಫಲಿತಾಂಶಗಳನ್ನು ನೀಡುತ್ತದೆ ಎಂಬುದನ್ನು ಪ್ರಧಾನಿ ಉಲ್ಲೇಖಿಸಿದರು. ಈ ನಿಟ್ಟಿನಲ್ಲಿ ಉಭಯ ದೇಶಗಳು ಒಗ್ಗೂಡಿ ಜಂಟಿ ಹ್ಯಾಕಥಾನ್ ಆಯೋಜಿಸಬೇಕು ಎಂದು ಸಲಹೆ ನೀಡಿದರು. ಅವರು ದೇಶದಲ್ಲಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯದ ಯಶಸ್ಸು ಮತ್ತು ಸಂಪರ್ಕ ಮತ್ತು ಲಾಜಿಸ್ಟಿಕ್ಸ್ ಅನ್ನು ಸುಧಾರಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆಯೂ ಅವರು ಮಾತನಾಡಿದರು.

ಸೆಮಿಕಂಡಕ್ಟರ್‌ಗಳು, ವೈದ್ಯಕೀಯ ಸಾಧನಗಳು ಮತ್ತು ಸೋಲಾರ್ ಪಿವಿ ಸೆಲ್‌ಗಳ ಕ್ಷೇತ್ರಗಳಲ್ಲಿ ಜಾಗತಿಕ ಉತ್ಪಾದನಾ ಕಂಪನಿಗಳನ್ನು ಆಕರ್ಷಿಸಲು ಭಾರತದ ಉತ್ಪಾದನಾ ಲಿಂಕ್ಡ್ ಪ್ರೋತ್ಸಾಹ ಯೋಜನೆಯ ಕುರಿತು ಪ್ರಧಾನಮಂತ್ರಿ ಮಾತನಾಡಿದರು. ಭಾರತದಲ್ಲಿನ ಹೂಡಿಕೆಯ ಅವಕಾಶಗಳನ್ನು ಬಳಸಿಕೊಳ್ಳಲು ಮತ್ತು ಭಾರತದ ನಾಕ್ಷತ್ರಿಕ ಬೆಳವಣಿಗೆಯ ಕಥೆಯ ಭಾಗವಾಗಲು ಅವರು ಆಸ್ಟ್ರಿಯನ್ ರನ್ನು ಅವರು ಆಹ್ವಾನಿಸಿದರು.

ಇದನ್ನು ಓದಿ:' ಮದ್ದು, ಗುಂಡುಗಳಿಂದ ಶಾಂತಿ ಸಾಧ್ಯವಿಲ್ಲ': ಉಕ್ರೇನ್​ ಯುದ್ಧದ ಬಗ್ಗೆ ಪುಟಿನ್​ಗೆ ಮೋದಿ ಸಂದೇಶ - Modi On Russia Ukraine Conflict

ETV Bharat Logo

Copyright © 2024 Ushodaya Enterprises Pvt. Ltd., All Rights Reserved.