ನವದೆಹಲಿ: ಟಿ-20 ವಿಶ್ವಕಪ್‌ನ 10ನೇ ಪಂದ್ಯದಲ್ಲಿಂದು ಒಮಾನ್ ವಿರುದ್ಧ ಆಸ್ಟ್ರೇಲಿಯಾ 39 ರನ್‌ಗಳ ಗೆಲುವು ಸಾಧಿಸಿದೆ.
ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಬ್ರಿಡ್ಜ್‌ಟೌನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ, ಆಸ್ಟ್ರೇಲಿಯಾ ನೀಡಿದ್ದ 164 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಒಮಾನ್ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 125 ರನ್ ಗಳಿಸಲಷ್ಟೇ ಶಕ್ತವಾಯಿತು. 56 ರನ್ ಗಳಿಸುವಷ್ಟರಲ್ಲಿ ತಂಡ ಪ್ರಮುಖ 5 ವಿಕೆಟ್ಗಳನ್ನು ಕಳೆದುಕೊಂಡಿತು. ಒಮನ್ ಪರ ಅಯಾನ್ ಖಾನ್ 30 ಎಸೆತಗಳಲ್ಲಿ 36 ರನ್ ಗಳಿಸಿ ಹೈಸ್ಕೋರರ್ ಎನಿಸಿಕೊಂಡರೇ, ಮೆಹ್ರಾನ್ 27 ರನ್ ಗಳಿಸಿದರು. ಈ ಇಬ್ಬರು ಬ್ಯಾಟ್ಸ್‌ಮನ್‌ಗಳನ್ನು ಹೊರತುಪಡಿಸಿ ಬೇರೆ ಯಾವುದೇ ಬ್ಯಾಟ್ಸ್‌ಮನ್‌ಗಳು ಹೆಚ್ಚಿನ ಸ್ಕೋರ್ ಕಲೆ ಹಾಕಲು ಸಾಧ್ಯವಾಗಲಿಲ್ಲ. ಕಾಶ್ಯಪ್ ಪಾಟೀಲ್ (7), ಅಖಿಬ್ (18), ಖಲೀದ್ (8), ಶಖೀಲ್ (11), ಖಲೀಮುಲ್ಲಾ (6*), ಬಿಲಾಲ್ ಖಾನ್ (1*) ಸ್ಕೋರ್ ಕಲೆಹಾಕುವಲ್ಲಿ ವಿಫಲರಾದರು. ಆಸ್ಟ್ರೇಲಿಯಾ ಪರ ಸ್ಟೋಯಿನಿಸ್ 3, ನಥನ್ ಎಲ್ಲಿಸ್, ಜಂಪಾ, ಸ್ಟಾರ್ಕ್ ತಲಾ 2 ವಿಕೆಟ್ ಪಡೆದರು.
ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟ್ ಮಾಡಿದ್ದ ಆಸ್ಟ್ರೇಲಿಯಾ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಸಾಧರಣ ಮೊತ್ತವನ್ನು ಕಲೆಹಾಕಿತು. ತಂಡದ ಪರ ಮಾರ್ಕಸ್ ಸ್ಟೊಯಿನಿಸ್ ಮತ್ತು ಡೇವಿಡ್ ವಾರ್ನರ್ ಅರ್ಧಶತಕ ಇನಿಂಗ್ಸ್ ಆಡಿದರು. ವಾರ್ನರ್ 51 ಎಸೆತಗಳಲ್ಲಿ 56 ರನ್ ಸಿಡಿಸಿದರೇ ಮಾರ್ಕಸ್ ಸ್ಟೊಯಿನಿಸ್ 36 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 2 ಬೌಂಡರಿ ಸಮೇತ 67 ರನ್ ಚಚ್ಚಿದರು. ಆಲ್ರೌಂಡರ್ ಪ್ರದರ್ಶನಕ್ಕಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನೂ ಪಡೆದರು. ಇನಿಂಗ್ಸ್ನ 15ನೇ ಓವರ್ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ ಸ್ಟೊಯಿನಿಸ್ ಒಂದೇ ಓವರ್ನಲ್ಲಿ 4 ಸಿಕ್ಸರ್ ಬಾರಿಸಿ ತಂಡದ ಸ್ಕೋರ್ಗೆ ಕೊಡುಗೆ ನೀಡಿದರು.
ಉಳಿದಂತೆ ಆರಂಭಿಕವಾಗಿ ಕ್ರೀಸ್ಗಿಳಿದ ಸ್ಪೋಟಕ್ ಬ್ಯಾಟರ್ ಟ್ರಾವಿಸ್ ಹೆಡ್ 12 ರನ್ಗಳಿಗೆ ನಿರ್ಗಮಿಸುವ ಮೂಲಕ ನಿರಾಸೆ ಮೂಡಿಸಿದರು. ನಾಯಕ ಮಿಚೆಲ್ ಮಾರ್ಷ್ ಕೂಡ 14ರನ್ಗಳಿಗೆ ನಿರ್ಗಮಿಸಿದರೇ, ಮ್ಯಾಕ್ಸ್ವೆಲ್ ಶೂನ್ಯಕ್ಕೆ ಹೊರನಡೆದರು. ಟಿಮ್ ಡೆವಿಡ್ ರನ್ ಕಸಿಯಲು ಹೋಗಿ ರನ್ ಔಟ್ ಬಲೆಗೆ ಬಿದ್ದು ಪೆವಿಲಿಯನ್ ಸೇರಿದರು. ಒಮಾನ್ ಪರ ಮೆಹ್ರಾನ್ ಖಾನ್ 2 ವಿಕೆಟ್ ಪಡೆದರು.
ಇದನ್ನೂ ಓದಿ: T20 World Cup 2024: ಐರ್ಲೆಂಡ್ ವಿರುದ್ಧ ಭಾರತಕ್ಕೆ ಸುಲಭ ಜಯ: ರೋಹಿತ್ ಪಡೆ ಶುಭಾರಂಭ - India Beat Ireland