ಲಾಸ್ ಏಂಜಲೀಸ್(ಅಮೆರಿಕ): ಕೊಲಂಬಿಯಾ ವಿಶ್ವವಿದ್ಯಾನಿಲಯದಲ್ಲಿನ ಪ್ರತಿಭಟನಾಕಾರರನ್ನು ತೆರವುಗೊಳಿಸುವ ಕಾರ್ಯದಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರು ಹ್ಯಾಮಿಲ್ಟನ್ ಹಾಲ್ ಒಳಗೆ ತಮ್ಮ ಬಂದೂಕಿನಿಂದ ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ಅಟಾರ್ನಿ ಆಲ್ವಿನ್ ಬ್ರಾಗ್ ಅವರ ಕಚೇರಿಯ ವಕ್ತಾರರು ಗುರುವಾರ ತಿಳಿಸಿದ್ದಾರೆ.
ಇಸ್ರೇಲ್ - ಹಮಾಸ್ ಯುದ್ಧದಿಂದ ಗಾಜಾದಲ್ಲಿ ನೂರಾರು ಮಂದಿ ಪ್ರಾಣ ಕಳೆದುಕೊಳ್ಳುವುದನ್ನು ವಿರೋಧಿಸಿ ಅಮೆರಿಕದ ಹಲವು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ. ಈ ಪ್ರತಿಭಟನೆಯನ್ನು ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಿಂದ ಯಾರಿಗೂ ಗಾಯಗಳಾಗಿಲ್ಲ. ಈ ಸಂದರ್ಭ ಇತರ ಅಧಿಕಾರಿಗಳು ಇದ್ದರು, ಆದರೆ, ಹತ್ತಿರದಲ್ಲಿ ಯಾವುದೇ ವಿದ್ಯಾರ್ಥಿಗಳು ಇರಲಿಲ್ಲ. ಬ್ರಾಗ್ ಅವರ ಕಚೇರಿ ಘಟನೆಯನ್ನು ಪರಿಶೀಲಿಸುತ್ತಿದೆ ಎಂದು ವಕ್ತಾರರು ಹೇಳಿದ್ದಾರೆ.
ಇನ್ನು ಮಂಗಳವಾರ ಈ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಅಂದು ಕೊಲಂಬಿಯಾದಲ್ಲಿ 100 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಇದುವರೆಗೆ ಪ್ಯಾಲೇಸ್ಟೈ ನಿಯನ್ ಪರ ಪ್ರತಿಭಟನೆಯಲ್ಲಿ ಅಮೆರಿಕದ ಕಾಲೇಜು ಕ್ಯಾಂಪಸ್‌ಗಳಲ್ಲಿ 2,000 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ಲೆಕ್ಕಾಚಾರ ನೀಡಿದೆ.
ಏಪ್ರಿಲ್ 17 ರಂದು ಟೆಂಟ್ ಹಾಕಿ ಪ್ರತಿಭಟನೆ ಮಾಡುತ್ತಿದ್ದ ಪ್ರತಿಭಟನಕಾರರನ್ನು ಏಪ್ರಿಲ್ 18 ರಂದು ಬಂಧಿಸಿ ಅವರ ಟೆಂಟ್ಗಳನ್ನು ತೆರವುಗೊಳಿಸಿದ ಮೇಲೆ ಕೊಲಂಬಿಯಾದ ಪ್ರತಿಭಟನಕಾರರು ಹ್ಯಾಮಿಲ್ಟನ್ ಹಾಲ್ನ್ನು ವಶಪಡಿಸಿಕೊಂಡರು. ಕಳೆದ 24 ಗಂಟೆಗಳಲ್ಲಿ, ಲಾಸ್ ಏಂಜಲೀಸ್‌ನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದಲ್ಲಿ ಪ್ರತಿಭಟನಕಾರರು ಹೆಚ್ಚು ಪ್ರತಿಭಟನೆ ನಡೆಸುತ್ತಿದ್ದಾರೆ.
ಏಪ್ರಿಲ್ 17 ರಂದು ಕೊಲಂಬಿಯಾ ವಿಶ್ವವಿದ್ಯಾನಿಲಯದಲ್ಲಿ ಪ್ರತಿಭಟನೆಗಳು ಪ್ರಾರಂಭವಾದವು. ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಇಸ್ರೇಲ್-ಹಮಾಸ್ ಯುದ್ಧವನ್ನು ಕೊನೆಗೊಳಿಸಬೇಕೆಂದು ಕರೆ ನೀಡಿದ್ದಾರೆ. ಗಾಜಾದಲ್ಲಿ ಇಸ್ರೇಲ್‌ನ ಮಿಲಿಟರಿ ಪ್ರಯತ್ನಗಳನ್ನು ಬೆಂಬಲಿಸುವ ಸಂಸ್ಥೆಗಳು, ವಿಶ್ವವಿದ್ಯಾಲಯಗಳನ್ನು ದೂರವಿಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳಲ್ಲದೇ ಹೊರಗಿನವರು ಸೇರಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆಂದು ವಿಶ್ವವಿದ್ಯಾಲಯಗಳು ತಿಳಿಸಿವೆ.
ಈಗಾಗಲೇ ಕೊಲಂಬಿಯಾ ವಿಶ್ವವಿದ್ಯಾನಿಲಯದ ವಕ್ತಾರ ಬೆನ್ ಚಾಂಗ್ '' ಕಾಲೇಜು ಕ್ಯಾಂಪಸ್ನಲ್ಲಿ ನಿಯಮ ಉಲ್ಲಂಘಿಸುವ ವಿದ್ಯಾರ್ಥಿ ಪ್ರತಿಭಟನಾಕಾರರನ್ನು ಅಮಾನತುಗೊಳಿಸಲು ವಿಶ್ವವಿದ್ಯಾನಿಲಯವು ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ. ಅಮೆರಿಕದಲ್ಲಿ ಕೆಲ ದಿನಗಳಿಂದ ಪ್ರತಿಭಟನೆಗಳ ಕಾವು ಜೋರಾಗುತ್ತಿದೆ. ಇದೇ ವಿಚಾರವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ನೌಕರರನ್ನು ಗೂಗಲ್ ಸಂಸ್ಥೆ ಕೆಲಸದಿಂದ ವಜಾ ಮಾಡಿತ್ತು. ಈ ಬಗ್ಗೆ ಅಲ್ಲಿನ ನೌಕರರು ಕಂಪನಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ಶಾಶ್ವತ ಕದನವಿರಾಮಕ್ಕೆ ಬೇಡಿಕೆ ಇಟ್ಟ ಹಮಾಸ್: ಶಾಂತಿ ಮಾತುಕತೆಗೆ ಮತ್ತೆ ಅಡ್ಡಿ - israel hamas war