ETV Bharat / sports

Sri Lanka vs India, 1st ODI: ಟಾಸ್ ಗೆದ್ದ ಲಂಕಾ ಬ್ಯಾಟಿಂಗ್; ಭಾರತ ತಂಡದಲ್ಲಿ ರಾಹುಲ್, ಅಯ್ಯರ್‌ಗೆ ಸ್ಥಾನ - IND VS SL ODI - IND VS SL ODI

ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್​ ಗೆದ್ದ ಶ್ರೀಲಂಕಾ ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿದೆ.

1st ODI: Sri Lanka win toss, decide to bat against India
ರೋಹಿತ್ ಶರ್ಮಾ (IANS)
author img

By ANI

Published : Aug 2, 2024, 2:55 PM IST

Updated : Aug 2, 2024, 3:42 PM IST

ಕೊಲಂಬೊ: ಭಾರತ ಮತ್ತು ಶ್ರೀಲಂಕಾ ನಡುವಿನ 3 ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿ ಇಂದಿನಿಂದ ಆರಂಭವಾಗಿದೆ. ಮೊದಲ ಪಂದ್ಯ ಕೊಲಂಬೊದಲ್ಲಿ ನಡೆಯುತ್ತಿದೆ. ಟಾಸ್​ ಗೆದ್ದ ಶ್ರೀಲಂಕಾ ನಾಯಕ ಚರಿತ್ ಅಸಲಂಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ರೋಹಿತ್ ಶರ್ಮಾ ನೇತೃತ್ವದ ಭಾರತ ಬೌಲಿಂಗ್​ ಮಾಡುತ್ತಿದೆ.

ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟಿ20 ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್​ಸ್ವೀಪ್ ಮಾಡಿರುವ ಭಾರತ, ಇದೀಗ ರೋಹಿತ್ ಶರ್ಮಾ ನೇತೃತ್ವದಲ್ಲಿ ಏಕದಿನ ಸರಣಿಯಲ್ಲಿ ಕಣಕ್ಕಿಳಿದಿದೆ. 2024ರ ಟಿ20 ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾಗೆ ಇದು ಮೊದಲ ಪಂದ್ಯವಾಗಿದೆ.

ಇಂದಿನ ಪಂದ್ಯದಲ್ಲಿ ರಿಷಭ್ ಪಂತ್ ಹೊರಗುಳಿದಿದ್ದು ವಿಕೆಟ್ ಕೀಪರ್ ಆಗಿ ಕೆ.ಎಲ್.ರಾಹುಲ್ ಅವಕಾಶ ಪಡೆದಿದ್ದಾರೆ. ಬಿಸಿಸಿಐ ಗುತ್ತಿಗೆಯಿಂದ ಹೊರಬಿದ್ದ ಬಳಿಕ ಶ್ರೇಯಸ್ ಅಯ್ಯರ್ ಮೊದಲ ಬಾರಿಗೆ ಆಡುವ ಅವಕಾಶ ಪಡೆದಿದ್ದಾರೆ. ಆಲ್‌ರೌಂಡರ್ ವಿಭಾಗದಲ್ಲಿ ಶಿವಂ ದುಬೆ ಮತ್ತು ಅಕ್ಷರ್ ಪಟೇಲ್ ಆಡುತ್ತಿದ್ದಾರೆ.

ಉಭಯ ತಂಡಗಳು ಇಂತಿವೆ:

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್.ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಿವಂ ದುಬೆ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕ, ಅವಿಷ್ಕಾ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಸದಿರ ಸಮರವಿಕ್ರಮ, ಚರಿತ್ ಅಸಲಂಕಾ (ನಾಯಕ), ಜನಿತ್ ಲಿಯಾನಗೆ, ವನಿಂದು ಹಸರಂಗಾ, ದುನಿತ್ ವೆಲಾಲಗೆ, ಅಕಿಲಾ ಧನಂಜಯ್, ಅಸಿತ ಫೆರ್ನಾಂಡೋ, ಮೊಹಮ್ಮದ್ ಶಿರಾಜ್.

ಇದನ್ನೂ ಓದಿ: ಒಲಿಂಪಿಕ್ಸ್‌ನಲ್ಲಿ ನೀರಜ್ ಚೋಪ್ರಾ ಚಿನ್ನ ಗೆದ್ದರೆ 'ಉಚಿತ ವೀಸಾ'!: ಹೀಗೊಂದು ಭರವಸೆ ನೀಡಿದ ಭಾರತೀಯ ಮೂಲದ ಸಿಇಒ - Paris Olympics

Last Updated : Aug 2, 2024, 3:42 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.