Increasing Sexual Stamina: ವೈವಾಹಿಕ ಸಂಬಂಧವು ಉತ್ತಮವಾಗಿರಬೇಕಾದರೆ ಲೈಂಗಿಕ ಜೀವನವು ಪ್ರಮುಖ ಪಾತ್ರ ವಹಿಸುತ್ತದೆ. ಸೆಕ್ಸ್ ಇಲ್ಲದೆ ಹೋದರೆ ದಂಪತಿಗಳ ನಡುವಿನ ಸಂಬಂಧವು ಗಟ್ಟಿಯಾಗಿರುವುದಿಲ್ಲ. ಆ ಸಂಬಂಧದಲ್ಲಿ ಉದಾಸೀನತೆಯ ಭಾವನೆ ಮೂಡುತ್ತದೆ. ಜೊತೆಗೆ ವಯಸ್ಸಾದಂತೆ ದೇಹದಲ್ಲಿ ಹಲವಾರು ರೀತಿಯ ಬದಲಾವಣೆಗಳು ಆಗುತ್ತವೆ ಎಂದು ಆರೋಗ್ಯ ತಜ್ಞರು ತಿಳಿಸುತ್ತಾರೆ.
ಅನೇಕರಿಗೆ ವಯಸ್ಸು ಹೆಚ್ಚಾದಂತೆ ಲೈಂಗಿಕ ಶಕ್ತಿ ಕಡಿಮೆಯಾಗುತ್ತದೆ. ಈ ಕಾರಣದಿಂದಾಗಿ ವೈವಾಹಿಕ ಸಂಬಂಧಗಳಲ್ಲಿ ಬಿರುಕು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತದೆ. ಆದರೆ, ಕೆಲವೊಮ್ಮೆ ಈ ಕಡಿಮೆ ಲೈಂಗಿಕ ಸಾಮರ್ಥ್ಯದ ಶಕ್ತಿಯಿಂದಾಗಿ ವ್ಯಕ್ತಿಯು ತುಂಬಾ ಕಿರಿಕಿರಿ ಹಾಗೂ ಒತ್ತಡಕ್ಕೆ ಒಳಗಾಗುತ್ತಾನೆ. ಅನೇಕ ಜನರು ಲೈಂಗಿಕ ಶಕ್ತಿವನ್ನು ಹೆಚ್ಚಿಸಲು ವಿವಿಧ ರೀತಿಯ ಔಷಧಿಗಳನ್ನು ತೆಗೆದುಕೊಳ್ಳಲು ಆರಂಭಿಸುತ್ತಾರೆ. ಇದರಿಂದ ಆರೋಗ್ಯಕ್ಕೆ ಹಾನಿಕಾರಕವಾಗುತ್ತದೆ ಹಾಗೂ ಕೆಲವೊಮ್ಮೆ ಇವುಗಳು ಫಲಿತಾಂಶವನ್ನು ನೀಡುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.
ವೈದ್ಯರ ಸಲಹೆಯಿಲ್ಲದೆ ಹೆಚ್ಚಿನ ಔಷಧಿಗಳನ್ನು ಸೇವಿಸುವುದರಿಂದ ದೇಹದಲ್ಲಿ ಅನೇಕ ರೋಗಗಳ ಅಪಾಯ ಎದುರಾಗುತ್ತದೆ. ಹೀಗಾಗಿ ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸಲು ತಜ್ಞರು ಸೂಚಿಸಿರುವ ಕೆಲವು ಪಾನೀಯಗಳನ್ನು ಕುಡಿಯಬಹುದು. ಈ ಪಾನೀಯಗಳು ಲೈಂಗಿಕ ಶಕ್ತಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ದೇಹದ ಒಟ್ಟಾರೆ ಆರೋಗ್ಯಕ್ಕೆ ಸಹಾಯವಾಗುತ್ತದೆ. ತಜ್ಞರ ತಿಳಿಸುವ ಪ್ರಕಾರ, ಈ ಪಾನೀಯಗಳ ಸೇವನೆಯು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ ಹಾಗೂ ಲೈಂಗಿಕ ಶಕ್ತಿ ಹೆಚ್ಚಿಸುತ್ತದೆ. ಇದೀಗ ಈ ಪಾನೀಯಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳೋಣ.
