ETV Bharat / sports

2ನೇ ಮಗುವಿನ ನಿರೀಕ್ಷೆಯಲ್ಲಿ 'ವಿರುಷ್ಕಾ' ದಂಪತಿ: ಮಾಹಿತಿ ಖಚಿತಪಡಿಸಿದ ಎಬಿ ಡಿ - ವಿರಾಟ್ ಕೊಹ್ಲಿ

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಇತ್ತೀಚಿನ ದಿನಗಳಲ್ಲಿ ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. ಇಂಗ್ಲೆಂಡ್ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಿಗೆ ಅವರು ಅಲಭ್ಯರಾಗಿದ್ದರು. ಇದೀಗ ವಿರಾಟ್​-ಅನುಷ್ಕಾ ದಂಪತಿ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬುದನ್ನು ದಕ್ಷಿಣ ಆಫ್ರಿಕಾ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಖಚಿತಪಡಿಸಿದ್ದಾರೆ.

AB de Villiers  Virat Kohli  Anushka Sharma  IND vs ENG  ವಿರಾಟ್ ಕೊಹ್ಲಿ ಅನುಷ್ಕಾ ಶರ್ಮಾ
2ನೇ ಮಗುವಿನ ನಿರೀಕ್ಷೆಯಲ್ಲಿ ವಿರುಷ್ಕಾ ದಂಪತಿ: ಈ ಮಾಹಿತಿ ಖಚಿತಪಡಿಸಿದ ಎಬಿ ಡಿವಿಲಿಯರ್ಸ್
author img

By ETV Bharat Karnataka Team

Published : Feb 4, 2024, 11:53 AM IST

ಮುಂಬೈ(ಮಹಾರಾಷ್ಟ್ರ): ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳನ್ನು ಆಡದಿರುವ ಕಾರಣವನ್ನು ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಬಹಿರಂಗಪಡಿಸಿದ್ದಾರೆ. ವಿರಾಟ್​ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಮಾಹಿತಿಯನ್ನು ಅವರು ತಿಳಿಸಿದ್ದಾರೆ.

ಎಬಿ ಡಿವಿಲಿಯರ್ಸ್ ತಮ್ಮ ಯೂಟ್ಯೂಬ್ ವಿಡಿಯೋದಲ್ಲಿ, ''ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಆದ್ದರಿಂದ ಕೊಹ್ಲಿ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯುತ್ತಿದ್ದಾರೆ'' ಎಂದು ಹೇಳಿದರು.

ವಿರಾಟ್ ಮತ್ತು ಅನುಷ್ಕಾ 2017ರ ಡಿಸೆಂಬರ್ 11ರಂದು ವಿವಾಹವಾಗಿದ್ದರು. ಇವರ ಮೊದಲ ಮಗಳು ವಮಿಕಾ 2021ರ ಜನವರಿ 11ರಂದು ಜನಿಸಿದ್ದಳು.

ಹೈದರಾಬಾದ್‌ನಲ್ಲಿ ಟೆಸ್ಟ್ ಸರಣಿಯ ಮೊದಲ ಪಂದ್ಯ ಪ್ರಾರಂಭವಾಗುವ ಮುನ್ನ, ಮೊದಲೆರಡು ಪಂದ್ಯಗಳಿಂದ ಕೊಹ್ಲಿ ಹೊರಗುಳಿಯುವ ನಿರ್ಧಾರ ಕೈಗೊಂಡಿದ್ದರು. ನಾಯಕ ರೋಹಿತ್ ಶರ್ಮಾ ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಈ ಬಗ್ಗೆ ಮಾಹಿತಿ ನೀಡಿತ್ತು. ವೈಯಕ್ತಿಕ ಕಾರಣಗಳಿಂದ ಅವರು ಆಡುತ್ತಿಲ್ಲ ಎಂದು ತಿಳಿಸಿತ್ತು.

ವಿರಾಟ್​ ನಿರ್ಗಮನದ ನಂತರ ಅವರ ಈ ನಿರ್ಧಾರಕ್ಕೆ ಕಾರಣಗಳ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಊಹಾಪೋಹಗಳು ಎದ್ದಿದ್ದವು. ವಿರಾಟ್​ ಮತ್ತು ಅನುಷ್ಕಾ ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಕೆಲವರು ಊಹಿಸಿದರೆ, ಇನ್ನು ಕೆಲವರು ತಮ್ಮ ಕುಟುಂಬದಲ್ಲಿರುವ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ತಂಡದಿಂದ ದೂರ ಉಳಿದಿದ್ದಾರೆ ಎಂದು ಅಂದಾಜಿಸಿದ್ದರು.

ಇದನ್ನೂ ಓದಿ: ವಿಶಾಖಪಟ್ಟಣ ಟೆಸ್ಟ್​: ಬುಮ್ರಾ ಮಾರಕ ದಾಳಿಗೆ ಇಂಗ್ಲೆಂಡ್ ತತ್ತರ​, ಭಾರತಕ್ಕೆ 171 ರನ್​ ಮುನ್ನಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.