ETV Bharat / international

ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರ: ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶ ತೊರೆದ ಶೇಖ್​ ಹಸೀನಾ; ಸೇನೆಯ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ - PM Sheikh Hasina Resigned

author img

By ETV Bharat Karnataka Team

Published : Aug 5, 2024, 4:01 PM IST

Updated : Aug 5, 2024, 4:33 PM IST

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಮೀಸಲಾತಿ ವಿರೋಧಿ ಹೋರಾಟಕ್ಕೆ ಮಣಿದು ಪ್ರಧಾನಿ ಶೇಖ್​ ಹಸೀನಾ ರಾಜೀನಾಮೆ ನೀಡಿದ್ದು, ದೇಶ ತೊರೆದಿದ್ದಾರೆ.

ಬಾಂಗ್ಲಾದೇಶ ಪ್ರಧಾನಿ ಶೇಖ್​ ಹಸೀನಾ ರಾಜೀನಾಮೆ
ಬಾಂಗ್ಲಾದೇಶ ಪ್ರಧಾನಿ ಶೇಖ್​ ಹಸೀನಾ ರಾಜೀನಾಮೆ (ETV Bharat)

ಢಾಕಾ(ಬಾಂಗ್ಲಾದೇಶ): ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಮೀಸಲಾತಿ ವಿರೋಧಿ ಹೋರಾಟಕ್ಕೆ ಪ್ರಧಾನಿ ಶೇಖ್​ ಹಸೀನಾ ತಲೆದಂಡವಾಗಿದೆ. ಇಂದು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿರುವ ಅವರು ದೇಶ ತೊರೆದಿದ್ದಾರೆ. ಸೇನೆಯ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆ ಮಾಡಲಾಗುವುದು ಎಂದು ಸೇನಾ ಮುಖ್ಯಸ್ಥ ಜನರಲ್ ವಕಾರ್ ಉಜ್ ಜಮಾನ್ ಹೇಳಿದ್ದಾರೆ.

ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, "ರಾಷ್ಟ್ರವ್ಯಾಪಿ ನಡೆಯುತ್ತಿರುವ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸಿ. ಸರ್ಕಾರವನ್ನು ವಜಾ ಮಾಡಲಾಗಿದೆ. ಸೇನಾಡಳಿತ ಇರಲಿದೆ. ಇಂದು ರಾತ್ರಿಯೊಳಗೆ ಎಲ್ಲ ಪ್ರತಿಭಟನಾಕಾರರು ಹೋರಾಟ ಹಿಂಪಡೆದು ವಾಪಸ್​ ತೆರಳಬೇಕು" ಎಂದು ಮನವಿ ಮಾಡಿದ್ದಾರೆ.

ಸೇನೆಯ ಮೇಲೆ ನಂಬಿಕೆ ಇಡಿ: "ದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಿ. ಪ್ರತಿಭಟನಾಕಾರರು ಸೇನೆಯ ಮೇಲೆ ನಂಬಿಕೆ ಇಡಿ. ಸಂಘರ್ಷ ಮತ್ತು ಅದರಿಂದಾಗುವ ಹಾನಿ ತಪ್ಪಿಸಿ. ಆಕ್ಷೇಪಗಳ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳೋಣ. ದೇಶದ ಒಳಿತಿಗಾಗಿ ಸಹಾಯ ಮಾಡಿ. ಪ್ರತಿಭಟನಾನಿರತ ವಿದ್ಯಾರ್ಥಿಗಳು ಶಾಂತಿ ಕಾಪಾಡಬೇಕು. ದೇಶದಾದ್ಯಂತ ಕರ್ಫ್ಯೂ ವಿಧಿಸುವ ಅಥವಾ ತುರ್ತು ಪರಿಸ್ಥಿತಿ ಘೋಷಿಸುವ ಅಗತ್ಯವಿಲ್ಲ" ಎಂದರು.