1. ಗ್ರೀನ್ ಟೀ: ಗ್ರೀನ್ ಟೀ ತೂಕ ನಷ್ಟದ ಜೊತೆಗೆ ನಿಮ್ಮ ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಪುರುಷ ಹಾಗೂ ಮಹಿಳೆಯರಲ್ಲಿ ಲೈಂಗಿಕ ಶಕ್ತಿ ಹೆಚ್ಚಿಸುವಲ್ಲಿ ಇದು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಇದು ಜನನಾಂಗಗಳಲ್ಲಿ ರಕ್ತದ ಪರಿಚಲನೆಯನ್ನು ಹೆಚ್ಚಿಸುತ್ತದೆ. ಜೊತೆಗೆ ಲೈಂಗಿಕ ಬಯಕೆಯನ್ನು ಹೆಚ್ಚಿಸಲು ಪೂಕರವಾಗಿದೆ ಎನ್ನುತ್ತಾರೆ ವೈದ್ಯಕೀಯ ತಜ್ಞರು.

2. ಬ್ಲ್ಯಾಕ್ ಕಾಫಿ: ಬ್ಲ್ಯಾಕ್ ಕಾಫಿಯನ್ನು ಸಾಮಾನ್ಯವಾಗಿ ಮೂಡ್ ಹೆಚ್ಚಿಸುವಂತಹ ಪಾನೀಯ ಎಂದು ಕರೆಯಲಾಗುತ್ತದೆ. ಇದರಲ್ಲಿರುವ ಕೆಫೀನ್ ಪುರುಷರು ಮತ್ತು ಮಹಿಳೆಯರ ಲೈಂಗಿಕ ಸಾಮರ್ಥ್ಯವನ್ನು ದ್ವಿಗುಣಗೊಳಿಸುತ್ತದೆ. ಪ್ರತಿದಿನ ಕಾಫಿ ಕುಡಿಯುವ ಪುರುಷರಲ್ಲಿ ಲೈಂಗಿಕ ಶಕ್ತಿ ಹೆಚ್ಚಿರುತ್ತದೆ ಎಂದು ಕೆಲವು ಅಧ್ಯಯನಗಳು ಬಹಿರಂಗಪಡಿಸಿವೆ.
3. ರೆಡ್ ವೈನ್: ಪುರುಷರು ಮತ್ತು ಮಹಿಳೆಯರಲ್ಲಿ ಲೈಂಗಿಕ ಬಯಕೆಯನ್ನು ಹೆಚ್ಚಿಸುವ ಮತ್ತೊಂದು ಪಾನೀಯವೆಂದರೆ ಅದು ರೆಡ್ ವೈನ್. ಎರಡು ಗ್ಲಾಸ್ ರೆಡ್ ವೈನ್ ಕುಡಿಯುವ ಮಹಿಳೆಯರು ಹೆಚ್ಚಿನ ಲೈಂಗಿಕ ಬಯಕೆಯನ್ನು ಹೊಂದಿರುತ್ತಾರೆ. ಜೊತೆಗೆ ಪುರುಷರಲ್ಲಿ ಟೆಸ್ಟೋಸ್ಟೆರಾನ್ ಮಟ್ಟವು ಹೆಚ್ಚಾಗುತ್ತದೆ ಎಂದು ತಜ್ಞರು ವಿವರಿಸುತ್ತಾರೆ.
4. ಬನಾನಾ ಮಿಲ್ಕ್ ಶೇಕ್: ಬನಾನಾ ಅಥವಾ ಬಾಳೆಹಣ್ಣಿನ ಮಿಲ್ಕ್ ಶೇಕ್ ಸೇವಿಸುವುದರಿಂದ ದೇಹದಲ್ಲಿನ ಶಕ್ತಿ ಹೆಚ್ಚುವುದರೊಂದಿಗೆ ಲೈಂಗಿಕ ಸಾಮರ್ಥ್ಯವನ್ನು ವೃದ್ಧಿಸುತ್ತದೆ. ಬಾಳೆಹಣ್ಣಿನಲ್ಲಿ ಕಂಡುಬರುವ ಬ್ರೋಮೆಲಿನ್ ಕಿಣ್ವವು ಪುರುಷರಲ್ಲಿ ಟೆಸ್ಟೋಸ್ಟೆರಾನ್ ಹಾಗೂ ಲೈಂಗಿಕ ಬಯಕೆಯನ್ನು ಹೆಚ್ಚಿಸುತ್ತದೆ. ಬಾಳೆಹಣ್ಣು ಫ್ಲೇವನಾಯ್ಡ್‌ಗಳು, ಉತ್ಕರ್ಷಣ ನಿರೋಧಕಗಳು ಹಾಗೂ ಇತರ ಪ್ರಯೋಜನಕಾರಿ ಪೋಷಕಾಂಶಗಳನ್ನು ಸಹ ಒಳಗೊಂಡಿದೆ ಎಂದು ತಜ್ಞರು ಹೇಳುತ್ತಾರೆ.

