Border Gavaskar Trophy: ತವರಿನಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿ ಆಡಲು ಆಸ್ಟ್ರೇಲಿಯಾ ಸಕಲ ಸಿದ್ಧತೆ ಮಾಡಿಕೊಂಡಿದೆ. ಭಾರತ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿ ಆಡಲಿರುವ ಆಸೀಸ್ ಮೊದಲ ಪಂದ್ಯಕ್ಕಾಗಿ ತಂಡ ಪ್ರಕಟಿಸಿದೆ. ನವೆಂಬರ್ 22ರಂದು ಪರ್ತ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ಮಾತ್ರ 13 ಸದಸ್ಯರ ತಂಡ ಪ್ರಕಟಿಸಲಾಗಿದೆ. ಅಚ್ಚರಿ ಎಂಬಂತೆ 25 ವರ್ಷ ಆಟಗಾರನನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.
ತಂಡವನ್ನು ಪ್ಯಾಟ್ ಕಮಿನ್ಸ್ ಮುನ್ನಡೆಸಲಿದ್ದಾರೆ. ಉಳಿದಂತೆ ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಉಸ್ಮಾನ್ ಖವಾಜಾ, ಮಿಚೆಲ್ ಮಾರ್ಷ್, ನಾಥನ್ ಲಿಯಾನ್, ಸ್ಟೀವ್ ಸ್ಮಿತ್, ನಾಥನ್ ಮೆಕ್‌ಸ್ವೀನಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
25 ವರ್ಷ ಆಟಗಾರನಿಗೆ ಅವಕಾಶ: ಭಾರತ-ಎ ವಿರುದ್ಧದ ಅನ್ ಅಫೀಶಿಯಲ್ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ-ಎ ತಂಡದ ನಾಯಕರಾಗಿದ್ದ ನಾಥನ್ ಮೆಕ್‌ಸ್ವೀನಿ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಕ್ಯಾಮರೂನ್ ಗ್ರೀನ್ ಗಾಯದ ಸಮಸ್ಯೆಯಿಂದ ಹೊರ ಉಳಿದ ಕಾರಣ ಯುವ ಆಟಗಾರನಿಗೆ ಆಸೀಸ್ ಮಣೆ ಹಾಕಿದೆ.
ಭಾರತ ಪ್ರವಾಸ: 5 ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತ ತಂಡಡ ಇಂದು ಆಸ್ಟ್ರೇಲಿಯಾಗಿ ಪ್ರಯಾಣ ಬೆಳೆಸಲಿದೆ. ನಾಯಕ ರೋಹಿತ್ ಶರ್ಮಾ ಮೊದಲ ಟೆಸ್ಟ್‌ನಲ್ಲಿ ಆಡುವ ಬಗ್ಗೆ ಇನ್ನೂ ಅನುಮಾನಗಳಿವೆ.
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಅಲೆಕ್ಸ್ ಕ್ಯಾರಿ, ಸ್ಕಾಟ್ ಬೋಲ್ಯಾಂಡ್, ಟ್ರಾವಿಸ್ ಹೆಡ್, ಜೋಶ್ ಹ್ಯಾಜಲ್‌ವುಡ್, ಉಸ್ಮಾನ್ ಖವಾಜಾ, ಜೋಶ್ ಇಂಗ್ಲಿಸ್, ನಾಥನ್ ಲಿಯಾನ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ನಾಥನ್ ಮೆಕ್‌ಸ್ವೀನಿ, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್ ಮಿಚೆಲ್ ಸ್ಟಾರ್ಕ್
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಅಭಿಮನ್ಯು ಈಶ್ವರನ್, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್, ರಿಷಬ್ ಪಂತ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಧ್ರುವ ಜುರೆಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್.
ಬಾರ್ಡರ್ ಗವಾಸ್ಕರ್ ಟ್ರೋಫಿ ವೇಳಾಪಟ್ಟಿ
ಮೊದಲ ಟೆಸ್ಟ್: ನವೆಂಬರ್ 22-26 - ಪರ್ತ್
ಎರಡನೇ ಟೆಸ್ಟ್: ಡಿಸೆಂಬರ್ 06-10 ಕ್ಯಾನ್‌ಬೆರಾ
ಮೂರನೇ ಟೆಸ್ಟ್: ಡಿಸೆಂಬರ್ 14-18 ಬ್ರಿಸ್ಬೇನ್
ನಾಲ್ಕನೇ ಟೆಸ್ಟ್: ಡಿಸೆಂಬರ್ 26-30 ಮೆಲ್ಬೋರ್ನ್
ಐದನೇ ಟೆಸ್ಟ್: 2025 ಜನವರಿ 03-07- ಸಿಡ್ನಿ
ಇದನ್ನೂ ಓದಿ: ಐಪಿಎಲ್ ಹರಾಜಿನಲ್ಲಿ ದೊಡ್ಡ ಮೊತ್ತ ಪಡೆಯಲಿರುವ ಟಾಪ್ 10 ಆಟಗಾರರು ಇವರೇ!