Ind vs Aus: ಬಾರ್ಡರ್ ಗವಾಸ್ಕರ್ ಟ್ರೋಫಿಯ ಐದು ಪಂದ್ಯಗಳ ಟೆಸ್ಟ್ ಸರಣಿಯ ಭಾಗವಾಗಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ನಾಲ್ಕನೇ (ಬಾಕ್ಸಿಂಗ್ ಡೇ) ಟೆಸ್ಟ್ ಪ್ರಾರಂಭವಾಗಿದೆ. ಇಂದಿನ ಪಂದ್ಯದಲ್ಲಿ ಭಾರತ ಒಂದೇ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ಸಹಾಯಕವಾಗಿರಲಿದೆ ಎಂಬ ದೃಷ್ಟಿಯಿಂದಾಗಿ ಭಾರತ ತಂಡ ಇಬ್ಬರು ಸ್ಪಿನ್ನರ್ಗಳನ್ನು ತಂಡಕ್ಕೆ ಆಯ್ಕೆ ಮಾಡಿಕೊಂಡಿದೆ.
ಈ ಸರಣಿಯಲ್ಲಿ ಸತತ ವಿಫಲವಾದ ಶುಭಮನ್ ಗಿಲ್ ಅವರನ್ನು ತಂಡದಿಂದ ಕೈಬಿಟ್ಟು ಅವರ ಸ್ಥಾನಕ್ಕೆ ವಾಷಿಂಗ್ಟನ್ ಸುಂದರ್ ಅವರನ್ನು ಆಯ್ಕೆ ಮಾಡಲಾಗಿದೆ. ಆಸ್ಟ್ರೇಲಿಯಾ ಕೂಡ ಅಂತಿಮ ತಂಡದಲ್ಲಿ ಎರಡು ಬದಲಾವಣೆ ಮಾಡಿದೆ. 19ರ ಹರೆಯದ ಆರಂಭಿಕ ಬ್ಯಾಟ್ಸ್‌ಮನ್ ಸ್ಯಾಮ್ ಕೊನ್‌ಸ್ಟಾಸ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಗಾಯದ ಸಮಸ್ಯೆಯಿಂದ ಸರಣಿಯಿಂದ ಹೊರ ಬಿದ್ದಿರುವ ಜೋಶ್ ಹೇಜಲ್‌ವುಡ್ ಬದಲಿಗೆ ಸ್ಕಾಟ್ ಬೋಲ್ಯಾಂಡ್ ಅವರನ್ನು ಆಯ್ಕೆ ಮಾಡಲಾಗಿದೆ.
Virat Kohli and Sam Konstas exchanged a heated moment on the MCG. #AUSvIND pic.twitter.com/QL13nZ9IGI
— cricket.com.au (@cricketcomau) December 26, 2024
ಏತನ್ಮಧ್ಯೆ ಮೊದಲ ದಿನದಾಟದಲ್ಲಿ ವಿರಾಟ್ ಕೊಹ್ಲಿ ಯುವ ಆಟಗಾರನೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಮೈದಾನದಲ್ಲಿ ಸದಾ ಆಕ್ರಮಣಕಾರಿಯಾಗಿ, ಎದುರಾಳಿಗಳ ವಿರುದ್ದ ಘರ್ಜಿಸುವ ಕೊಹ್ಲಿ ಈ ಬಾರಿ ಬೇಕಂತಲೇ ಯುವ ಆಟಗಾರನನ್ನು ಕೆಣಕಿ ವಾಗ್ವಾದಕ್ಕಿಳಿದಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ.
ಪಂದ್ಯದ ಹತ್ತನೇ ಓವರ್‌ನಲ್ಲಿ ಈ ಘಟನೆ ನಡೆದಿದೆ. ಸಿರಾಜ್ ಓವರ್ ಮುಗಿಯುತ್ತಿದ್ದಂತೆ ವಿರಾಟ್ ಕೊಹ್ಲಿ ಚೆಂಡನ್ನು ಕೈಯಲ್ಲಿ ಹಿಡಿದು ಹೋಗುವಾಗ ಬೇಕಂತಲೇ ಸ್ಯಾಮ್ ಕೊನ್‌ಸ್ಟಾಸ್ ಅವರರಿಗೆ ಡಿಕ್ಕಿ ಹೊಡೆದಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರು ಆಟಗಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಕೂಡಲೇ ಅಂಪೈರ್ ಮತ್ತು ಉಸ್ಮಾನ್ ಖವಾಜಾ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.
ಆದರೆ, ಕೊಹ್ಲಿ ವರ್ತನೆಗೆ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಹಾಗೂ ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಪ್ರತಿಕ್ರಿಯಿಸಿದ್ದಾರೆ. ಅಲ್ಲದೇ ಒಂದು ವೇಳೆ ಈ ಘಟನೆಯ ಬಗ್ಗೆ ಐಸಿಸಿ ರೆಫರಿ ಕ್ರಮ ಕೈಗೊಂಡರೆ ಏನಾಗುತ್ತದೆ ಎಂಬುದು ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
FIRST SIX AGAINST BUMRAH IN TEST CRICKET AFTER 4,483 BALLS. 🥶
— Mufaddal Vohra (@mufaddal_vohra) December 26, 2024
Sam Konstas, 19 year old, on debut - part of the history. 🤯pic.twitter.com/ZTATUCje5c
ನಿಯಮಗಳ ಪ್ರಕಾರ, ಯಾವುದೇ ಆಟಗಾರನು ಉದ್ದೇಶಪೂರ್ವಕವಾಗಿ ಸಹಾಯಕ ಸಿಬ್ಬಂದಿ, ಅಂಪೈರ್ ಮ್ಯಾಚ್ ರೆಫರಿ ಅಥವಾ ಆಟಗಾರರ ವಿರುದ್ದ ದೈಹಿಕವಾಗಿ ಘರ್ಷಣೆಗಿಳಿದರೇ ಅಥವಾ ನಿಂದಿಸಿದರೇ ICC ಆರ್ಟಿಕಲ್ 2.12ರ ಅಡಿಯಲ್ಲಿ ಶಿಕ್ಷೆಗೆ ಗುರಿಯಾಗುತ್ತಾರೆ. ಈ ನಿಯಮದ ಪ್ರಕಾರ, 3-4 ಡಿಮೆರಿಟ್ ಅಂಕಗಳನ್ನು ಪಡೆಯುವುದರ ಜೊತೆಗೆ ಒಂದು ಪಂದ್ಯದಿಂದ ನಿಷೇಧ ವಿಧಿಸಬಹುದು ಅಥವಾ ದಂಡಕ್ಕೆ ಅವಕಾಶ ಇರುತ್ತದೆ.
ಇದನ್ನೂ ಓದಿ: ಚೊಚ್ಚಲ ಪಂದ್ಯದಲ್ಲಿ ಕೊನ್‌ಸ್ಟಾಸ್ ಅಬ್ಬರ: ಭೋಜನ ವಿರಾಮದ ವೇಳೆಗೆ 1 ವಿಕೆಟ್ ನಷ್ಟಕ್ಕೆ 112 ರನ್ ಗಳಿಸಿದ ಆಸ್ಟ್ರೇಲಿಯಾ