ETV Bharat / spiritual

ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರ, ಅಮ್ಮನವರ ಜನ್ಮೋತ್ಸವಕ್ಕೆ ಸಕಲ ಸಿದ್ಧತೆಗೆ ಡಿಸಿ ಸೂಚನೆ - Mysuru Chamundi Hill

author img

By ETV Bharat Karnataka Team

Published : Jun 22, 2024, 3:48 PM IST

ಆಷಾಢ ಶುಕ್ರವಾರ ಹಾಗೂ ಚಾಮುಂಡೇಶ್ವರಿ ದೇವಿ ಜನ್ಮೋತ್ಸವ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಹಿನ್ನೆಲೆ ಹೆಚ್ಚಿನ ಭಕ್ತರು ಸೇರುವ ಸಾಧ್ಯತೆಯಿದ್ದು, ಸೂಕ್ತ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಸೂಚನೆ ನೀಡಿದರು.

Mysuru Chamundi Hill
ಮೈಸೂರು ಚಾಮುಂಡಿ ಬೆಟ್ಟ (ETV Bharat)

ಮೈಸೂರು: ಮೈಸೂರಿನ ಅಧಿದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2024ನೇ ಸಾಲಿನ ಆಷಾಢ ಶುಕ್ರವಾರ ಹಾಗೂ ಅಮ್ಮನವರ ಜನ್ಮೋತ್ಸವ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ತಿಳಿಸಿದರು.

ಇದರ ಸಿದ್ಧತೆಯ ಬಗ್ಗೆ ಸಭೆ ನಡೆಸಿದ ಜಿಲ್ಲಾಧಿಕಾರಿ, ಚಾಮುಂಡಿಬೆಟ್ಟದಲ್ಲಿ ಆಷಾಢ ನಾಲ್ಕು ಶುಕ್ರವಾರ ಹಾಗೂ ಚಾಮುಂಡೇಶ್ವರಿ ತಾಯಿಯ ಜಯಂತ್ಯುತ್ಸವ ನಡೆಯಲಿದ್ದು, ಇದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಕೆಲವು ಸೂಚನೆಗಳನ್ನು ನೀಡಿದರು.

"ಜುಲೈ 12ರಂದು ಮೊದಲನೇ ಆಷಾಢ ಶುಕ್ರವಾರ, ಜುಲೈ 19ರಂದು ಎರಡನೇ ಆಷಾಢ ಶುಕ್ರವಾರ, ಜುಲೈ 26 ರಂದು ಮೂರನೇ ಆಷಾಢ ಶುಕ್ರವಾರ, ಜುಲೈ 27 ರಂದು ಶನಿವಾರ ಶ್ರೀ ಚಾಮುಂಡೇಶ್ವರಿ ಅಮ್ಮನವರ ಜನ್ಮೋತ್ಸವ ವರ್ಧಂತಿ ಕಾರ್ಯಕ್ರಮ ಹಾಗೂ ಆಗಸ್ಟ್ 2 ರಂದು ಕೊನೆಯ ಆಷಾಢ ಶುಕ್ರವಾರಕ್ಕೆ ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಸೂಕ್ತ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ವಹಿಸಬೇಕು" ಎಂದು ಅವರು ತಿಳಿಸಿದರು.

Mysuru Chamundi Hill
ಮೈಸೂರು ಚಾಮುಂಡಿ ಬೆಟ್ಟ (ETV Bharat)

"ಜುಲೈ ಮೊದಲ ವಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳ ಜೊತೆ ಆಷಾಢ ಶುಕ್ರವಾರ ಕುರಿತು ಆಗಿರುವ ಪೂರ್ವ ಸಿದ್ಧತೆಗಳ ಬಗ್ಗೆ ಪರಿಶೀಲನೆ ಸಭೆ ನಡೆಸಲಾಗುವುದು. ಚಾಮುಂಡೇಶ್ವರಿ ಬೆಟ್ಟದಲ್ಲಿ ದಾಸೋಹ ಭವನದಲ್ಲಿ ನಡೆಯುವ ಪ್ರಸಾದ ವಿತರಣಾ ಕಾರ್ಯಕ್ರಮದ ಜೊತೆಗೆ ಭಕ್ತಾದಿಗಳು ಸಹ ಅಲ್ಲಲ್ಲಿ ಪ್ರಸಾದ ವಿತರಣೆ ಮಾಡುವುದರಿಂದ ಆಹಾರದ ಸುರಕ್ಷತೆಗೆ ಗಮನ ಕೊಡಲಾಗಿದೆ. ಆಹಾರ ಸುರಕ್ಷತಾ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು" ಎಂದು ತಿಳಿಸಿದರು.

"ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ವಾಹನಗಳ ಪಾರ್ಕಿಂಗ್ ಅನ್ನು ಕ್ರಮಬದ್ಧವಾಗಿ ಮಾಡಿಸಬೇಕು. ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧವಿದ್ದು, ಬೆಟ್ಟಕ್ಕೆ ಬರುವವರು ಪ್ಲಾಸ್ಟಿಕ್​ಗಳನ್ನು ತರುವಂತಿಲ್ಲ. ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆ ಕಾಪಾಡಬೇಕು. ಮೊಬೈಲ್ ಶೌಚಾಲಯ ವ್ಯವಸ್ಥೆ ಮಾಡಬೇಕು. ಚಾಮುಂಡಿ ಬೆಟ್ಟದಲ್ಲಿ ಅಂಗಡಿಗಲ್ಲಿಯೂ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ. ಚಾಮುಂಡಿ ಬೆಟ್ಟದಲ್ಲಿ ಸಿಸಿಟಿವಿ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸಬೇಕು. ಚಾಮುಂಡಿ ಬೆಟ್ಟದಲ್ಲಿ ಕುಡಿಯುವ ನೀರಿನ ಆರ್​ಓ ಪ್ಲಾಂಟ್ ವ್ಯವಸ್ಥೆ ಕಲ್ಪಿಸಬೇಕು. ಇದರಿಂದ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ಬಳಕೆ ಕಡಿಮೆ ಮಾಡಬಹುದು" ಎಂದು ತಿಳಿಸಿದರು.

"ಯಾವುದೇ ಫ್ಲೆಕ್ಸ್​, ಬ್ಯಾನರ್​ಗಳನ್ನು ಅಳವಡಿಸುವಂತಿಲ್ಲ. ಪಾಸ್ ವ್ಯವಸ್ಥೆ ಇರುವುದಿಲ್ಲ. ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ದರ್ಶನ ಸುಗಮವಾಗಿ ಆಗಬೇಕು. ಬರುವ ಭಕ್ತಾದಿಗಳಿಗೆ ಪೊಲೀಸ್ ಇಲಾಖೆಯಿಂದ ಭದ್ರತೆ ಒದಗಿಸಬೇಕು" ಎಂದು ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ, ಉಪ ಪೊಲೀಸ್ ಆಯುಕ್ತರಾದ ಮುತ್ತುರಾಜ್, ಜಾನ್ಹವಿ, ಅಪರ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಚಂದ್ರಗುತ್ತಿಗೆ ಕಾರ ಹುಣ್ಣಿಮೆಯಂದು ಹರಿದು ಬಂದ ಭಕ್ತಸಾಗರ: ರೇಣುಕಾದೇವಿಗೆ ವಿಶೇಷ ಪೂಜೆ - Devotees flowed in Chandragutthi

ETV Bharat Logo

Copyright © 2024 Ushodaya Enterprises Pvt. Ltd., All Rights Reserved.