ETV Bharat / international

ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ವದಂತಿ: ಪಾಕಿಸ್ತಾನದಾದ್ಯಂತ ಭಾರಿ ಹಿಂಸಾತ್ಮಕ ಪ್ರತಿಭಟನೆ - PROTESTS IN PAKISTAN

ಕಾಲೇಜು ಯುವತಿಯೋರ್ವಳ ಮೇಲೆ ಅತ್ಯಾಚಾರ ನಡೆದಿದೆ ಎಂಬ ವದಂತಿಯ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.

ಪಾಕಿಸ್ತಾನದಾದ್ಯಂತ ಭಾರಿ ಹಿಂಸಾತ್ಮಕ ಪ್ರತಿಭಟನೆ
ಪಾಕಿಸ್ತಾನದಾದ್ಯಂತ ಭಾರಿ ಹಿಂಸಾತ್ಮಕ ಪ್ರತಿಭಟನೆ (IANS)
author img

By ETV Bharat Karnataka Team

Published : Oct 17, 2024, 7:46 PM IST

ಇಸ್ಲಾಮಾಬಾದ್(ಪಾಕಿಸ್ತಾನ): ಲಾಹೋರ್​ನಲ್ಲಿ ಖಾಸಗಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದಿದೆ ಎಂಬ ವರದಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಾದ್ಯಂತ ವಿದ್ಯಾರ್ಥಿಗಳು ಭಾರಿ ಪ್ರಮಾಣದ ಹಿಂಸಾತ್ಮಕ ಪ್ರತಿಭಟನೆ ನಡೆಸುತ್ತಿದ್ದಾರೆ.

ಲಾಹೋರ್ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸೆಕ್ಯುರಿಟಿ ಗಾರ್ಡ್ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ರಾವಲ್ಪಿಂಡಿಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಗುರುವಾರ ಬೀದಿಗಿಳಿದು ಮುಖ್ಯ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳನ್ನು ಚದುರಿಸಲು ಅಶ್ರುವಾಯು ಬಳಸಿದ ಪೊಲೀಸರು ಕನಿಷ್ಠ 150 ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಪಂಜಾಬ್ ಪ್ರಾಂತ್ಯದ ವಿವಿಧ ಭಾಗಗಳಲ್ಲಿ ದೊಡ್ಡ ಮಟ್ಟದ ಪ್ರತಿಭಟನೆಗಳು ಮತ್ತು ರ್ಯಾಲಿಗಳು ನಡೆಯುತ್ತಿದ್ದರೂ, ಪಂಜಾಬ್ ಮುಖ್ಯಮಂತ್ರಿ ಮರಿಯಮ್ ನವಾಜ್ ಷರೀಫ್ ನೇತೃತ್ವದ ಪ್ರಾಂತೀಯ ಸರ್ಕಾರವು ಇಡೀ ಘಟನೆಯನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂದು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ.

ಇತ್ತೀಚಿನ ವರದಿಗಳ ಪ್ರಕಾರ, ಕಾಲೇಜಿನ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರೊಂದಿಗಿನ ಘರ್ಷಣೆಯಲ್ಲಿ ಕನಿಷ್ಠ ಒಬ್ಬ ವಿದ್ಯಾರ್ಥಿ ಪ್ರತಿಭಟನಾಕಾರ ಪ್ರಾಣ ಕಳೆದುಕೊಂಡಿದ್ದಾನೆ ಮತ್ತು 28ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

"ಘಟನೆಯನ್ನು ಮರೆಮಾಚಲು ಕಾಲೇಜು ಆಡಳಿತ ಮಂಡಳಿ ಉದ್ದೇಶಪೂರ್ವಕವಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಅಳಿಸಿದೆ. ಪ್ರಾಂತೀಯ ಸರ್ಕಾರವು ಇಡೀ ಘಟನೆಯನ್ನು ನಕಲಿ ಎಂದು ಬಿಂಬಿಸಲು ಪ್ರಯತ್ನಿಸುತ್ತಿದೆ. ಇದನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ವಿದ್ಯಾರ್ಥಿನಿಯರ ಗೌರವ ಮತ್ತು ಘನತೆ ನಮ್ಮೆಲ್ಲರಿಗೂ ಸರ್ವೋಚ್ಚವಾಗಿದೆ ಮತ್ತು ಅಂತಹ ಘಟನೆಗಳನ್ನು ಮರೆಮಾಚಲು ಪ್ರಯತ್ನಿಸುವ ಮತ್ತು ಅವುಗಳನ್ನು ನಕಲಿ ಎಂದು ಕರೆಯುವವರ ವಿರುದ್ಧ ಪ್ರತಿಭಟನೆಗಳು ಮುಂದುವರಿಯಲಿವೆ" ಎಂದು ರಾವಲ್ಪಿಂಡಿಯ ಪ್ರತಿಭಟನಾಕಾರರೊಬ್ಬರು ಹೇಳಿದರು.

ಆದರೆ, ಲಾಹೋರ್​ನಲ್ಲಿ ಕಾಲೇಜು ಯುವತಿಯ ಮೇಲೆ ಅಲ್ಲಿನ ಕಾವಲುಗಾರ ಅತ್ಯಾಚಾರ ಎಸಗಿದ್ದಾನೆ ಎಂಬ ವರದಿಗಳು ಸುಳ್ಳು ಎಂದು ಪ್ರಾಂತೀಯ ಸರ್ಕಾರ ಹೇಳಿದ್ದು, ವಿರೋಧ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ ಎಂದು ಆರೋಪಿಸಿದೆ.

"ಅತ್ಯಾಚಾರ ಸಂತ್ರಸ್ತೆ ಎಂದು ಹೇಳಲಾದ ಯುವತಿ ಮತ್ತು ಅವಳ ಪಾಲಕರನ್ನು ನಾನು ಭೇಟಿಯಾಗಿದ್ದೇನೆ. ಆದರೆ ತನ್ನ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಆಕೆ ದೃಢಪಡಿಸಿದ್ದಾಳೆ. ಈ ಇಡೀ ಘಟನೆಯು ರಾಜಕೀಯ ಅಪಪ್ರಚಾರದ ಭಾಗವಾಗಿದೆ ಮತ್ತು ಕೆಲವರು ಇಂತಹ ಕೀಳು ಮಟ್ಟದ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ" ಎಂದು ಪಂಜಾಬ್ ಮುಖ್ಯಮಂತ್ರಿ ಮರಿಯಮ್ ನವಾಜ್ ಷರೀಫ್ ಹೇಳಿದರು.

ಇದನ್ನೂ ಓದಿ: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.