5. ದಾಳಿಂಬೆ ಜ್ಯೂಸ್: ದಾಳಿಂಬೆ ಜ್ಯೂಸ್ ಪುರುಷರಲ್ಲಿ ಹಾಗೂ ಮಹಿಳೆಯರಲ್ಲಿ ಲೈಂಗಿಕ ಹಾರ್ಮೋನುಗಳನ್ನು ಹೆಚ್ಚಿಸುವ ಪಾನೀಯವಾಗಿದೆ. ಇದು ಮಹಿಳೆಯರಲ್ಲಿ ಲೈಂಗಿಕ ಬಯಕೆಯನ್ನು ಹೆಚ್ಚಿಸುತ್ತದೆ. ಇದನ್ನು ಸೇವಿಸುವುದರಿಂದ ಜನನಾಂಗಗಳಲ್ಲಿ ರಕ್ತ ಪರಿಚಲನೆ ಹೆಚ್ಚುತ್ತದೆ ಎಂದು ಆರೋಗ್ಯ ತಜ್ಞರು ವಿವರಿಸುತ್ತಾರೆ.
6. ಹಾಲು ಮತ್ತು ಅಶ್ವಗಂಧ: ಅಶ್ವಗಂಧದ ಪುಡಿಯನ್ನು ಬಿಸಿ ಹಾಲಿನಲ್ಲಿ ಬೆರೆಸಿ ಕುಡಿಯುವುದರಿಂದ ಲೈಂಗಿಕ ಸಾಮರ್ಥ್ಯ ಹೆಚ್ಚುತ್ತದೆ. ಅಶ್ವಗಂಧವು ಒತ್ತಡ ಹಾಗೂ ಆತಂಕ ಕಡಿಮೆ ಮಾಡುತ್ತದೆ. ಅಶ್ವಗಂಧದಿಂದ ನಿದ್ರಾಹೀನತೆ ಸಮಸ್ಯೆಗೆ ಪರಿಹಾರ ಲಭಿಸುತ್ತದೆ. ಸೀರಮ್ ಕಾರ್ಟಿಸೋಲ್ ಮಟ್ಟವನ್ನು (ಒತ್ತಡದ ಹಾರ್ಮೋನ್) ಕಡಿಮೆ ಮಾಡುತ್ತದೆ. ಅಶ್ವಗಂಧ ಪುರುಷರಲ್ಲಿ ಟೆಸ್ಟೋಸ್ಟೆರಾನ್ ಮಟ್ಟವನ್ನು ಹೆಚ್ಚಿಸುತ್ತದೆ. ಪುರುಷರಲ್ಲಿ ಫಲವತ್ತತೆ ಹೆಚ್ಚಾಗುತ್ತದೆ. ಜೊತೆಗೆ ರಕ್ತದಲ್ಲಿನ ಸಕ್ಕರೆ ನಿಯಂತ್ರಿಸಲು ಸಹಾಯ ಮಾಡುತ್ತದೆ. ದೇಹದಲ್ಲಿ ಉರಿಯೂತ ಕಡಿಮೆ ಮಾಡಲು ಸಹಾಯ ಮಾಡುವ ಸಂಯುಕ್ತಗಳನ್ನು ಅಶ್ವಗಂಧ ಒಳಗೊಂಡಿದೆ ಎಂದು ತಜ್ಞರು ತಿಳಿಸುತ್ತಾರೆ.
ಓದುಗರಿಗೆ ವಿಶೇಷ ಸೂಚನೆ: ಈ ವರದಿಯಲ್ಲಿ ನಿಮಗೆ ನೀಡಲಾದ ಎಲ್ಲ ಆರೋಗ್ಯ ಸಂಬಂಧಿತ ಮಾಹಿತಿ ಹಾಗೂ ಸಲಹೆಗಳು ಸಾಮಾನ್ಯ ಮಾಹಿತಿಗಾಗಿ ಮಾತ್ರವೇ ನೀಡಲಾಗಿದೆ. ನಾವು ಈ ಮಾಹಿತಿಯನ್ನು ವೈಜ್ಞಾನಿಕ ಸಂಶೋಧನೆ, ಅಧ್ಯಯನಗಳು, ವೈದ್ಯಕೀಯ ಮತ್ತು ಆರೋಗ್ಯ ವೃತ್ತಿಪರ ಸಲಹೆಯ ಆಧಾರದ ಮೇಲೆ ಒದಗಿಸುತ್ತಿದ್ದೇವೆ. ನೀವು ಈ ಬಗ್ಗೆ ವಿವರವಾಗಿ ತಿಳಿದುಕೊಳ್ಳಬೇಕು. ಮತ್ತು ಈ ವಿಧಾನ ಅಥವಾ ಕಾರ್ಯವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದಾದಲ್ಲಿ ನುರಿತ ಪರಿಣತ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.