ಬಾಂಗ್ಲಾ ಸಂಘರ್ಷಕ್ಕೇನು ಕಾರಣ?: ಬಾಂಗ್ಲಾದೇಶ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ನಿವೃತ್ತ ಯೋಧರ ಸಂಬಂಧಿಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 30ರಷ್ಟು ಮೀಸಲಿಡುವ ವಿವಾದಾತ್ಮಕ ಕಾನೂನನ್ನು ಹಿಂಪಡೆಯಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸುತ್ತಿದ್ದಾರೆ. ಎರಡು ತಿಂಗಳ ಹಿಂದೆ ನಡೆದ ಹೋರಾಟದಲ್ಲಿ ಪೊಲೀಸರು ಮತ್ತು ವಿದ್ಯಾರ್ಥಿ ಪ್ರತಿಭಟನಾಕಾರರ ನಡುವಿನ ಹಿಂಸಾತ್ಮಕ ಘರ್ಷಣೆಯಲ್ಲಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಇದಾದ ಬಳಿಕ ಘರ್ಷಣೆಗಳು ಭುಗಿಲೆದ್ದಿವೆ. ಅಂದಿನಿಂದ, 11,000ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

ಭಾರತ-ಬಾಂಗ್ಲಾ ಗಡಿಯಲ್ಲಿ ಕಟ್ಟೆಚ್ಚರ: ಬಾಂಗ್ಲಾದೇಶದಲ್ಲಿ ಶಾಂತಿ ಮತ್ತು ಭದ್ರತೆ ಹದಗೆಟ್ಟಿರುವ ಕಾರಣ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್​ಎಫ್​) ಹೈ ಅಲರ್ಟ್ ಘೋಷಿಸಿದೆ. ಭಾರತ-ಬಾಂಗ್ಲಾದೇಶ ಗಡಿಯ ಭದ್ರತೆಯನ್ನು ಪರಿಶೀಲಿಸಲು ಬಿಎಸ್‌ಎಫ್ ಡಿಜಿ ದಲ್ಜಿತ್ ಸಿಂಗ್ ಚೌಧರಿ ಮತ್ತು ಇತರ ಹಿರಿಯ ಅಧಿಕಾರಿಗಳು ಕೋಲ್ಕತ್ತಾ ತಲುಪಿದ್ದಾರೆ. ಬಾಂಗ್ಲಾದೇಶದೊಂದಿಗೆ ಭಾರತವು 4,096 ಕಿ.ಮೀ ಗಡಿಯನ್ನು ಹಂಚಿಕೊಂಡಿದೆ.

15 ವರ್ಷಗಳ ಶೇಖ್ ಹಸೀನಾ ಆಡಳಿತ ಅಂತ್ಯ: ಶೇಖ್​ ಹಸೀನಾ ಅವರ ರಾಜೀನಾಮೆಯಿಂದಾಗಿ ಅವಾಮಿ ಲೀಗ್​​ನ 15 ವರ್ಷಗಳ ಆಡಳಿತ ಅಂತ್ಯವಾಗಿದೆ. ಕಳೆದ ಮೂರು ಚುನಾವಣೆಗಳಲ್ಲಿ ಶೇಖ್​ ಹಸೀನಾ ಅವರ ನೇತೃತ್ವದ ಅವಾಮಿ ಲೀಗ್​ ಸತತವಾಗಿ ಅಧಿಕಾರಕ್ಕೆ ಬಂದಿದೆ. ಈ ವರ್ಷ ನಡೆದ ಚುನಾವಣೆಯು ಭಾರೀ ವಿವಾದಕ್ಕೂ ಕಾರಣವಾಗಿತ್ತು. ಆದಾಗ್ಯೂ ಅವಾಮಿ ಲೀಗ್​ ಭಾರೀ ಅಂತರದಲ್ಲಿ ಜಯ ಸಾಧಿಸಿತ್ತು.

ಶೇಖ್ ಹಸೀನಾಗೆ ಭಾರತ ಆಶ್ರಯ?: ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿರುವ ಶೇಖ್​ ಹಸೀನಾ ಅವರು ರಾಜಧಾನಿ ಢಾಕಾದಿಂದ ಪಲಾಯನವಾಗಿ ಭಾರತದ ತ್ರಿಪುರಾಕ್ಕೆ ಬಂದಿದ್ದಾರೆ ಎಂದು ವರದಿಯಾಗಿದೆ. ಈ ಮೊದಲು ಅವರು ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾರೆ ಎಂದು ಹೇಳಲಾಗಿತ್ತು. ಬಾಂಗ್ಲಾದೇಶದಲ್ಲಿ ಭಾರೀ ವಿರೋಧ ಎದುರಿಸುತ್ತಿರುವ ಅವರು ಭಾರತದಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ವ್ಯಾಪಕ ಹಿಂಸಾಚಾರ: ಅಜ್ಞಾತಸ್ಥಳಕ್ಕೆ ತೆರಳಿದ ಪ್ರಧಾನಿ ಶೇಖ್​ ಹಸೀನಾ - Bangladesh Protest

Last Updated : Aug 5, 2024, 4:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.